https://youtube.com/shorts/7-1-Ue0Sh8o?si=UJX_wGWxwj6xGzu4
newsics.com
ಸರ್ಕಾರಿ ಉದ್ಯೋಗಿ ಮಹಿಳೆ ಮೇಲೆ ಅತ್ಯಾಚಾರ ನಡೆಸಿ, ಖಾಸಗಿ ಭಾಗಕ್ಕೆ ಕಬ್ಬಿಣದ ರಾಡ್‌ನಿಂದ ಚಿತ್ರಹಿಂಸೆ ನೀಡಿರುವ ಘಟನೆ ಪಲ್ನಾಡು ಜಿಲ್ಲೆಯ ಮಾಚೆರ್ಲಾದಲ್ಲಿ ನಡೆದಿದೆ.
ಆರೋಪಿ ಕುಡಿಯಲು ನೀರು ಕೇಳುವ ನೆಪದಲ್ಲಿ ಸಂತ್ರಸ್ತೆಯ ಮನೆಗೆ ನುಗ್ಗಿ, ಆರೋಪಿಯು ಆಕೆಯನ್ನು ಸ್ಕಾರ್ಫ್‌ನಿಂದ ಕಟ್ಟಿ, ಚಾಕು ತೋರಿಸಿ ಅತ್ಯಾಚಾರ ಮಾಡಿ, ಥಳಿಸಿದ್ದಾನೆ. ಈ ವೇಳೆ ಮಹಿಳೆ ತನಗೆ ಎಚ್‌ಐವಿ ಸೋಂಕು ಇದೆ ಎಂದು ಹೇಳಿಕೊಂಡ, ಕೋಪದಿಂದ ಕಬ್ಬಿಣದ ರಾಡ್ ಅನ್ನು ಆಕೆಯ ಖಾಸಗಿ ಭಾಗಕ್ಕೆ ತುರುಕಿದ್ದಾನೆ. ನಂತರ ಅಲ್ಲಿಂದ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.
ಸಂತ್ರಸ್ತೆಯ ಜೊತೆ ವಾಸವಾಗಿದ್ದ ಆಕೆಯ ಸೋದರಳಿಯ ಹತ್ತನೇ ತರಗತಿ ಪರೀಕ್ಷೆ ಮುಗಿಸಿ ತನ್ನ ಹೆತ್ತವರ ಮನೆಗೆ ತೆರಳಿದಾಗ ಈ ವಿಷಯ ಬೆಳಕಿಗೆ ಬಂದಿದೆ. ಬಾಲಕ ಸಂತ್ರಸ್ತೆಯ ಮೊಬೈಲ್ ಫೋನ್‌ಗೆ ಹಲವು ಬಾರಿ ಕರೆ ಮಾಡಿದರೂ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಏನೋ ಸಮಸ್ಯೆಯಾಗಿದೆ ಎಂದು ತಿಳಿದು ಅವನು ತನ್ನ ಸ್ನೇಹಿತರು ಮತ್ತು ಕುಟುಂಬ ಸದಸ್ಯರಿಗೆ ಆಕೆಯ ಮನೆಗೆ ಭೇಟಿ ನೀಡಿ ವಿಚಾರಿಸುವಂತೆ ಹೇಳಿದ್ದಾನೆ. ಬಾಲಕ ಮಾತಿನಂತೆ ಸ್ಥಳೀಯರು ಮಹಿಳೆಯ ಮನೆಗೆ ಧಾವಿಸಿ ನೋಡಿದಾಗ ಆಕೆ ಪ್ರಜ್ಞಾಹೀನಳಾಗಿ ಬಿದ್ದಿರುವುದನ್ನು ನೋಡಿದ್ದಾರೆ
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಈ ಪ್ರಕರಣ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
https://www.newsics.com/2026/04/04/cement-price-to-increase-by-rs-50-per-bag-from-tomorrow/