ಸಿಎಂ ಕಾರ್ಯಕ್ರಮದಿಂದ ಹಿಂದಿರುಗುತ್ತಿದ್ದ ಬಸ್ ಅಪಘಾತ; 10 ಮಂದಿ ಮೃತ

newsics.com ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಭಾಗವಹಿಸಿದ್ದ ಕಾರ್ಯಕ್ರಮದಿಂದ ಹಿಂದಿರುಗುತ್ತಿದ್ದ ಬಸ್ ಅಪಘಾತವಾಗಿದ್ದು, ಮೂವರು ಮಹಿಳೆಯರು ಸೇರಿ 10 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಚಿಂದ್ವಾರದಲ್ಲಿ ನಡೆದಿದೆ. ಜಿಲ್ಲಾ ಕೇಂದ್ರದಿಂದ ಸುಮಾರು 25 ಕಿ.ಮೀ ದೂರದಲ್ಲಿರುವ ನಾಗ್ಪುರ ರಸ್ತೆಯ ಸಿಮಾರಿಯಾ ಬಳಿ ಬಸ್ ಪಿಕ್-ಅಪ್ ವಾಹನಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತ ಸಂಭವಿಸಿದಾಗ ಬಸ್‌ನಲ್ಲಿ 47 ಪ್ರಯಾಣಿಕರಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ, ಮೃತರಲ್ಲಿ ಆರು ಪುರುಷರು, ಮೂವರು ಮಹಿಳೆಯರು ಮತ್ತು ಒಂದು ಮಗು ಸೇರಿದ್ದಾರೆ. … Continue reading ಸಿಎಂ ಕಾರ್ಯಕ್ರಮದಿಂದ ಹಿಂದಿರುಗುತ್ತಿದ್ದ ಬಸ್ ಅಪಘಾತ; 10 ಮಂದಿ ಮೃತ