newsics.com
ಗೋವಾ : ಕರ್ನಾಟಕದಲ್ಲಿ ಪ್ರಜ್ವಲ್ ರೇವಣ್ಣ ಪ್ರಕರಣ ಭಾರಿ ಕೋಲಾಹಲ ಸೃಷ್ಟಿಸಿತ್ತು. ಹಲವು ಮಹಿಳೆಯರ ಮೇಲೆ ಅತ್ಯಾ**ರ ಎಸಗಿ ವಿಡಿಯೋ ರೆಕಾರ್ಡ್ ಮಾಡಿದ್ದ ಪ್ರಕರಣ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು.
ಇದೇ ರೀತಿ ಬಿಜೆಪಿ ಮುಖಂಡನೊಬ್ಬನ ಪುತ್ರನ ಪ್ರಕರಣ ಬಯಲಾಗಿದೆ. 30 ಅಪ್ರಾಪ್ತ ಬಾಲಕಿಯರನ್ನು ಬಲವಂತವಾಗಿ ಕಾಮತೃಷೆಗೆ ಬಳಸಿಕೊಂಡಿದ್ದಾನೆ. ಈ ಕೃತ್ಯವನ್ನೇ ಈತನೇ ವಿಡಿಯೋ ಮಾಡಿ ಬಳಿಕ ಬ್ಲಾಕ್‌ಮೇಲ್ ಮಾಡುವ, ಬೆದರಿಸುವ ತಂತ್ರ ಪ್ರಯೋಗಿಸಿ ಕಳೆದ ಮೂರು ವರ್ಷದಿಂದ ರಾಜಾರೋಷವಾಗಿ ತಿರುಗಾಡುತ್ತಿದ್ದ ಕಾಮುಕ ಆರೋಪಿಯನ್ನು ಅರೆಸ್ಟ್ ಮಾಡಿದ ಘಟನೆ ಗೋವಾದಲ್ಲಿ ನಡೆದಿದೆ..
ಬಂಧಿತ ಯುವಕನನ್ನು 20 ವರ್ಷದ ಸೋಹಮ್ ಸುಶಾಂತ್ ನಾಯ್ಕ್ ಎಂದು ಗುರುತಿಸಲಾಗಿದೆ. ಈ ಪ್ರಕರಣದ ವಿವರವಾದ ತನಿಖೆಗಾಗಿ ಈ ಪ್ರಕರಣವನ್ನು ಈಗ ಗೋವಾದ ಅಪರಾಧ ಶಾಖೆಗೆ ವರ್ಗಾಯಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಮೂರು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಸಂತ್ರಸ್ತರ ಹೇಳಿಕೆಗಳನ್ನು ದಾಖಲಿಸಲಾಗಿದ್ದು, ಆರೋಪಿಗಳು ಹಾಗೂ ಸಂತ್ರಸ್ತರು ಇಬ್ಬರೂ ಘಟನೆ ನಡೆದ ಸಮಯದಲ್ಲಿ ಅಪ್ರಾಪ್ತರಾಗಿದ್ದರು ಎಂಬುದು ತನಿಖೆಯಿಂದ ತಿಳಿದು ಬಂದಿದೆ. ಪ್ರಕರಣವು ಮೂರು ವರ್ಷಗಳ ಹಿಂದೆ ಕಾಲೇಜಿನಲ್ಲಿ ಓದುತ್ತಿದ್ದಾಗ ನಡೆದಿದೆ ಎನ್ನಲಾಗಿದೆ. ಆರೋಪಿ ಸೋಹಮ್ ಸುಶಾಂತ್ ನಾಯ್ಕ್ ಕಾಕೋರಾದ ಮಧೇಗಲ್ ನಿವಾಸಿ ಮತ್ತು ಕರ್ಚೋರೆಮ್ ಕಾಕೋರಾ ಮುನ್ಸಿಪಲ್ ಕೌನ್ಸಿಲ್‌ನ ಕೌನ್ಸಿಲರ್ ಒಬ್ಬರ ಪುತ್ರನಾಗಿದ್ದಾನೆ.
