https://youtube.com/shorts/qIu1k1AjcVg?si=asT_CsSQI4v14g8C
newsics.com
ದೇವನಹಳ್ಳಿ: ಶ್ರೀರಾಮನವಮಿ ಅನ್ನ ಪ್ರಸಾದಿಂದ ಇಡೀ ಊರಿನ ಗ್ರಾಮಸ್ಥರು ಅಸ್ವಸ್ಥಗೊಂಡ ಘಟನೆ ದೇವನಹಳ್ಳಿಯಲ್ಲಿ ನಡೆದಿದೆ.
ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಸುಮಾರು 400 ಜನರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೆಟ್ಟೇನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶ್ರೀರಾಮನವಮಿ ಅನ್ನಪ್ರಸಾದ ಸೇವಿಸಿದ ನಂತರ ಬಹುತೇಕ ಗ್ರಾಮಸ್ಥರಿಗೆ ಫುಡ್ ಪಾಯಿಸನ್ ಆಗಿದೆ.
ಈ ಗ್ರಾಮದಲ್ಲಿ ಸುಮಾರು 400ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ಗ್ರಾಮದಲ್ಲಿ ಶ್ರೀರಾಮ ಜಯಂತಿ ಉತ್ಸವವನ್ನು ಆಚರಿಸಲಾಗಿತ್ತು. ಆದರೆ ಅದೇನಾಯ್ತೋ ಏನೋ ಇಡೀ ಗ್ರಾಮ ಸಂಕಷ್ಟಕ್ಕೆ ಸಿಲುಕಿದೆ.
ಶ್ರೀರಾಮನವಮಿ ಉತ್ಸವದ ಅಂಗವಾಗಿ ಗ್ರಾಮಸ್ಥರಿಗೆ ಅನ್ನಪ್ರಸಾದ ವಿನಿಯೋಗ ಮಾಡಲಾಗಿತ್ತು. ಆದರೆ ಅನ್ನಪ್ರಸಾದ ಸೇವಿಸಿದ ಬಹುತೇಕ ಜನರಿಗೆ ರಾತ್ರಿ 10 ಗಂಟೆಯಿಂದ ಹೊಟ್ಟೆನೋವು, ವಾಂತಿ, ಭೇದಿ, ಸುಸ್ತು ಮುಂತಾದ ಲಕ್ಷಣಗಳು ಕಾಣಿಸಿಕೊಂಡವು. ಕೆಲವರ ಸ್ಥಿತಿ ತೀವ್ರವಾಗಿದ್ದು, ಅವರನ್ನು ಆಂಬುಲೆನ್ಸ್ ಮೂಲಕ ತ್ವರಿತವಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಗ್ರಾಮದಲ್ಲಿ ಸುತ್ತಮುತ್ತಲಿನ ಖಾಸಗಿ ಆಸ್ಪತ್ರೆಗಳಲ್ಲಿ 200ಕ್ಕೂ ಹೆಚ್ಚು ಜನರು ದಾಖಲಾಗಿದ್ದಾರೆ. ತೀವ್ರ ಅಸ್ವಸ್ಥರಾದವರನ್ನು ಸರ್ಕಾರಿ ಆಸ್ಪತ್ರೆಗಳಿಗೂ ಕರೆದೊಯ್ಯಲಾಗಿದೆ. ಗ್ರಾಮದಲ್ಲಿ ಆರೋಗ್ಯ ಸಿಬ್ಬಂದಿ ಪ್ರಾಥಮಿಕ ಚಿಕಿತ್ಸೆ ನೀಡುತ್ತಿದ್ದಾರೆ. ಆಶಾ ವರ್ಕರ್‌ಗಳು, ಆರ್‌ಆರ್‌ಟಿ ತಂಡ ಮತ್ತು ಆರೋಗ್ಯ ಸಿಬ್ಬಂದಿ ಮನೆಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸುತ್ತಿದ್ದಾರೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಆರೋಗ್ಯಾಧಿಕಾರಿ
ಜಿಲ್ಲಾ ಆರೋಗ್ಯಾಧಿಕಾರಿ ಡಾ. ಲಕ್ಕಾ ಕೃಷ್ಣರೆಡ್ಡಿ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಆಸ್ಪತ್ರೆಗೆ ದಾಖಲಾದ ಗ್ರಾಮಸ್ಥರ ಆರೋಗ್ಯ ವಿಚಾರಿಸಿದ್ದಾರೆ.