Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೈಸೂರು ಜಿಲ್ಲಾಧಿಕಾರಿ ಬಂಧನಕ್ಕೆ ಕೋರ್ಟ್‌ನಿಂದ ವಾರಂಟ್ ಜಾರಿ
ಕರ್ನಾಟಕದೇಶಪ್ರಮುಖ

ಮೈಸೂರು ಜಿಲ್ಲಾಧಿಕಾರಿ ಬಂಧನಕ್ಕೆ ಕೋರ್ಟ್‌ನಿಂದ ವಾರಂಟ್ ಜಾರಿ

Share
2 Min Read
SHARE

 

newsics.com

ಮೈಸೂರು: ಭೂ ವ್ಯಾಜ್ಯದ ಸಂಬಂಧ ಮೈಸೂರಿನ ಒಂದನೇ ಅಪರ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ ನ್ಯಾಯಾಲಯದಿಂದ ಹೊರಡಿಸಿದ್ದ ಆದೇಶವನ್ನು ಪಾಲನೆ ಮಾಡದ ಹಿನ್ನೆಲೆಯಲ್ಲಿ ಮೈಸೂರಿನ ಜಿಲ್ಲಾಧಿಕಾರಿಗಳ ಬಂಧನಕ್ಕೆ ವಾರಂಟ್​​ ಜಾರಿ ಮಾಡಲಾಗಿದೆ.

ಜಿಲ್ಲಾಡಳಿತ ಸ್ವಾಧೀನ ಪಡಿಸಿಕೊಂಡಿದ್ದ ಕುಂಬಾರ ಕೊಪ್ಪಲಿನ ನಿವಾಸಿ ಜಯರಾಮು ಅವರ ಜಮೀನು ಸಂಬಂಧ ಕೋರ್ಟ್ ಆದೇಶ ಮಾಡಿತ್ತು. ಈ ಆದೇಶವನ್ನು ಜಿಲ್ಲಾಧಿಕಾರಿಗಳು ಪಾಲನೆ ಮಾಡಿಲ್ಲ ಎಂದು ಜಯರಾಮು ಅವರು ಮತ್ತೆ ಕೋರ್ಟ್ ಮೊರೆ ಹೋಗಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಧೀಶರು, ಡಿಸಿ ಅವರ ಬಂಧನಕ್ಕೆ ವಾರಂಟ್​ ಜಾರಿ ಮಾಡಿದ್ದಾರೆ.

ಏನಿದು ಪ್ರಕರಣ? ನಗರದ ಕುಂಬಾರ ಕೊಪ್ಪಲಿನ ಸೀತಾರಾಮೇಗೌಡ ಅವರಿಗೆ ಸೇರಿದ್ದ ಹೆಬ್ಬಾಳು ಗ್ರಾಮದ ಸರ್ವೇ ನಂ.155, 159/1 ವ್ಯಾಪ್ತಿಯಲ್ಲಿ ಐದು ಎಕರೆ ಪ್ರದೇಶವನ್ನು 1980 ಸಮಯದಲ್ಲಿ ನಗರ ಭೂ ಮಿತಿ ಕಾಯಿದೆಯಡಿ ಜಿಲ್ಲಾಡಳಿತ ಸ್ವಾಧೀನ ಪಡಿಸಿಕೊಂಡಿತ್ತು. ಇದನ್ನು ಪ್ರಶ್ನಿಸಿ ಸೀತಾರಾಮೇಗೌಡ ಅವರ ಮಗ ಚೆಲುವೇಗೌಡ ಮತ್ತು ಮೊಮ್ಮಗ ಜಯರಾಮು ಮೈಸೂರಿನ ಒಂದನೇ ಅಪರ ಸಿವಿಲ್ ನ್ಯಾಯಾಲಯದ ಮೊರೆ ಹೋಗಿದ್ದರು. ಕೋರ್ಟ್​ನಲ್ಲಿ ಅರ್ಜಿದಾರರ ಪರವಾಗಿ ಆದೇಶ ಬಂದಿತ್ತು.

