https://youtube.com/shorts/wcgOU8WO_jc?si=ko9vW9TLLev8Rg2l
newsics.com
ಪಠಾಣ್’ ಸಿನಿಮಾ ನಿರ್ದೇಶಿಸಿದ್ದ ಸಿದ್ಧಾರ್ಥ್ ಆನಂದ್ ನಿರ್ದೇಶನದ, ಶಾರುಖ್ ಖಾನ್ ನಟನೆಯ ಹೊಸ ಸಿನಿಮಾ ‘ಕಿಂಗ್’ ಸಿನಿಮಾಕ್ಕೆ ಯುದ್ಧದ ಬಿಸಿ ತಟ್ಟಿದೆ.
ಹೌದು ದುಬೈನಲ್ಲಿ ನಡೆಯಬೇಕಿದ್ದ ಈ ಚಿತ್ರದ ಪ್ರಮುಖ ಹಂತದ ಚಿತ್ರೀಕರಣವನ್ನು ಭದ್ರತಾ ಕಾರಣಗಳಿಂದಾಗಿ ರದ್ದುಗೊಳಿಸಲಾಗಿದೆ.ದುಬೈ ಬದಲು ಮುಂಬೈನಲ್ಲೇ ಮರುಭೂಮಿ ನಿರ್ಮಾಣ ಮಾಡಿ ಚಿತ್ರೀಕರಣ ನಡೆಸಲಾಗುವುದು
ವರದಿಗಳ ಪ್ರಕಾರ, ಏಪ್ರಿಲ್ 9ರಿಂದ ದುಬೈನಲ್ಲಿ ಒಂದು ವಾರಗಳ ಕಾಲ ‘ಕಿಂಗ್’ ಸಿನಿಮಾಗೆ ಚಿತ್ರೀಕರಣ ನಡೆಸಲು ಚಿತ್ರತಂಡ ಸಕಲ ಸಿದ್ಧತೆ ಮಾಡಿಕೊಂಡಿತ್ತು. ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ಸಹ ಪಡೆಯಲಾಗಿತ್ತು. ಆದರೆ, ಯುದ್ಧದ ಭೀತಿಯಿಂದಾಗಿ ಪ್ಲ್ಯಾನ್ ಬದಲಾಗಿದೆ. ಸಿನಿಮಾದ ತಾರಾಗಣ ಮತ್ತು ತಾಂತ್ರಿಕ ತಂಡದ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ನಿರ್ದೇಶಕ ಸಿದ್ಧಾರ್ಥ್ ಆನಂದ್ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.
ದುಬೈ ಪ್ಲ್ಯಾನ್ ರದ್ದಾದ ಬೆನ್ನಲ್ಲೇ ಚಿತ್ರತಂಡ ಪರ್ಯಾಯ ವ್ಯವಸ್ಥೆ ಮಾಡಿಕೊಂಡಿದೆ. ಮುಂಬೈನ ವಿಲೆ ಪಾರ್ಲೆ ಬಳಿಯ ಸ್ಟುಡಿಯೋದಲ್ಲಿ ಈಗ ಚಿತ್ರೀಕರಣ ನಡೆಯಲಿದೆ. ಅಲ್ಲಿನ ಪ್ರೊಡಕ್ಷನ್ ವಿನ್ಯಾಸ ತಂಡವು ಮರುಭೂಮಿಯಂತಹ ಬೃಹತ್ ಸೆಟ್ ನಿರ್ಮಿಸುತ್ತಿದೆ. ಇಲ್ಲಿ ಶಾರುಖ್ ಖಾನ್ ಅವರ ಸಾಹಸ ದೃಶ್ಯಗಳು ಮತ್ತು ಚೇಸಿಂಗ್ ಸೀಕ್ವೆನ್ಸ್ ಚಿತ್ರೀಕರಿಸಲಾಗುವುದು.
https://www.newsics.com/2026/03/30/young-woman-caught-with-tobacco-and-sim-card-in-private-parts/