https://youtube.com/shorts/7-1-Ue0Sh8o?si=IPl4cpVzjeJG3YdO
newsics.com
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆಯಲಿರುವ ಆರ್‌ಸಿಬಿ ಮತ್ತು ಎಸ್‌ಆರ್‌ಎಚ್ ಐಪಿಎಲ್ ಪಂದ್ಯದ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ಸಂಚಾರ ಅವಧಿಯನ್ನು ಮಧ್ಯರಾತ್ರಿ 2 ಗಂಟೆಯವರೆಗೆ ವಿಸ್ತರಿಸಲಾಗಿದೆ.
ಕ್ರಿಕೆಟ್ ಪ್ರೇಕ್ಷಕರಿಗೆ ಸುಗಮ ಪ್ರಯಾಣ ಕಲ್ಪಿಸಲು ಮತ್ತು ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಪ್ರೇಕ್ಷಕರು ಹೆಚ್ಚು ಮೆಟ್ರೋ ಸೇವೆಯನ್ನೇ ಬಳಸಿಕೊಳ್ಳುವಂತೆ ಸಂಚಾರಿ ಪೊಲೀಸರೂ ಸಹ ಮನವಿ ಮಾಡಿದ್ದಾರೆ.
ಪಂದ್ಯದ ದಿನದಂದು ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ಮೆಟ್ರೋ ಸೇವೆಯನ್ನು ರಾತ್ರಿ 11 ಗಂಟೆಯ ಬದಲಾಗಿ ತಡರಾತ್ರಿ 2 ಗಂಟೆಯವರೆಗೆ ವಿಸ್ತರಿಸಲಾಗಿದೆ. ಮೆಜೆಸ್ಟಿಕ್ ನಿಲ್ದಾಣದಿಂದ ನಾಲ್ಕೂ ದಿಕ್ಕುಗಳಿಗೆ ಕೊನೆಯ ರೈಲು ಮಧ್ಯರಾತ್ರಿ 1:30ಕ್ಕೆ ಹೊರಡಲಿದೆ.
ಕೊನೆಯ ರೈಲು ಹೊರಡುವ ಸಮಯ
ವೈಟ್‌ಫೀಲ್ಡ್ (ಕಾಡುಗೋಡಿ): ರಾತ್ರಿ 12:30
ಚಲ್ಲಘಟ್ಟ: ರಾತ್ರಿ 12:45
ರೇಷ್ಮೆ ಸಂಸ್ಥೆ ಮತ್ತು ಮಾದಾವರ: ರಾತ್ರಿ 12:45
ಬೊಮ್ಮಸಂದ್ರ: ರಾತ್ರಿ 01:00
ಆರ್.ವಿ. ರಸ್ತೆ: ರಾತ್ರಿ 02:00
ಟಿಕೆಟ್ ರಹಿತ ಪ್ರಯಾಣಕ್ಕೆ ಕ್ಯೂಆರ್ ಕೋಡ್
ಐಪಿಎಲ್ ಪಂದ್ಯದ ಟಿಕೆಟ್‌ಗಳಲ್ಲಿ ಈಗಾಗಲೇ ನಮ್ಮ ಮೆಟ್ರೋ ಕ್ಯೂಆರ್ ಕೋಡ್ (ಟೂ-ವೇ ಟ್ರಾವೆಲ್) ಮುದ್ರಿತವಾಗಿರುತ್ತದೆ. ಡಿಜಿಟಲ್ ಟಿಕೆಟ್ ಹೊಂದಿರುವವರು ಸಹ ಇದನ್ನು ಬಳಸಿ ಪ್ರಯಾಣಿಸಬಹುದು. ಕ್ರೀಡಾಂಗಣಕ್ಕೆ ಬರುವವರು ಕಬ್ಬನ್ ಪಾರ್ಕ್ ಅಥವಾ ಮಹಾತ್ಮ ಗಾಂಧಿ ರಸ್ತೆ ಮೆಟ್ರೋ ನಿಲ್ದಾಣಗಳನ್ನು ಬಳಸಲು ಸೂಚಿಸಲಾಗಿದೆ.
https://www.newsics.com/2026/03/28/6-killed-in-heavy-snowfall-in-jammu-and-kashmir/