ಈ ಹಿನ್ನೆಲೆಯಲ್ಲಿ ಜಿಲ್ಲಾ ಆಡಳಿತವು ಮೈಸೂರಿನ ಹಿರಿಯ ಸಿವಿಲ್ ನ್ಯಾಯಾಲಯದ ಮೊರೆ ಹೋಗಿತ್ತು. ಹಿರಿಯ ಸಿವಿಲ್ ನ್ಯಾಯಾಲಯ ವಿಚಾರಣೆ ನಡೆಸಿ, ಕೆಳ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿತ್ತು. ಬಳಿಕ ಭೂ ಮಾಲೀಕರು ತಮ್ಮ ಪರವಾಗಿ ಕೋರ್ಟ್​ನಲ್ಲಿ ಬಂದ ಆದೇಶವನ್ನು ಜಾರಿಗೊಳಿಸುವ ಮೂಲಕ ಜಮೀನನ್ನು ತಮ್ಮ ಸುಪರ್ದಿಗೆ ನೀಡಬೇಕು ಎಂದು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಆದರೆ, ಈವರೆಗೆ ಜಿಲ್ಲಾಡಳಿತ ಯಾವುದೇ ಕ್ರಮ ವಹಿಸಿರಲಿಲ್ಲ. ಪರಿಣಾಮವಾಗಿ ಭೂ ಮಾಲೀಕರು, ಕೋರ್ಟ್ ಆದೇಶವನ್ನು ಅನುಷ್ಠಾನಗೊಳಿಸಲು ಸೂಚನೆ ನೀಡಬೇಕು ಎಂದು ಮತ್ತೆ ಕೋರ್ಟ್ ಮೊರೆ ಹೋಗಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಧೀಶರು, ಆದೇಶವನ್ನು ಪಾಲನೆ ಮಾಡದ ಜಿಲ್ಲಾಧಿಕಾರಿಗಳ ಬಂಧನಕ್ಕೆ ವಾರೆಂಟ್ ಜಾರಿಗೊಳಿಸಿ, ವಿಚಾರಣೆಯನ್ನು ಏ.24 ಮುಂದೂಡಿದ್ದಾರೆ ಎಂದು ಜಯರಾಮು ಪರ ವಕೀಲ ನಾಗರಾಜು ಮಾಹಿತಿ ನೀಡಿದರು.

ಜಿಲ್ಲಾಧಿಕಾರಿಯ ಸ್ಪಷ್ಟನೆ ಏನು?: ಕೋರ್ಟ್ ಹೊರಡಿಸಿರುವ ವಾರೆಂಟ್ ಪ್ರತಿ ಸಿಕ್ಕಿಲ್ಲ. ಪ್ರತಿ ಸಿಕ್ಕ ನಂತರ ಪರಿಶೀಲನೆ ನಡೆಸಿ ಮುಂದಿನ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.

15 ದಿನಗಳ ಕಾಲ ರೂಮಲ್ಲಿ ಒಂಟಿಯಾಗಿ ತಾಯಿಗಾಗಿ ಕಾದ 6 ವರ್ಷದ ಬಾಲಕ!

ಮೂರನೇ ಮಗುವೂ ಹೆಣ್ಣಾಗುತ್ತೆ ಎಂದು ಗರ್ಭಿಣಿ ಹೆಂಡತಿ, ಮಕ್ಕಳನ್ನು ನೀರಲ್ಲಿ ಮುಳುಗಿಸಿ ಕೊಂದ ಪಾಪಿ

ಗುಜರಾತ್‌ಗೆ ಬರುತ್ತಿದ್ದ ಇರಾನಿನ ತೈಲ ಟ್ಯಾಂಕರ್ ಕೊನೆಯ ಕ್ಷಣದಲ್ಲಿ ಚೀನಾಕ್ಕೆ ತಿರುಗಿದ್ದೇಕೆ?

TAGGED:Court issues arrest warrant for Mysore District Collector
Share This Article
Facebook Twitter Copy Link Print
Previous Article ಗುಜರಾತ್‌ಗೆ ಬರುತ್ತಿದ್ದ ಇರಾನಿನ ತೈಲ ಟ್ಯಾಂಕರ್ ಕೊನೆಯ ಕ್ಷಣದಲ್ಲಿ ಚೀನಾಕ್ಕೆ ತಿರುಗಿದ್ದೇಕೆ?
Next Article ಅಮೆರಿಕದ F-35 ಯುದ್ಧ ವಿಮಾನ ಹೊಡೆದುರುಳಿಸಿದ ಇರಾನ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?