Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಸ್ನೇಹದಲ್ಲಿ ಬಿರುಕು ಮೂಡಿತೇ? ರಾಜ್ ಬಿ ಶೆಟ್ಟಿ, ರುಕ್ಮಿಣಿ ಅನ್‌ಫಾಲೋ ಮಾಡಿದ ರಿಷಬ್ ಶೆಟ್ಟಿ!
ಕರ್ನಾಟಕಪ್ರಮುಖಮನರಂಜನೆ

ಸ್ನೇಹದಲ್ಲಿ ಬಿರುಕು ಮೂಡಿತೇ? ರಾಜ್ ಬಿ ಶೆಟ್ಟಿ, ರುಕ್ಮಿಣಿ ಅನ್‌ಫಾಲೋ ಮಾಡಿದ ರಿಷಬ್ ಶೆಟ್ಟಿ!

Share
1 Min Read
SHARE

https://youtube.com/shorts/7-1-Ue0Sh8o?si=IPl4cpVzjeJG3YdO

newsics.com

ಅದ್ಯಾಕೋ ‘ಕಾಂತಾರ’ ಚಿತ್ರತಂಡ ಗೊಂದಲದ ಗೂಡಾಗಿದೆ. ಹೊಂಬಾಳೆ ಫಿಲ್ಮ್ಸ್ ಸಂಸ್ಥೆ, ರಿಷಬ್ ಶೆಟ್ಟಿ ನಡುವೆ ಎಲ್ಲವೂ ಸರಿಯಿಲ್ಲ ಎನ್ನುವ ಊಹಾಪೋಹ ಶುರುವಾಗಿದೆ. ‘ಹೊಂಬಾಳೆ ಫಿಲ್ಮ್ಸ್’ ಹಾಗೂ ‘ಕಾಂತಾರ’ ಇನ್‌ಸ್ಟಾಗ್ರಾಮ್‌ ಖಾತೆಗಳನ್ನು ರಿಷಬ್ ಶೆಟ್ಟಿ ಅನ್‌ಫಾಲೋ ಮಾಡಿದ್ದಾರೆ. ರಾಜ್‌ ಬಿ ಶೆಟ್ಟಿ ಜೊತೆಗೂ ಅಷ್ಟಕ್ಕಷ್ಟೆ, ಎನ್ನುವಂತಾಗಿದೆ. ಅದಕ್ಕೆ ಅವರನ್ನು ಅನ್‌ಫಾಲೋ ಮಾಡಿದ್ದಾರೆ ಎನ್ನುವ ಚರ್ಚೆ ನಡೀತಿದೆ.

ಅಚ್ಚರಿ ಎನ್ನುವಂತೆ ಇದೀಗ ನಟಿ ರುಕ್ಮಿಣಿ ವಸಂತ್ ಅವರನ್ನು ಕೂಡ ರಿಷಬ್ ಶೆಟ್ಟಿ ಅನ್‌ಫಾಲೋ ಮಾಡಿದ್ದಾರೆ ಎನ್ನುವ ಸುದ್ದಿ ವೈರಲ್ ಆಗ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಕೆಲವರು ಪೋಸ್ಟ್ ಮಾಡುತ್ತಿದ್ದಾರೆ. ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿದ ‘ಕಾಂತಾರ- 1’ ಚಿತ್ರದಲ್ಲಿ ರುಕ್ಮಿಣಿ ನಾಯಕಿಯಾಗಿ ನಟಿಸಿದ್ದರು. ಸಿನಿಮಾ ಬ್ಲಾಕ್‌ಬಸ್ಟರ್ ಹಿಟ್ ಆಗಿದ್ದು ಗೊತ್ತೇಯಿದೆ. ರಿಷಬ್ ಶೆಟ್ಟಿ ಅವರ ಡಿಜಿಟಲ್ ಟೀಂ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯನ್ನು ಹ್ಯಾಂಡಲ್ ಮಾಡ್ತಿದೆ.

ಇವರಷ್ಟೇ ಅಲ್ಲದೆ, ಸುಮಾರು 40ಕ್ಕೂ ಹೆಚ್ಚು ಅಕೌಂಟ್‌ಗಳನ್ನು ರಿಷಬ್ ತಮ್ಮ ಪಟ್ಟಿಯಿಂದ ತೆಗೆದುಹಾಕಿದ್ದಾರೆ ಎನ್ನಲಾಗಿದೆ.

