Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಿಶ್ವ ನಾಯಕರ ಪಟ್ಟಿಯಲ್ಲಿ ಮೋದಿಯೇ ಕಿಂಗ್
ದೇಶಪ್ರಮುಖವಿದೇಶ

ವಿಶ್ವ ನಾಯಕರ ಪಟ್ಟಿಯಲ್ಲಿ ಮೋದಿಯೇ ಕಿಂಗ್

Share
1 Min Read
SHARE

newsics.com

ನವದೆಹಲಿ: ಭಾರತದ ಪ್ರಧಾನಿ  ನರೇಂದ್ರ ಮೋದಿ ಅವರ ಜನಪ್ರಿಯತೆ ಗಡಿ ದಾಟಿ ಜಾಗತಿಕ ಮಟ್ಟದಲ್ಲಿ ಹೊಸ ಎತ್ತರಕ್ಕೇರಿದೆ. ಅಮೆರಿಕದ ಡೇಟಾ ವಿಶ್ಲೇಷಣಾ ಸಂಸ್ಥೆ ಮಾರ್ನಿಂಗ್ ಕನ್ಸಲ್ಟ್‌ನ ಇತ್ತೀಚಿನ ಸಮೀಕ್ಷೆಯ ಪ್ರಕಾರ, ಪ್ರಧಾನಿ ಮೋದಿ ಶೇ. 68 ರಷ್ಟು ಅನುಮೋದನೆಯೊಂದಿಗೆ ಮೊದಲ ಸ್ಥಾನವನ್ನು ಅಲಂಕರಿಸಿದ್ದಾರೆ. ಇತ್ತ ಅಮೆರಿಕದ ಪ್ರಭಾವಿ ನಾಯಕ ಡೊನಾಲ್ಡ್ ಟ್ರಂಪ್ ಸೇರಿದಂತೆ ಹಲವು ಗಣ್ಯರು ಅಗ್ರ 10ರ ಪಟ್ಟಿಯಿಂದ ಹೊರಬಿದ್ದಿರುವುದು ಕುತೂಹಲ ಮೂಡಿಸಿದೆ.

 

ಮಾರ್ಚ್ 2 ರಿಂದ 8 ರವರೆಗೆ ಮಾರ್ನಿಂಗ್ ಕನ್ಸಲ್ಟ್ ನಡೆಸಿದ ಸಮೀಕ್ಷೆಯು ಇತರ ಜಾಗತಿಕ ನಾಯಕರ ಸ್ಥಾನಮಾನವನ್ನು ಬಹಿರಂಗಪಡಿಸಿದ್ದು, ಅದರಲ್ಲಿ, ಸ್ವಿಟ್ಜರ್ಲೆಂಡ್‌ನ ಗೈ ಪಾರ್ಮೆಲಿನ್ ಹಾಗೂ ದಕ್ಷಿಣ ಕೊರಿಯಾದ ಲೀ ಜೇ-ಮ್ಯುಂಗ್ ತಲಾ ಶೇ. 62 ರಷ್ಟು ಅನುಮೋದನೆ ರೇಟಿಂಗ್ ಪಡೆದು ಎರಡನೇ ಸ್ಥಾನದಲ್ಲಿದ್ದಾರೆ. ಜೆಕ್ ಗಣರಾಜ್ಯದ ಆಂಡ್ರೆಜ್ ಬಾಬಿಸ್ ಶೇ. 57 ಮತ್ತು ಅರ್ಜೆಂಟೀನಾದ ಜೇವಿಯರ್ ಮೆಲ್ಲಿ ಶೇ. 56 ಬೆಂಬಲದೊಂದಿಗೆ ನಂತರದ ಸ್ಥಾನಗಳನ್ನು ಪಡೆದಿದ್ದಾರೆ. ಜಪಾನ್‌ನ ಸನೇ ತಕೈಚಿ ಹಾಗೂ ಕೆನಡಾದ ಮಾರ್ಕ್ ಕಾರ್ನಿ ಕೂಡ ಶೇ. 56 ರಷ್ಟು ಅನುಮೋದನೆ ಪಡೆದಿದ್ದಾರೆ.

ಈ ಪಟ್ಟಿಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಗ್ರ 10 ಸ್ಥಾನದಲ್ಲೂ ಕಾಣಿಸಿಕೊಳ್ಳಲಿಲ್ಲ. ಅವರಿಗೆ ಕೇವಲ ಶೇ. 39 ರಷ್ಟು ಅನುಮೋದನೆ ಸಿಕ್ಕಿದ್ದು, ಶೇ. 55 ರಷ್ಟು ಜನರು ವಿರೋಧ ವ್ಯಕ್ತಪಡಿಸಿದ್ದಾರೆ. ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಶೇ. 24 ಮತ್ತು ಜರ್ಮನಿಯ ಫ್ರೆಡ್ರಿಕ್ ಮೆರ್ಜ್ ಶೇ. 20 ರಷ್ಟು ಬೆಂಬಲ ಪಡೆದಿದ್ದಾರೆ. ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಕೇವಲ ಶೇ. 17 ರಷ್ಟು ಅನುಮೋದನೆಯೊಂದಿಗೆ ಪಟ್ಟಿಯಲ್ಲಿ ಹಿಂಬದಿಯಲ್ಲಿದ್ದಾರೆ.

ಜಾಗತಿಕ ಜನಪ್ರಿಯತೆಗೆ ಜೊತೆಯಾಗಿ ಪ್ರಧಾನಿ ಮೋದಿ ಭಾರತೀಯ ರಾಜಕೀಯದಲ್ಲೂ ಮಹತ್ವದ ಸಾಧನೆ ಮಾಡಿದ್ದಾರೆ. ಗುಜರಾತ್ ಮುಖ್ಯಮಂತ್ರಿ ಹಾಗೂ ಭಾರತದ ಪ್ರಧಾನಿಯಾಗಿ ಒಟ್ಟು 8,931 ದಿನಗಳ ಸೇವೆ ಸಲ್ಲಿಸಿದ್ದು, ಇದು ಸ್ವತಂತ್ರ ಭಾರತದ ಇತಿಹಾಸದಲ್ಲಿ ದೀರ್ಘಾವಧಿಯ ನಾಯಕತ್ವದ ದಾಖಲೆಯಾಗಿದೆ.

https://www.newsics.com/2026/03/26/terrorist-links-12-accused-including-one-from-karnataka-arrested/

TAGGED:Modi is the king among world leaders
Share This Article
Facebook Twitter Copy Link Print
Previous Article ಉಗ್ರರ ನಂಟು ; ಕರ್ನಾಟಕದ ಓರ್ವ ಸೇರಿ 12 ಮಂದಿ ಆರೋಪಿಗಳು ಅರೆಸ್ಟ್.!
Next Article ಇರಾನ್ ಸೋಲೊಪ್ಪಿಕೊಳ್ಳದಿದ್ದರೆ ಟ್ರಂಪ್ ಹಿಂದೆಂದೂ ಕಾಣದಷ್ಟು ಕಠಿಣ ದಾಳಿಯನ್ನು ನಡೆಸಲು ಸಿದ್ಧರಾಗಿದ್ದಾರೆ : ಶ್ವೇತಭವನ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?