Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಭಾರತ ಸೇರಿ ಮಿತ್ರ ರಾಷ್ಟ್ರಗಳಿಗೆ ಹೊರ್ಮುಜ್ ಮುಕ್ತ ಎಂದ ಇರಾನ್ ಅಧಿಕೃತ ಹೇಳಿಕೆ
ದೇಶಪ್ರಮುಖವಿದೇಶ

ಭಾರತ ಸೇರಿ ಮಿತ್ರ ರಾಷ್ಟ್ರಗಳಿಗೆ ಹೊರ್ಮುಜ್ ಮುಕ್ತ ಎಂದ ಇರಾನ್ ಅಧಿಕೃತ ಹೇಳಿಕೆ

Share
1 Min Read
SHARE

newsics.com

ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧ ಆರಂಭವಾಗಿ ಒಂದು ತಿಂಗಳು ಕಳೆಯುತ್ತಿದೆ. ಇರಾನ್ ಹೊರ್ಮುಜ್ ಜಲಸಂಧಿಯನ್ನು ಮುಚ್ಚಿರುವುದು ಜಾಗತಿಕ ಬಿಕ್ಕಟ್ಟಾಗಿ ಪರಿಣಮಿಸಿದೆ. ಈ ನಡುವೆ, ಹೊರ್ಮುಜ್ ಜಲಸಂಧಿಯನ್ನು ಶತ್ರುಗಳಿಗೆ ಮಾತ್ರ ಮುಚ್ಚಲಾಗಿದ್ದು, ಚೀನಾ, ರಷ್ಯಾ, ಭಾರತ, ಇರಾಕ್ ಮತ್ತು ಪಾಕಿಸ್ತಾನ ಸೇರಿದಂತೆ ಮಿತ್ರ ರಾಷ್ಟ್ರಗಳಿಗೆ ಮುಕ್ತಗೊಳಿಸಲಾಗಿದೆ ಎಂದು ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಹೇಳಿದ್ದಾರೆ.

ಚೀನಾ, ರಷ್ಯಾ, ಭಾರತ, ಇರಾಕ್ ಮತ್ತು ಪಾಕಿಸ್ತಾನ ಸೇರಿದಂತೆ ಮಿತ್ರ ರಾಷ್ಟ್ರಗಳ ಹಡುಗುಗಳಿಗೆ ಹೊರ್ಮುಜ್ ಜಲಸಂಧಿಯ ಮೂಲಕ ಸಂಚಾರಕ್ಕೆ ಅನುಮತಿಸಿದ್ದೇವೆ’ಎಂದು ಅರಾಘ್ಚಿ ಹೇಳಿರುವುದಾಗಿ ಮುಂಬೈನಲ್ಲಿರುವ ಇರಾನ್ ಕಾನ್ಸುಲೇಟ್ ಜನರಲ್ ಹಂಚಿಕೊಂಡ ಪೋಸ್ಟ್‌ನಲ್ಲಿ ತಿಳಿಸಲಾಗಿದೆ.

ವಿಶ್ವದ ತೈಲ ಮತ್ತು ದ್ರವೀಕೃತ ನೈಸರ್ಗಿಕ ಅನಿಲದ(ಎನ್‌ಎನ್‌ಜಿ) ಸುಮಾರು ಶೇ 20ರಷ್ಟು ಸಾಗಾಟವು ಹೊರ್ಮುಜ್ ಜಲಸಂಧಿಯ ಮೂಲಕ ಆಗುತ್ತದೆ. ಇದು ಜಾಗತಿಕ ಇಂಧನ ಪೂರೈಕೆಯಲ್ಲಿ ಅತ್ಯಂತ ನಿರ್ಣಾಯಕ ಮಾರ್ಗಗಳಲ್ಲಿ ಒಂದಾಗಿದೆ.