ಯುಗಾದಿ ಹಬ್ಬದಂದು ರಿಷಬ್ ‘2ನೇ ಅಧ್ಯಾಯ ಆರಂಭ’ ಎಂಬ ಪೋಸ್ಟರ್ ಹಂಚಿಕೊಂಡಿದ್ದರು. ಇದು ‘ಕಾಂತಾರ’ ಸರಣಿಯದ್ದೇ ಅಥವಾ ಅವರ ಮೊದಲ ಹಿಟ್ ಚಿತ್ರ ‘ಸರಕಾರಿ ಹಿರಿಯ ಪ್ರಾಥಮಿಕ ಶಾಲೆ’ಯ ಮುಂದುವರಿದ ಭಾಗವೇ ಎಂಬ ಗೊಂದಲ ಅಭಿಮಾನಿಗಳಲ್ಲಿದೆ. ಹೊಂಬಾಳೆ ಬ್ಯಾನರ್ ಬದಲಿಗೆ ರಿಷಬ್ ತಮ್ಮದೇ ಸ್ವಂತ ಬ್ಯಾನರ್ ಅಡಿಯಲ್ಲಿ ಹೊಸ ಸಿನಿಮಾ ಘೋಷಿಸಿರುವುದು ಭಿನ್ನಾಭಿಪ್ರಾಯದ ವದಂತಿಗಳಿಗೆ ಮತ್ತಷ್ಟು ಪುಷ್ಟಿ ನೀಡಿದಂತಾಗಿದೆ.

ರಿಷಬ್ ಶೆಟ್ಟಿ ಅವರು ಪ್ರಶಾಂತ್ ವರ್ಮಾ ನಿರ್ದೇಶನದ ‘ಜೈ ಹನುಮಾನ್’ ಚಿತ್ರದಲ್ಲಿ ಮಗ್ನರಾಗಿದ್ದಾರೆ. ಅತ್ತ ನಟಿ ರುಕ್ಮಿಣಿ ವಸಂತ್ ಅವರು ಜ್ಯೂ. ಎನ್‌ಟಿಆರ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್‌ನ ಸಿನಿಮಾದಲ್ಲಿ ನಟಿಸಲು ಸಜ್ಜಾಗುತ್ತಿದ್ದಾರೆ. ಒಟ್ಟಿನಲ್ಲಿ, ‘ಕಾಂತಾರ’ದಂತಹ ಜಾಗತಿಕ ಯಶಸ್ಸಿನ ಬಳಿಕ ರಿಷಬ್ ಶೆಟ್ಟಿ ತಮ್ಮ ಆಪ್ತ ಬಳಗದಿಂದ ದೂರವಾಗುತ್ತಿದ್ದಾರಾ? ಅಥವಾ ಇದು ಕೇವಲ ಅವರ ಸೋಷಿಯಲ್ ಮೀಡಿಯಾ ಟೀಮ್ ಮಾಡುತ್ತಿರುವ ಬದಲಾವಣೆಯೇ? ಅಥವಾ ಯಾವುದಾದರೂ ಹೊಸ ಪ್ರಾಜೆಕ್ಟ್‌ನ ಪ್ರಚಾರ ತಂತ್ರವೇ ಎಂಬುದು ಶೀಘ್ರದಲ್ಲೇ ತಿಳಿಯಲಿದೆ.

https://www.newsics.com/2026/03/28/bcci-makes-tough-decision-before-ipl-starts/

TAGGED:Has there been a rift in their friendship? Rishabh Shetty unfollowed Raj B Shetty and Rukmini!
Share This Article
Facebook Twitter Copy Link Print
Previous Article ಐಪಿಎಲ್‌ ಆರಂಭಕ್ಕೂ ಮುನ್ನ ಬಿಸಿಸಿಐ ಕಠಿಣ ನಿರ್ಧಾರ! : ಬಾಡಿ ಕಂಟ್ರೋಲ್ ನಿಯಮ ಜಾರಿ
Next Article ಕ್ಲಾಸ್ ನಲ್ಲಿ ಮುಸ್ಲಿಂ ವಿದ್ಯಾರ್ಥಿಯನ್ನು ಟೆರರಿಸ್ಟ್ ಎಂದು ಕರೆದ ಪ್ರೊಫೆಸರ್

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?