Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮೇ 3-10 ಅಂತಾರಾಷ್ಟ್ರೀಯ ತುಮಕೂರು ಮಹಿಳಾ ಓಪನ್ ಟೆನಿಸ್ ಚಾಂಪಿಯನ್ ಷಿಪ್: ಸಚಿವ ಡಾ. ಜಿ.ಪರಮೇಶ್ವರ
ಪ್ರಮುಖಕರ್ನಾಟಕ

ಮೇ 3-10 ಅಂತಾರಾಷ್ಟ್ರೀಯ ತುಮಕೂರು ಮಹಿಳಾ ಓಪನ್ ಟೆನಿಸ್ ಚಾಂಪಿಯನ್ ಷಿಪ್: ಸಚಿವ ಡಾ. ಜಿ.ಪರಮೇಶ್ವರ

Share
2 Min Read
SHARE

https://youtube.com/shorts/7-1-Ue0Sh8o?si=IPl4cpVzjeJG3YdO

newsics.com

ತುಮಕೂರು : ಮಾ.28- ಮೇ 3ರಿಂದ 10ರವರೆಗೆ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ತುಮಕೂರು ಮಹಿಳಾ ಓಪನ್ ಟೆನಿಸ್ ಚಾಂಪಿಯನ್ ಷಿಪ್ ತುಮಕೂರಿನಲ್ಲಿ ನಡೆಯಲಿದೆ ಎಂದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವ ಡಾ‌. ಜಿ.ಪರಮೇಶ್ವರ ತಿಳಿಸಿದ್ದಾರೆ.

ತುಮಕೂರು ಟೆನಿಸ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಅವರು, ಅಂತಾರಾಷ್ಟ್ರೀಯ ಗುಣಮಟ್ಟದ ಟೆನಿಸ್ ಕ್ರೀಡಾಂಗಣಗಳನ್ನು ತುಮಕೂರಿನಲ್ಲಿ ನಿರ್ಮಿಸಿದ ಬಳಿಕ ಇದೇ ಮೊದಲ ಬಾರಿಗೆ ವಿಶ್ವ ಮಟ್ಟದ ಕ್ರೀಡಾಕೂಟ ನಡೆಯುತ್ತಿದ್ದು, ತುಮಕೂರಿನ ಜನತೆ ಹಾಗೂ ಕ್ರೀಡಾಸಕ್ತರಿಗೆ ಇದೊಂದು ಸದಾವಕಾಶ ಎಂದರು.

ತುಮಕೂರು ಜಿಲ್ಲಾಡಳಿತ, ತುಮಕೂರು ಟೆನಿಸ್ ಅಸೋಸಿಯೇಷನ್ ಹಾಗೂ ಕರ್ನಾಟಕ ಲಾನ್ ಟೆನಿಸ್ ಅಸೋಸಿಯೇಷನ್ ಸಹಕಾರದಲ್ಲಿ ಅಂತಾರಾಷ್ಟ್ರೀಯ ಮಹಿಳಾ ಟೆನಿಸ್ ಕ್ರೀಡಾಕೂಟ ನಡೆಯುತ್ತಿದ್ದು ವಿಶ್ವಾದ್ಯಂತ 100ಕ್ಕೂ ಹೆಚ್ಚು ಕ್ರೀಡಾಪಟುಗಳು ಸುಮಾರು 12 ದೇಶಗಳಿಂದ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಅಂತಾರಾಷ್ಟ್ರೀಯ ಟೆನಿಸ್ ಕ್ರೀಡಾಕೂಟ ನಡೆಯಬೇಕಾದರೆ ಕನಿಷ್ಠ ನಾಲ್ಕು ಅಂಕಣಗಳು ಇರಬೇಕು. ತುಮಕೂರು ವಿವಿ ಅವರ ಸಹಕಾರದಲ್ಲಿ ವಿಶ್ವದರ್ಜೆಯ ಟೆನಿಸ್ ಅಂಕಣಗಳನ್ನು ನಿರ್ಮಿಸಿದ ಬಳಿಕ ಅಂತಾರಾಷ್ಟ್ರೀಯ ಕ್ರೀಡಾಕೂಟವೊಂದನ್ನು ಇಲ್ಲಿ ನಡೆಸುವಂತೆ ಕರ್ನಾಟಕ ಲಾನ್ ಟೆನಿಸ್ ಅಸೋಸಿಯೇಷನ್ ಅವರನ್ನು ಕೋರಲಾಗಿತ್ತು. ಅಂತಾರಾಷ್ಟ್ರೀಯ ಟೆನಿಸ್ ಫೆಡರೇಷನ್ ಅವರು ತಮ್ಮ ಸಭೆಯಲ್ಲಿ ತೀರ್ಮಾನಿಸಿ ತುಮಕೂರಿನಲ್ಲಿ ಅಂತಾರಾಷ್ಟ್ರೀಯ ರ್ಯಾಂಕಿಂಗ್ ನ ವಿಶ್ವ ಮಹಿಳಾ ಟೆನಿಸ್ ಕ್ರೀಡಾಕೂಟ ನಡೆಸಲು ಅವಕಾಶ ನೀಡಿದ್ದಾರೆ ಎಂದು ಸಚಿವರು ವಿವರಿಸಿದರು.

