Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ರೈಲಿನ ಶೌಚಾಲಯದಲ್ಲಿ ನವಜಾತ ಶಿಶುವನ್ನು ಬಿಟ್ಟು ಹೋದ ಪಾಪಿಗಳು
ಪ್ರಮುಖವೈರಲ್

ರೈಲಿನ ಶೌಚಾಲಯದಲ್ಲಿ ನವಜಾತ ಶಿಶುವನ್ನು ಬಿಟ್ಟು ಹೋದ ಪಾಪಿಗಳು

Share
1 Min Read
SHARE

https://youtube.com/shorts/b7DblvgZf1A?si=BCR0sxsn8Xzh1cnn

newsics.com

ರೈಲಿನ ಶೌಚಾಲಯದಲ್ಲಿ ನವಜಾತ ಶಿಶುವೊಂದನ್ನು ಯಾರೋ ಬಿಟ್ಟು ಹೋದಂತಹ ಘಟನೆ ನಡೆದಿದೆ. ಒಂದು ಬಟ್ಟೆಯಲ್ಲಿ ಸುತ್ತಿ ಮಗುವನ್ನು ಬಿಡಲಾಗಿದ್ದು, ಮಗು ಶೌಚಾಲಯಕ್ಕೆ ಹೋದವರಿಗೆ ಮಗು ನಡುಗುತ್ತಾ ಅಳುತ್ತಿರುವ ದೃಶ್ಯ ಕಂಡು ಬಂದಿದೆ.
ಕೂಡಲೇ ಅವರು ರೈಲ್ವೆ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಮಗುವನ್ನು ರಕ್ಷಣೆ ಮಾಡಲಾಗಿದ್ದು, ಮಗು ರೈಲಿನ ಟಾಯ್ಲೆಟ್‌ನಲ್ಲಿರುವ ದೃಶ್ಯ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹರಿದ್ವಾರದಿಂದ ಪುರಿಗೆ ಹೊರಟಿದ್ದ ಉತ್ಕಲ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಶೌಚಾಲಯದಲ್ಲಿ ಈ ಘಟನೆ ನಡೆದಿದೆ. ಸಣ್ಣದೊಂದು ಟವೆಲ್‌ನಲ್ಲಿ ಮಗುವನ್ನು ಅರ್ಧ ಸುತ್ತಿ ಶೌಚಾಲಯದಲ್ಲಿ ಬಿಡಲಾಗಿತ್ತು.

