Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗ್ರಾಮ ಪಂಚಾಯಿತಿ ಚುನಾವಣೆ: ಮತ್ತೆ ಕಾಲಾವಕಾಶ ಕೇಳಿದ ಸರ್ಕಾರ!
ಕರ್ನಾಟಕಪ್ರಮುಖ

ಗ್ರಾಮ ಪಂಚಾಯಿತಿ ಚುನಾವಣೆ: ಮತ್ತೆ ಕಾಲಾವಕಾಶ ಕೇಳಿದ ಸರ್ಕಾರ!

Share
2 Min Read
SHARE

 

Personal Health ಇದೇನಿದು‌ ಮೌತ್ ಕಾಂಡೋಮ್? ಓರಲ್ ಕ್ಯಾನ್ಸರ್‌ಗೆ ಕಡಿವಾಣ ಹಾಕುತ್ತಾ?

newsics.com

ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಪ್ರಸ್ತುತ ಜನಸಂಖ್ಯೆಗೆ ಅನುಗುಣವಾಗಿ ಸದಸ್ಯರ ಸಂಖ್ಯೆಯನ್ನು ಮರುನಿಗದಿಪಡಿಸಲು ನಾಲ್ಕು ವಾರಗಳ ಕಾಲಾವಕಾಶ ನೀಡುವಂತೆ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮನವಿ ಮಾಡಿದೆ.

ಅವಧಿ ಮುಗಿದ 5,950 ಗ್ರಾಮ ಪಂಚಾಯಿತಿಗಳು ಹಾಗೂ 187 ನಗರ ಸ್ಥಳೀಯ ಸಂಸ್ಥೆಗಳಿಗೆ ಸಮಯಕ್ಕೆ ಸರಿಯಾಗಿ ಸಾರ್ವತ್ರಿಕ ಚುನಾವಣೆ ನಡೆಸಲು ಅನುಕೂಲವಾಗುವಂತೆ ಅಂತಿಮ ಮೀಸಲಾತಿ ಅಧಿಸೂಚನೆ ಹೊರಡಿಸಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರ ವಿಭಾಗೀಯ ಪೀಠ ನಡೆಸಿತು.

ಸರ್ಕಾರದ ಪರ ವಕೀಲರು ವಾದ ಮಂಡಿಸಿ, ರಾಜ್ಯದಲ್ಲಿ 5,950 ಗ್ರಾಮ ಪಂಚಾಯಿತಿಗಳಿದ್ದು, ಸುಮಾರು 96 ಸಾವಿರಕ್ಕೂ ಹೆಚ್ಚು ಸದಸ್ಯರಿದ್ದಾರೆ. ಹೊಸ ಜನಸಂಖ್ಯೆ ಆಧಾರದ ಮೇಲೆ ಸದಸ್ಯರ ಸಂಖ್ಯೆಯನ್ನು ಮರುನಿಗದಿ ಮಾಡಬೇಕಾಗಿರುವುದರಿಂದ ನಾಲ್ಕು ವಾರಗಳ ಕಾಲಾವಕಾಶ ಅಗತ್ಯವಿದೆ ಎಂದು ತಿಳಿಸಿದರು.

ಈ ಪ್ರಕ್ರಿಯೆ ಬಳಿಕ ಮೀಸಲಾತಿ ನಿಗದಿಪಡಿಸಿ ಅಂತಿಮ ಪಟ್ಟಿಯನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಲು ಕನಿಷ್ಠ ಮೂರು ತಿಂಗಳು ಬೇಕಾಗುತ್ತದೆ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.

ಇದಲ್ಲದೆ, ಗ್ರಾ.ಪಂ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಸರ್ಕಾರ ಕೈಗೊಂಡಿರುವ ಕ್ರಮಗಳ ವಿವರವನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಈ ವರ್ಷದ ಜನವರಿಯಲ್ಲಿ ಅವಧಿ ಮುಗಿದ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸುವ ಸಿದ್ಧತೆಗಾಗಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು ಎಂದು ಸರ್ಕಾರ ತಿಳಿಸಿದೆ.