ಗೆಳೆಯರೊಂದಿಗೆ ಪಾರ್ಟಿ, ಸುತ್ತಾಟ , ಅಪ್ರಾಪ್ತ ಬಾಲಕಿಯನ್ನು ಬೆದರಿಸಿ ತನ್ನ ಕಾಮತೃಷೆಗೆ ಬಳಸಿಕೊಳ್ಳುತ್ತಿರುವುದೇ ಈತನ ಹವ್ಯಾಸವಾಗಿತ್ತು. ಕಳೆದ ಮೂರು ವರ್ಷದಿಂದ ಈತ ಇದನ್ನೇ ವೃತ್ತಿಯಾಗಿ ಸ್ವೀಕರಿಸಿದ್ದ. ಕಳೆದ ವಾರ ಮದ್ಯದ ನಶೆಯಲ್ಲಿ ಗೆಳೆಯರಿಗೆ ತನ್ನ ಕೆಲ ವಿಡಿಯೋಗಳನ್ನು ಫಾರ್ವಡ್ ಮಾಡಿದ್ದ. ಹೀಗೆ ಫಾರ್ವಡ್ ಮಾಡಿದ ಬೆನ್ನಲ್ಲೇ ವಿಡಿಯೋಗಳು ವ್ಯಾಟ್ಸಾಪ್ ಮೂಲಕ ಹರಿದಾಡಲು ಆರಂಭಗೊಂಡಿತ್ತು. ಇದು ಸಾರ್ವಜನಿಕ ವಲಯದಲ್ಲಿ ಆತಂಕ ತಂದಿತ್ತು. ಹಲವು ಅಪ್ರಾಪ್ತ ಬಾಲಕಿಯರು ಈತನ ಕಾಮಕ್ಕೆ ಬಲಿಯಾಗಿದ್ದರು
ಅಪ್ರಾಪ್ತೆಯರ ಲೈಂಗಿಕ ಶೋಷಣೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾದ ನಂತರ ಆತನನ್ನು ಬಂಧಿಸಲಾಗಿದೆ. ಸ್ಥಳೀಯರು ಪೊಲೀಸ್ ಠಾಣೆಯ ಹೊರಗೆ ಜಮಾಯಿಸಿ ತಕ್ಷಣ ಆತನ ವಿರುದ್ಧಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದರು. ಆರಂಭದಲ್ಲಿ ಈತನ ವಿರುದ್ಧ ಒಂದು ಪ್ರಕರಣ ದಾಖಲಾಗಿತ್ತು. ನಂತರದ ಹೇಳಿಕೆಗಳ ಆಧಾರದ ಮೇಲೆ ಇನ್ನೂ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ದಕ್ಷಿಣ ಗೋವಾ ಎಸ್‌ಪಿ ಸಂತೋಷ್ ದೇಸಾಯಿ ತಿಳಿಸಿದ್ದಾರೆ. ರಾಜ್ಯದ ಪರವಾಗಿ ಮೊದಲ ಎಫ್‌ಐಆರ್ ದಾಖಲಿಸಲಾಗಿದೆ. ಪ್ರಸ್ತುತ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಇತರ ಹಲವರನ್ನು ಸಹ ವಿಚಾರಣೆ ನಡೆಸಲಾಗುತ್ತಿದೆ.
ತನಿಖೆಯನ್ನು ಪರಿಶೀಲಿಸಿದ ಉಪ ಪೊಲೀಸ್ ಮಹಾನಿರ್ದೇಶಕಿ ವರ್ಷಾ ಶರ್ಮಾ, ಸಂತ್ರಸ್ತರ ಹೇಳಿಕೆಯ ಆಧಾರದ ಮೇಲೆ ಹೆಚ್ಚುವರಿ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಆರೋಪಿಯ ಮೊಬೈಲ್ ಫೋನ್ ಅನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಹೇಳಿದರು.
https://www.newsics.com/2026/03/27/bus-accident-mother-burns-after-throwing-son-out-of-window/