newsics.com
ಕೋಲಾರ : ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವು ಜಿಲ್ಲಾ ಕೋರ್ಟ್ ಗಳಿಗೆ ಸೇರಿದಂತೆ ಸರಕಾರಿ ಕಚೇರಿಗಳಿಗೆ ಕಿಡಿಗೇಡಿಗಳು ಬಾಂಬ್ ಬೆದರಿಕೆ ಇಮೇಲ್ ಸಂದೇಶ ಕಳುಸಿದ್ದ ಪ್ರಕರಣಗಳು ನಡೆದಿದ್ದವು.
ಇದೀಗ ಕೋಲಾರ ಆರ್ ಟಿ ಓ ಕಚರಿಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ. ಕಿಡಿಗೇಡಿಗಳು ಆರ್ಟಿಓ ಕಚೇರಿಯಲ್ಲಿ ಬಾಂಬ್ ಇಟ್ಟಿರುವುದಾಗಿ ಸಂದೇಶ ಕಳುಹಿಸಿದ್ದಾರೆ.
ಅಪರಿಚಿತ ಇಮೇಲ್ ಐಡಿ ಇಂದ ಈ ಒಂದು ಬೆದರಿಕೆ ಸಂದೇಶ ಬಂದಿದೆ. ಘಟನಾ ಸ್ಥಳಕ್ಕೆ ಶ್ವಾನದಳ ಮತ್ತು ಬಾಮನಿಷ್ ಕ್ರಿಯಾ ಗಳ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕೋಲಾರ ನಗರ ಪೋಲಿಸರಿಂದಲೂ ಆರ್ಟಿಓ ಕಚೇರಿಯಲ್ಲಿ ತಪಾಸಣೆ ನಡೆಸಲಾಗುತ್ತಿದೆ.