ತುಮಕೂರಿನ ಈ ಕ್ರೀಡಾಕೂಟವು ತುಮಕೂರು ಓಪನ್ ಚಾಂಪಿಯನ್ ಷಿಪ್ ಎಂದೇ ವಿಶ್ವ ಟೆನಿಸ್ ಭೂಪಟದಲ್ಲಿ ಕರೆಯಲ್ಪಡಲಿದೆ. ಇಲ್ಲಿ ಆಡುವ ಕ್ರೀಡಾಪಟುಗಳು ವಿಜೇತರಾದಲ್ಲಿ 35 ಪಾಯಿಂಟ್ ಗಳನ್ನು ಹಾಗೂ 30ಸಾವಿರ ಅಮೆರಿಕಾ ಡಾಲರ್ ಗಳನ್ನು ಗೆಲ್ಲಲಿದ್ದಾರೆ. ಅಲ್ಲದೆ ನಂತರದ ಸ್ಥಾನವನ್ನು ಹೊಂದುವ ಆಟಗಾರರು ಅಂತಾರಾಷ್ಟ್ರೀಯ ರ್ಯಾಂಕ್ ಗಳನ್ನು ಪಡೆಯಲಿದ್ದಾರೆ ಎಂದರು.

ಕರ್ನಾಟಕ ಹಾಗೂ ತುಮಕೂರಿನ ಟೆನಿಸ್ ಆಟಗಾರರಿಗೆ ವಿಶ್ವದರ್ಜೆಯ ಕ್ರೀಡಾಕೂಟದಲ್ಲಿ ಭಾಗವಹಿಸಲು ಇದು ಸ್ಫೂರ್ತಿಯಾಗಲಿದೆ. ಇಂತಹ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಲಕ್ಷಾಂತರ ರೂ.ಗಳನ್ನು ವೆಚ್ಚ ಮಾಡಬೇಕಾಗುತ್ತದೆ. ಆದರೆ ಇನ್ನು ನಮ್ಮ ಕ್ರೀಡಾಪಟುಗಳ ಕಲಿಕೆಗೆ ಉತ್ತಮ ಅವಕಾಶಗಳು ಸಿಗಲಿವೆ ಎಂದರು.

ಮುಂದಿನ ದಿನಗಳಲ್ಲಿ ಪ್ರತಿ ವರ್ಷವೂ ಮೇ ತಿಂಗಳಲ್ಲಿ ತುಮಕೂರು ಓಪನ್ ಟೆನಿಸ ಚಾಂಪಿಯನ್ ಷಿಪ್ ನಡೆಯಿತು. ಟೆನಿಸ್ ಫೆಡರೇಷನ್ ಈ ಭರವಸೆ ನೀಡಿದೆ ಎಂದರು.

ತುಮಕೂರು ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಕ್ರೀಡಾಕೂಟಗಳು ಇನ್ನು ಮುಂದೆ ನಿರಂತರವಾಗಿ ನಡೆಯಲಿವೆ. ಅಂತಹ ವಾತಾವರಣವನ್ನು ನಿರ್ಮಾಣ ಮಾಡಿದ್ದೇವೆ ಎಂದು ಹೇಳಿದ ಸಚಿವರು, ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ಕೆಲಸ ಪ್ರಾರಂಭವಾಗಿದೆ. ಅಂತಾರಾಷ್ಟ್ರೀಯ ಹಾಕಿ ಕ್ರೀಡಾಂಗಣ ಹಾಗೂ ಅಂತಾರಾಷ್ಟ್ರೀಯ ಈಜುಕೊಳ ನಿರ್ಮಾಣಕ್ಕೆ ಈಗಾಗಲೇ ಜಾಗ ಗುರುತಿಸಲಾಗಿದೆ. ಅಲ್ಲದೆ ಇತ್ತೀಚೆಗೆ ತುಮಕೂರಿಗೆ ಆಗಮಿಸಿದ್ದ ಮುಖ್ಯಮಂತ್ರಿಯವರು ಕ್ರೀಡಾ ಅಭಿವೃದ್ಧಿಗೆ ರೂ.6 ಕೋಟಿ ಅನುದಾನ ನೀಡುವುದಾಗಿ ಹೇಳಿದ್ದರು ಅದರಂತೆ ಬಜೆಟ್ ನಲ್ಲಿ ರೂ. 3 ಕೋಟಿ ನೀಡಿದ್ದು, ಸುಮಾರು ರೂ.8 ಕೋಟಿ ಅನುದಾನವನ್ನು ನೀಡಲಿದ್ದಾರೆ ಎಂದರು.

ಅಂತಾರಾಷ್ಟ್ರೀಯ ಮಹಿಳಾ ಟೆನಿಸ್ ಕ್ರೀಡಾಕೂಟದ ಲಾಂಛನವನ್ನು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಶಾಸಕ ಜಿ.ಬಿ. ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ವಿ.ಆಶ್ವಿಜ, ಜಿಲ್ಲಾ ಪೊಲೀಸ್ ಅಧೀಕ್ಷಕ ಅಶೋಕ್ ಕೆ.ವಿ. ಕರ್ನಾಟಕ ಲಾನ್ ಟೆನಿಸ್ ಅಸೋಸಿಯೇಷನ್ ನ ಅಮರ್ ಉಪಸ್ಥಿತರಿದ್ದರು.

https://www.newsics.com/2026/03/28/sslc-student-dies-after-accidentally-slipping-into-lake/

TAGGED:International Tumkur Women's Open Tennis Championship from May 3-10: Minister Dr. G. Parameshwara
Share This Article
Facebook Twitter Copy Link Print
Previous Article ಆಕಸ್ಮಿಕವಾಗಿ ಕೆರೆಗೆ ಕಾಲುಜಾರಿ ಬಿದ್ದು SSLC ವಿದ್ಯಾರ್ಥಿ ಸಾವು
Next Article ಯಾವ ಚಾನೆಲ್‌ನಲ್ಲಿ ಐಪಿಎಲ್ ನೇರಪ್ರಸಾರ ಮಾಡಲಾಗುತ್ತದೆ?ಉಚಿತವಾಗಿ ವೀಕ್ಷಿಸುವುದು ಹೇಗೆ?

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?