ಪ್ರಸ್ತುತ ಜನಗಣತಿ ಆಧಾರದ ಮೇಲೆ ಪ್ರತಿ ಗ್ರಾಮ ಪಂಚಾಯಿತಿಗೆ ಸದಸ್ಯರ ಸಂಖ್ಯೆಯನ್ನು ನಿಗದಿಪಡಿಸಲು ಕರ್ನಾಟಕ ರಾಜ್ಯ ಕ್ಷೇತ್ರ ಮರುವಿಂಗಡಣಾ ಆಯೋಗಕ್ಕೆ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಸೂಚಿಸಲಾಗಿದೆ. ಜಿಲ್ಲಾಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲು ಎರಡು ವಾರ, ಆಯೋಗದಿಂದ ಪರಿಶೀಲನೆ ಹಾಗೂ ಶಿಫಾರಸು ಮಾಡಲು ಒಂದು ವಾರ ಮತ್ತು ಸರ್ಕಾರದಿಂದ ಅಂತಿಮ ನಿರ್ಧಾರಕ್ಕೆ ಮತ್ತೊಂದು ವಾರ ಬೇಕಾಗುತ್ತದೆ ಎಂದು ವಾದಿಸಲಾಯಿತು.

ಸದಸ್ಯರ ಅಂತಿಮ ಸಂಖ್ಯೆಯನ್ನು ನಿಗದಿಪಡಿಸಿದ ಬಳಿಕ, ಎಸ್ಸಿ, ಎಸ್ಟಿ, ಹಿಂದುಳಿದ ವರ್ಗಗಳು ಹಾಗೂ ಮಹಿಳೆಯರಿಗೆ ಮೀಸಲಾತಿ ನಿಗದಿಪಡಿಸುವ ಪ್ರಕ್ರಿಯೆ ಆರಂಭವಾಗಲಿದೆ. ಈ ಸಂಪೂರ್ಣ ಪ್ರಕ್ರಿಯೆ ಪೂರ್ಣಗೊಳ್ಳಲು ಕನಿಷ್ಠ ಮೂರು ತಿಂಗಳು ಬೇಕಾಗಬಹುದು ಎಂದು ಸರ್ಕಾರ ತಿಳಿಸಿದೆ. ಈ ವಿಚಾರಗಳನ್ನು ದಾಖಲಿಸಿಕೊಂಡ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಏಪ್ರಿಲ್ 29ಕ್ಕೆ ಮುಂದೂಡಿದೆ.

ಬಿಗಿಯಾದ ಜೀನ್ಸ್ ಹಾಕಿದ್ರೆ ಮಕ್ಕಳಾಗಲ್ವಾ? ಸಂಶೋಧನೆ ಏನು ಹೇಳುತ್ತೆ?

16,706 ಕೋಟಿ ರೂಪಾಯಿಗೆ ಮಾರಾಟವಾದ RCB: ಹೊಸ ಮಾಲೀಕರು ಯಾರು?

 

ಅಜಿತ್ ಪವಾರ್ ವಿಮಾನ ಅಪಘಾತ ಆಕಸ್ಮಿಕವಲ್ಲ, ವ್ಯವಸ್ಥಿತ ಕೊಲೆ?

ಎಲ್ಲ ಹೆಣ್ಮಕ್ಕಳ ಜತೆಯೂ ಪ್ರೇಮದ ನಾಟಕ, ಸೆಕ್ಯುರಿಟಿ ಏಜನ್ಸಿ ಹೆಸರಲ್ಲಿ ಮೋಸದಾಟ!

Personal Health ಇದೇನಿದು‌ ಮೌತ್ ಕಾಂಡೋಮ್? ಓರಲ್ ಕ್ಯಾನ್ಸರ್‌ಗೆ ಕಡಿವಾಣ ಹಾಕುತ್ತಾ?

 

TAGGED:Gram Panchayat elections: Government asks for more time again!
Share This Article
Facebook Twitter Copy Link Print
Previous Article ಎಲ್ಲ ಹೆಣ್ಮಕ್ಕಳ ಜತೆಯೂ ಪ್ರೇಮದ ನಾಟಕ, ಸೆಕ್ಯುರಿಟಿ ಏಜನ್ಸಿ ಹೆಸರಲ್ಲಿ ಮೋಸದಾಟ!
Next Article ದೇಶಾದ್ಯಂತ ನೈಸರ್ಗಿಕ ಅನಿಲ ಪೈಪ್‌ಲೈನ್ ಜಾಲ ಬಲಪಡಿಸಲು ಕೇಂದ್ರದ ಖಡಕ್ ಆದೇಶ

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?