Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > CBSE ಆರನೇ ತರಗತಿಯಿಂದ ಮೂರನೇ ಭಾಷೆ ಕಡ್ಡಾಯ
ಕರ್ನಾಟಕದೇಶಪ್ರಮುಖ

CBSE ಆರನೇ ತರಗತಿಯಿಂದ ಮೂರನೇ ಭಾಷೆ ಕಡ್ಡಾಯ

Share
1 Min Read
SHARE

https://youtube.com/shorts/G0oN8U59OVY?si=rbIwZ4fR9fKtFNQ-

newsics.com

ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು (ಸಿಬಿಎಸ್‌ಇ) 2026–27ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಪಠ್ಯಕ್ರಮವನ್ನು ಜಾರಿಗೆ ತಂದಿದೆ. ಇನ್ಮುಂದೆ 6ನೇ ತರಗತಿಯಿಂದ ಕಡ್ಡಾಯವಾಗಿ ತ್ರಿಭಾಷಾ ಸೂತ್ರವನ್ನು ಅಳವಡಿಸಲಾಗುತ್ತದೆ.

ನೂತನ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಅಡಿಯಲ್ಲಿ ಕಡ್ಡಾಯಗೊಳಿಸಲಾಗಿರುವ ತ್ರಿಭಾಷಾ ಸೂತ್ರವನ್ನು 6ನೇ ತರಗತಿಯಿಂದ ಪ್ರಾರಂಭಿಸಲಾಗುವುದು (ಮೂರನೇ ಭಾಷೆ ಕಡ್ಡಾಯ). 6ನೇ ತರಗತಿಯಿಂದ 10ನೇ ತರಗತಿಯವರೆಗೆ ವಿದ್ಯಾರ್ಥಿಗಳು ಈಗ ಮೂರು ಭಾಷೆಗಳನ್ನು ಕಲಿಯುವುದು ಕಡ್ಡಾಯ. ಇದರಲ್ಲಿ ಕನಿಷ್ಠ ಎರಡು ಭಾಷೆಗಳು ಭಾರತೀಯ ಮೂಲದ್ದಾಗಿರಬೇಕು (ಉದಾಹರಣೆಗೆ: ಕನ್ನಡ, ಹಿಂದಿ, ಸಂಸ್ಕೃತ ಇತ್ಯಾದಿ). ಇದು ಪ್ರಾದೇಶಿಕ ಭಾಷೆಗಳಿಗೆ ಹೆಚ್ಚಿನ ಒತ್ತು ನೀಡಲಿದೆ.

9ನೇ ತರಗತಿಯಿಂದಲೇ ಗಣಿತ (Maths) ಮತ್ತು ವಿಜ್ಞಾನ (Science) ವಿಷಯಗಳಲ್ಲಿ ‘ಸ್ಟ್ಯಾಂಡರ್ಡ್’ (Standard) ಮತ್ತು ‘ಅಡ್ವಾನ್ಸ್ಡ್’ (Advanced) ಎಂಬ ಎರಡು ಹಂತದ ಪಠ್ಯಕ್ರಮ ಮತ್ತು ಪರೀಕ್ಷೆ ಇರಲಿದೆ. ವಿದ್ಯಾರ್ಥಿಗಳು ತಮ್ಮ ಆಸಕ್ತಿ ಮತ್ತು ಸಾಮರ್ಥ್ಯಕ್ಕೆ ತಕ್ಕಂತೆ ಸುಲಭ ಅಥವಾ ಕಠಿಣ ಹಂತವನ್ನು ಆರಿಸಿಕೊಳ್ಳಬಹುದು.

​ಕಠಿಣ ವಿಷಯಗಳ ಬಗ್ಗೆ ಭಯವಿರುವ ವಿದ್ಯಾರ್ಥಿಗಳಿಗೆ ‘ಸ್ಟ್ಯಾಂಡರ್ಡ್’ ಹಂತವು ಸಹಕಾರಿಯಾದರೆ, ಭವಿಷ್ಯದಲ್ಲಿ ಇಂಜಿನಿಯರಿಂಗ್ ಅಥವಾ ವೈದ್ಯಕೀಯ ಕ್ಷೇತ್ರಕ್ಕೆ ಹೋಗುವವರಿಗೆ ‘ಅಡ್ವಾನ್ಸ್ಡ್’ ಹಂತವು ತಳಹದಿ ಹಾಕಿಕೊಡಲಿದೆ.

 

ಎಲ್ಲಾ ವಿದ್ಯಾರ್ಥಿಗಳು ಪ್ರಮಾಣಿತ ಪಠ್ಯಕ್ರಮವನ್ನು ಕಡ್ಡಾಯವಾಗಿ ಅಧ್ಯಯನ ಮಾಡುತ್ತಾರೆ. 80 ಅಂಕಗಳಿಗೆ ನಡೆಸುವ 3 ಗಂಟೆಯ ಪರೀಕ್ಷೆಗೂ ಹಾಜರಾಗುತ್ತಾರೆ. ಆದರೆ ವಿಜ್ಞಾನ ಮತ್ತು ಗಣಿತ ವಿಷಯಗಳಲ್ಲಿ ತಮ್ಮ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳು ಐಚ್ಛಿಕ ಹಂತವನ್ನು ಆಯ್ಕೆ ಮಾಡಿಕೊಳ್ಳಬಹುದು.

9 ಮತ್ತು 10ನೇ ತರಗತಿಗೆ, ಸಮಸ್ಯೆ ಬಗೆಹರಿಸುವ ಕೌಶಲ (ಕಂಪ್ಯೂಟೇಷನಲ್‌ ಥಿಂಕಿಂಗ್‌), ಕೃತಕ ಬುದ್ಧಿಮತ್ತೆ (ಎ.ಐ) ವಿಷಯಗಳನ್ನೂ ಕಡ್ಡಾಯಗೊಳಿಸಲಾಗಿದೆ. ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಈ ವಿಷಯಗಳನ್ನು ಆಂತರಿಕ ಮೌಲ್ಯಮಾಪನಕ್ಕಾಗಿ ಪ್ರಾಯೋಗಿಕವಾಗಿ ಅಳವಡಿಸಲಾಗುವುದು. 2029ರಿಂದ ಈ ವಿಷಯಗಳು 10ನೇ ತರಗತಿಯ ಬೋರ್ಡ್ ಪರೀಕ್ಷೆಗೆ ಕಡ್ಡಾಯ ವಿಷಯಗಳಾಗಿರುತ್ತವೆ.

https://www.newsics.com/2026/04/03/earthquake-felt-in-delhi-ncr-many-parts-of-north-india/

 

TAGGED:CBSE makes third language mandatory from class 6
Share This Article
Facebook Twitter Copy Link Print
Previous Article ದೆಹಲಿ-ಎನ್‌ಸಿಆರ್, ಉತ್ತರ ಭಾರತದ ಹಲವು ಭಾಗಗಳಲ್ಲಿ ಭೂಕಂಪನ
Next Article ಜೈಲಿನಿಂದಲೇ ಮಾಧ್ಯಮಗಳ ವಿರುದ್ಧ ದರ್ಶನ್ ಆಕ್ರೋಶ, ಕೇಂದ್ರ ಸರ್ಕಾರದ‌ ಮೇಲೂ ಅಸಮಾಧಾನ

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?