https://youtube.com/shorts/wcgOU8WO_jc?si=ko9vW9TLLev8Rg2l
newsics.com
ಎಸ್‌ಎಸ್‌ಎಲ್‌ಸಿ ಗಣಿತ ಪ್ರಶ್ನೆಪತ್ರಿಕೆಯಲ್ಲಿ ವಾಟರ್ ಮಾರ್ಕ್ ಗೊಂದಲ ಉಂಟಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪರದಾಡುವ ಪರಿಸ್ಥಿತಿ ಎದುರಾಯಿತು.
ಪ್ರಶ್ನೆ ಪತ್ರಿಕೆಗಳಲ್ಲಿ ಹಾಕಲಾಗುತ್ತಿರುವ ದಪ್ಪನೆಯ ವಾಟರ್ ಮಾರ್ಕ್‌ನಿಂದಾಗಿ ಅಕ್ಷರಗಳು ಕಾಣದೆ ಸಮಸ್ಯೆಯಾಗುತ್ತಿದೆ ಎಂದು ಪರೀಕ್ಷಾರ್ಥಿಗಳು ದೂರಿದ್ದಾರೆ.
ಪರೀಕ್ಷಾ ಅಕ್ರಮ ತಡೆಯುವ ಉದ್ದೇಶದಿಂದ ಪ್ರತಿ ಪ್ರಶ್ನೆ ಪತ್ರಿಕೆಗೆ ನೀಡಲಾಗುವ ‘ಡಿಜಿಟಲ್ ಕೋಡ್’ ಸಂಖ್ಯೆಗಳನ್ನು ಈ ಬಾರಿ ವಾಟರ್ ಮಾರ್ಕ್ ರೂಪದಲ್ಲಿ ಮುದ್ರಿಸಲಾಗಿತ್ತು. ಆದರೆ, ಇವು ಗಣಿತದ ಸೂತ್ರಗಳು ಮತ್ತು ಅಂಕಿ-ಅಂಶಗಳ ಮೇಲೆಯೇ ಮೂಡಿಬಂದಿರುವುದರಿಂದ ಪ್ರಶ್ನೆಗಳನ್ನು ಸರಿಯಾಗಿ ಓದಲು ಸಾಧ್ಯವಾಗಿಲ್ಲ.
ಗ್ರಾಮೀಣ ಭಾಗದ ಪರೀಕ್ಷಾ ಕೇಂದ್ರಗಳಲ್ಲಿ ಈ ಸಮಸ್ಯೆ ಹೆಚ್ಚಾಗಿ ಕಂಡುಬಂದಿದ್ದು, ಪ್ರಶ್ನೆಗಳು ಸ್ಪಷ್ಟವಾಗಿ ಕಾಣಿಸದ ಕಾರಣ ವಿದ್ಯಾರ್ಥಿಗಳು ಕೆಲವು ಪ್ರಶ್ನೆಗಳನ್ನು ಅರ್ಧಕ್ಕೆ ಬಿಟ್ಟು ಬಂದಿದ್ದಾರೆ.
ಪ್ರಮುಖ ಅಂಕಿಗಳ ಮೇಲೆಯೇ ಕೋಡ್ ನಂಬರ್ ಅಚ್ಚಾಗಿರುವುದರಿಂದ ಲೆಕ್ಕಾಚಾರ ತಪ್ಪುವ ಸಾಧ್ಯತೆಯಿದೆ. ಇದು ವಿದ್ಯಾರ್ಥಿಗಳ ಒಟ್ಟಾರೆ ಫಲಿತಾಂಶದ ಮೇಲೆ ಕೆಟ್ಟ ಪರಿಣಾಮ ಬೀರಬಹುದು ಎಂಬ ಭೀತಿ ಪೋಷಕರು ಮತ್ತು ವಿದ್ಯಾರ್ಥಿಗಳಲ್ಲಿ ವ್ಯಕ್ತವಾಗಿದೆ.
https://www.newsics.com/2026/03/31/pakistan-deputy-prime-minister-ishaq-dar-slipped-and-fell/