https://youtube.com/shorts/b7DblvgZf1A?si=BCR0sxsn8Xzh1cnn
newsics.com
ದೇಶದಾದ್ಯಂತ ಏಪ್ರಿಲ್‌ನಿಂದ ಜೂನ್‌ವರೆಗಿನ ಅವಧಿಯಲ್ಲಿ ಭಾರತದಾದ್ಯಂ ವಾಡಿಕೆಗಿಂತ ಹೆಚ್ಚು ದಿನಗಳ ಕಾಲ ‘ಬಿಸಿಗಾಳಿ’ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞರು ಎಚ್ಚರಿಸಿದ್ದಾರೆ.
ಪೂರ್ವ, ಮಧ್ಯ ಮತ್ತು ವಾಯವ್ಯ ಭಾರತದ ಹಲವು ಭಾಗಗಳಲ್ಲಿ ಹಾಗೂ ದಕ್ಷಿಣ ಪೆನಿನ್ಸುಲಾದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ದಿನಗಳ ಕಾಲ ಬಿಸಿಗಾಳಿ ಬೀಸಲಿದೆ. ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳು ಸೇರಿದಂತೆ ರಾಜ್ಯದ ಒಳನಾಡು ಪ್ರದೇಶಗಳಲ್ಲಿ ಗರಿಷ್ಠ ತಾಪಮಾನವು ವಾಡಿಕೆಗಿಂತ ಹೆಚ್ಚಾಗಿರಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಈ ಬಾರಿ ಕೇವಲ ಹಗಲಷ್ಟೇ ಅಲ್ಲದೆ, ರಾತ್ರಿಯ ತಾಪಮಾನವೂ ದೇಶದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿರಲಿದೆ. ಇನ್ನು ದೇಶದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯೂ ಇದೆ ಎಂದು ಐಎಂಡಿ ತಿಳಿಸಿದೆ.
https://www.newsics.com/2026/04/01/war-effect-what-are-the-experts-predictions-for-gold-investors/