https://youtube.com/shorts/w77Qj39UtDA?si=G-t7V0TrkmzYuWQ5
newsics.com
ಬೆಂಗಳೂರು: ರಾಜ್ಯದ 1 ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಮಹತ್ವದ ವಿನಾಯಿತಿಯೊಂದನ್ನು ನೀಡಿದೆ2025-26ನೇ ಸಾಲಿನ ವಿದ್ಯಾರ್ಥಿ ಬಸ್ ಪಾಸ್‌ಗಳ ಮಾನ್ಯತಾ ಅವಧಿಯನ್ನು ಏಪ್ರಿಲ್ 10, 2026ರವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.
ವಿದ್ಯಾರ್ಥಿಗಳಿಗೆ ನೀಡಲಾದ ಬಸ್ ಪಾಸ್‌ಗಳ ಅವಧಿಯು ಮಾರ್ಚ್ 31, 2026ಕ್ಕೆ ಮುಕ್ತಾಯಗೊಳ್ಳಬೇಕಿತ್ತು. ಆದರೆ, ರಾಜ್ಯದ ಶಾಲೆಗಳಲ್ಲಿ 1 ರಿಂದ 9ನೇ ತರಗತಿಯ ಶೈಕ್ಷಣಿಕ ತರಗತಿಗಳು ಏಪ್ರಿಲ್ 10, 2026ರವರೆಗೆ ನಡೆಯಲಿವೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಶಾಲಾ ಪ್ರಯಾಣಕ್ಕೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ನಿಗಮವು ಈ ನಿರ್ಧಾರ ಕೈಗೊಂಡಿದೆ
ಸಾರ್ವಜನಿಕರ ಮನವಿ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯನ್ನು ಪರಿಗಣಿಸಿದ ಕೆಎಸ್‌ಆರ್‌ಟಿಸಿ ಅಧಿಕಾರಿಗಳು, ಮಾರ್ಚ್ 31, 2026ಕ್ಕೆ ಮುಕ್ತಾಯಗೊಳ್ಳಬೇಕಿದ್ದ ಬಸ್ ಪಾಸ್‌ಗಳ ಅವಧಿಯನ್ನು ಏಪ್ರಿಲ್ 10, 2026ರವರೆಗೆ ವಿಸ್ತರಿಸಿದ್ದಾರೆ. ವಿದ್ಯಾರ್ಥಿಗಳು ತಮ್ಮ ಬಳಿ ಇರುವ 2025-26ನೇ ಸಾಲಿನ ಹಳೆಯ ಬಸ್ ಪಾಸ್ ತೋರಿಸಿಯೇ ಏಪ್ರಿಲ್ 10ರವರೆಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ಕೆ.ಎಸ್.ಆರ್.ಟಿ.ಸಿ ಮುಖ್ಯ ಸಂಚಾರ ವ್ಯವಸ್ಥಾಪಕರು (ವಾಣಿಜ್ಯ) ಈ ಕುರಿತು ಅಧಿಕೃತ ಜ್ಞಾಪನ ಪತ್ರ ಹೊರಡಿಸಿದ್ದು, ಎಲ್ಲಾ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶಿಸಿದ್ದಾರೆ.