https://youtube.com/shorts/G0oN8U59OVY?si=rbIwZ4fR9fKtFNQ-
newsics.com
ಕಾರವಾರ: ಎರಡು ಬಸ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬಸ್ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಕೊಳಗಿಬೀಸ್ ಬಳಿ ನಡೆದಿದೆ.
ಶಿರಸಿ-ಕುಮಟಾ ರಸ್ತೆಯ ಕೊಳಗಿಬೀಸ್ ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಭಟ್ಕಳದಿಂದ ಬಾಗಲಕೋಟೆಗೆ ಹೊರಟಿದ್ದ ಕೆಎಸ್ಆರ್‌ಟಿಸಿ ಬಸ್ ಹಾಗೂ ಶಿರಸಿಯಿಂದ ಕುಮಟಾ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ಎರಡೂ ಬಸ್‌ಗಳು ವೇಗವಾಗಿ ಚಲಿಸುತ್ತಿದ್ದ ಪರಿಣಾಮ, ಡಿಕ್ಕಿಯ ರಭಸಕ್ಕೆ ಬಸ್‌ಗಳ ಮುಂಭಾಗ ಸಂಪೂರ್ಣವಾಗಿ ಜಖಂ ಆಗಿವೆ.
ಈ ಭೀಕರ ಅಪಘಾತದಲ್ಲಿ ಎರಡೂ ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ಅಪಘಾತ ಸಂಭವಿಸಿದ ಕೂಡಲೇ ಸ್ಥಳೀಯರು ಹಾಗೂ ದಾರಿಹೋಕರು ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಶಿರಸಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಪೈಕಿ ಐದಾರು ಪ್ರಯಾಣಿಕರ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
https://www.newsics.com/2026/04/04/plane-crash-iran-offers-huge-reward-for-finding-us-soldier/