newsics.com
ಬೆಂಗಳೂರು : ನಾಲ್ಕು ವರ್ಷದ ಪುಟ್ಟ ಬಾಲಕಿಯನ್ನು ಅಪಹರಿಸಿ, ಆಕೆಯ ಮೇಲೆ ಅತ್ಯಾಚಾರ ಎಸಗಿ, ನಂತರ ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಅರಳೂರಿನಲ್ಲಿ ನಡೆದಿದೆ.
ಈ ಬಾಲಕಿಯ ಪೋಷಕರು ಅಸ್ಸಾಂ ಮೂಲದವರಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಅರಳೂರು ಎಂಬಲ್ಲಿ ವಾಸವಿದ್ದರು. ಇವರು ಚಿಂದಿ ಆಯುವ ಕೆಲಸ ಮಾಡುತ್ತಿದ್ದರು.ಕಳೆದ ಗುರುವಾರ ಸಂಜೆ ಮನೆಯ ಬಳಿ ಆಟವಾಡುತ್ತಿದ್ದ ಮಗು ಹಠಾತ್ತಾಗಿ ನಾಪತ್ತೆಯಾಗಿತ್ತು. ಪೋಷಕರು ಎಲ್ಲೆಡೆ ಹುಡುಕಾಡಿದರೂ ಮಗು ಸಿಗದಿದ್ದಾಗ ಶುಕ್ರವಾರ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಪೊಲೀಸರು ತನಿಖೆ ಆರಂಭಿಸಿದಾಗ, ಶನಿವಾರ ಬೆಳಿಗ್ಗೆ ಮನೆಯ ಸಮೀಪದ ನಿರ್ಜನ ಪ್ರದೇಶದಲ್ಲಿ ಮಗುವಿನ ಮೃತದೇಹ ಪತ್ತೆಯಾಗಿದೆ.
ಮಗುವಿನ ಮೇಲೆ ಅತ್ಯಾಚಾರ ಎಸಗಿರುವುದು ಪ್ರಾಥಮಿಕ ತನಿಖೆಯಲ್ಲಿ ದೃಢಪಟ್ಟಿದೆ.ಆರೋಪಿಗಳು ಮಗುವಿನ ಗುರುತು ಪತ್ತೆಯಾಗಬಾರದೆಂದು ಕಲ್ಲಿನಿಂದ ಮುಖ ಮತ್ತು ತಲೆಯನ್ನು ಜಜ್ಜಿ ಅತ್ಯಂತ ಕ್ರೂರವಾಗಿ ಕೊಲೆ ಮಾಡಿದ್ದಾರೆ.
ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಸದ್ಯಕ್ಕೆ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಶಂಕಿತರ ಪತ್ತೆಗೆ ಜಾಲ ಬೀಸಿದ್ದಾರೆ.