‘ನಮ್ಮ ದೃಷ್ಟಿಕೋನದಲ್ಲಿ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ. .ಶತ್ರುಗಳಿಗೆ ಮಾತ್ರ ಸಂಪೂರ್ಣ ಮುಚ್ಚಲ್ಪಟ್ಟಿದೆ’ ಎಂದು ಅರಾಘ್ಚಿ ಇರಾನ್‌ನ ಟಿವಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. ನಮ್ಮ ಶತ್ರುಗಳು ಮತ್ತು ಅವರ ಮಿತ್ರರಾಷ್ಟ್ರಗಳ ಹಡಗುಗಳಿಗೆ ಹಾದುಹೋಗಲು ಅವಕಾಶ ನೀಡುವುದಕ್ಕೆ ಯಾವುದೇ ಕಾರಣವಿಲ್ಲ ಎಂದಿದ್ದಾರೆ.

ಸ್ನೇಹಪರ ರಾಷ್ಟ್ರಗಳ ಹಡಗುಗಳಿಗೆ ಇರಾನ್‌ನ ಸಶಸ್ತ್ರ ಪಡೆಗಳು ಈಗಾಗಲೇ ಸುರಕ್ಷಿತ ಸಂಚಾರಕ್ಕೆ ಅನುವು ಮಾಡಿಕೊಟ್ಟಿವೆ ಎಂದು ಅವರು ಹೇಳಿದ್ದಾರೆ.

ಇದಕ್ಕೂ ಮೊದಲು, ಅಮೆರಿಕ, ಇಸ್ರೇಲ್ ಅಥವಾ ಅವರ ಮಿತ್ರರಾಷ್ಟ್ರಗಳಿಗೆ ಸಂಬಂಧಿಸಿದ ಹಡಗುಗಳಲ್ಲಿ ಒಂದು ಲೀಟರ್ ತೈಲ ಸಾಗಾಟಕ್ಕೂ ಅನುಮತಿ ನೀಡುವುದಿಲ್ಲ ಎಂದು ಇರಾನ್ ಹೇಳಿತ್ತು.

ಜಾಗತಿಕ ಇಂಧನ ಪೂರೈಕೆ ಅಡಚಣೆಗಳ ನಡುವೆ ಹೊರ್ಮುಜ್ ಜಲಸಂಧಿಯನ್ನು ಮತ್ತೆ ಮುಕ್ತಗೊಳಿಸುವಂತೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಒತ್ತಾಯಿಸಿದ ಬೆನ್ನಲ್ಲೇ ಅರಾಘ್ಚಿ ಹೇಳಿಕೆ ಬಂದಿದೆ.

Professor’s propose ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿಗೆ ಪ್ರೊಫೆಸರ್ ಪ್ರಪೋಸ್: ಗೃಹಸಚಿವ ಪರಮೇಶ್ವರ ಒಡೆತನದ ಕಾಲೇಜಲ್ಲಿ ವಿದ್ಯಾರ್ಥಿಗಳಿಂದ ದಾಂದಲೆ

ಅನಿಲ ಅಭಾವ: ಹೆಚ್ಚುವರಿ ಹಣ ವಸೂಲಿ ಮಾಡದಂತೆ ಹೋಟೆಲ್‌ಗಳಿಗೆ ಕೇಂದ್ರ ಸರ್ಕಾರ ಸೂಚನೆ

RSS selling pure milk ಶುದ್ಧ ಹಾಲಿನ‌ ಮಾರಾಟಕ್ಕಿಳಿದ ಆರೆಸ್ಸೆಸ್: ಇಂದಿನಿಂದ ಪ್ರಾಯೋಗಿಕ ಆರಂಭ

Lockdown info ದೇಶದಲ್ಲಿ ಲಾಕ್‌ಡೌನ್: ಕೇಂದ್ರ ಸರ್ಕಾರ ಹೇಳಿದ್ದೇನು?

TAGGED:Iran's official statement that Hormuz is open to allied countries including India
Share This Article
Facebook Twitter Copy Link Print
Previous Article Professor’s propose ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿಗೆ ಪ್ರೊಫೆಸರ್ ಪ್ರಪೋಸ್: ಗೃಹಸಚಿವ ಪರಮೇಶ್ವರ ಒಡೆತನದ ಕಾಲೇಜಲ್ಲಿ ವಿದ್ಯಾರ್ಥಿಗಳಿಂದ ದಾಂದಲೆ
Next Article Horse riding ಪೆಟ್ರೋಲ್ ಸಿಗದೆ ಕುದುರೆ ಏರಿ ಬಂದ ಬ್ಯಾಂಕ್ ಉದ್ಯೋಗಿ!

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?