ಅಧಿಕಾರಿಗಳ ಪ್ರಕಾರ, ಎಸ್‌ 4ಕೋಚ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನೊಬ್ಬ ಶೌಚಾಲಯದ ಬಾಗಿಲು ತೆರೆದಾಗ, ಶೌಚಾಲಯದ ನೆಲದಲ್ಲಿ ನವಜಾತ ಶಿಶುವೊಂದನ್ನು ಬಿಟ್ಟು ಹೋಗಿರುವುದನ್ನು ನೋಡಿ ಆಘಾತಗೊಂಡಿದ್ದಾರೆ. ಆ ಪ್ರಯಾಣಿಕ ಕೂಡಲೇ ರೈಲಿನ ಬೋಗಿಯಲ್ಲಿರುವವರಿಗೆ ವಿಚಾರ ತಿಳಿಸಿದ್ದರಿಂದ ರೈಲಿನಲ್ಲಿದ್ದವರು ಭಯಗೊಂಡಿದ್ದಾರೆ. ನಂತರ ಒಬ್ಬ ಪ್ರಯಾಣಿಕ ರೈಲ್ವೆ ತುರ್ತು ಸಹಾಯವಾಣಿಗೆ ಕರೆ ಮಾಡಿ ಪರಿಸ್ಥಿತಿಯ ಬಗ್ಗೆ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿದ್ದಾರೆ. ನಂತರ ಪೊಲೀಸರು ಮತ್ತು ರೈಲ್ವೆ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಧಾವಿಸಿ ನವಜಾತ ಶಿಶುವನ್ನು ರಕ್ಷಿಸಿ ಜಿಲ್ಲಾ ಆಸ್ಪತ್ರೆಗೆ ಸಾಗಿಸಿದ್ದಾರೆ.
ರೈಲಿನಲ್ಲಿ ಸಿಕ್ಕ ಮಗುವನ್ನು ಜಿಲ್ಲಾ ಆಸ್ಪತ್ರೆಯ ವಿಶೇಷ ಆರೈಕೆ ನವಜಾತ ಶಿಶು ಘಟಕಕ್ಕೆ (SNCU) ದಾಖಲಿಸಲಾಗಿದೆ ಎಂದು ಸಿವಿಲ್ ಸರ್ಜನ್ ಡಾ. ಯಶವಂತ್ ವರ್ಮಾ ತಿಳಿಸಿದ್ದಾರೆ. ವೈದ್ಯರ ತಂಡವು ಮಗುವಿನ ಆರೋಗ್ಯವನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದೆ ಮತ್ತು ಅಗತ್ಯವಿರುವ ವೈದ್ಯಕೀಯ ಆರೈಕೆಯನ್ನು ಒದಗಿಸುತ್ತಿದೆ ಎಂದು ಅವರು ಹೇಳಿದರು. ಆಸ್ಪತ್ರೆ ಅಧಿಕಾರಿಗಳ ಪ್ರಕಾರ, ಶಿಶುವನ್ನು ಪ್ರಸ್ತುತ ವೀಕ್ಷಣೆಯಲ್ಲಿಡಲಾಗಿದ್ದು, ವೈದ್ಯರು ಮಗುವಿನ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.
ಇತ್ತ ಪೊಲೀಸರು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಅಧಿಕಾರಿಗಳು ಉತ್ಕಲ್ ಎಕ್ಸ್‌ಪ್ರೆಸ್‌ನ ಎಸ್ -4 ಕೋಚ್‌ನ ಪ್ರಯಾಣಿಕರ ಪಟ್ಟಿಯನ್ನು ಪರಿಶೀಲಿಸುತ್ತಿದ್ದಾರೆ ಮತ್ತು ಕಟ್ನಿ ಮುರ್ವಾರಾ ರೈಲು ನಿಲ್ದಾಣದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ನವಜಾತ ಶಿಶುವನ್ನು ಶೌಚಾಲಯದಲ್ಲಿ ಬಿಟ್ಟವರು ಯಾರು ಎಂದು ತಿಳಿಯಲುಪೊಲೀಸರು ಅದೇ ಕೋಚ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರನ್ನು ಸಹ ಪ್ರಶ್ನಿಸಿದ್ದಾರೆ.

https://www.instagram.com/reel/DWg69I2Eb9C/?igsh=NXFxeW5pcTFnNmVq

ಬಾದಾಮಿ ಜಾತ್ರೆಯಲ್ಲಿ 30 ದಿನದಲ್ಲಿ 1 ಕೋಟಿ ಸಿಕ್ತು: ರಾಜು ತಾಳಿಕೋಟಿ ಪುತ್ರ ಹೇಳಿದ್ದೇನು?

TAGGED:Sinful people who left a newborn baby in the train toilet
Share This Article
Facebook Twitter Copy Link Print
Previous Article ಬಾದಾಮಿ ಜಾತ್ರೆಯಲ್ಲಿ 30 ದಿನದಲ್ಲಿ 1 ಕೋಟಿ ಸಿಕ್ತು: ರಾಜು ತಾಳಿಕೋಟಿ ಪುತ್ರ ಹೇಳಿದ್ದೇನು?
Next Article ಸಾರ್ವಜನಿಕ ಪ್ರದೇಶದಲ್ಲೇ ವಿವಾಹಿತೆ ಮೇಲೆ ಸಾಮೂಹಿಕ ಅತ್ಯಾಚಾರ ಯತ್ನ, ತಡೆಯುವ ಬದಲು ವಿಡಿಯೋ ಮಾಡಿದ ಜನ!

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?