Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗಂಡು ಮಕ್ಕಳಿಗೂ KSRTC ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಸಾಧ್ಯತೆ
ಕರ್ನಾಟಕಪ್ರಮುಖ

ಗಂಡು ಮಕ್ಕಳಿಗೂ KSRTC ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಸಾಧ್ಯತೆ

Share
2 Min Read
SHARE

newsics.com

ಬೆಂಗಳೂರು: ಮಕ್ಕಳ ಸುರಕ್ಷತೆ ಮತ್ತು ಶಾಲಾ ಪ್ರಯಾಣ ಸುಗಮಗೊಳಿಸುವ ಉದ್ದೇಶದಿಂದ ರಾಜ್ಯ ಸರಕಾರ ವಿದ್ಯಾರ್ಥಿ ಸ್ನೇಹಿ ಸಾರಿಗೆ ವ್ಯವಸ್ಥೆ ಜಾರಿಗೆ ತರಲು ಮುಂದಾಗಿದೆ.

ಮಕ್ಕಳಿಗೆ ಸುರಕ್ಷತೆ ಹಾಗೂ ವಿಶ್ವಾಸಾರ್ಹ ಸಾರಿಗೆ ಸೌಲಭ್ಯ ಒದಗಿಸಲು ಮಕ್ಕಳ ಸ್ನೇಹಿ ಸಾರಿಗೆ ವ್ಯವಸ್ಥೆ ಅನುಷ್ಠಾನಕ್ಕೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸು ಮಾಡಿತ್ತು.

ಶಿಫಾರಸು ಪರಿಶೀಲಿಸಿ ಕ್ರಮವಹಿಸುವಂತೆ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧೀನ ಕಾರ್ಯದರ್ಶಿ(ಸಾರಿಗೆ ಇಲಾಖೆ), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ವ್ಯವಸ್ಥಾಪಕರಿಗೆ ನಿರ್ದೇಶಿಸಿದ್ದಾರೆ.

ಆಯೋಗದ ಶಿಫಾರಸು:

ರಾಜ್ಯದಲ್ಲಿ ಗ್ರಾಮೀಣ ಮತ್ತು ಹಿಂದುಳಿದ ವರ್ಗಗಳ ಮಕ್ಕಳು ಹೆಚ್ಚಾಗಿ ಕೆಎಸ್ಸಾರ್ಟಿಸಿ, ಬಿಎಂಟಿಸಿ ಸೇರಿದಂತೆ ಸಾರ್ವಜನಿಕ ಸಾರಿಗೆ ಅವಲಂಬಿಸಿದ್ದಾರೆ. ಮಕ್ಕಳು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಬಸ್‌ಗಳಿಂದ ಬಿದ್ದು ಗಾಯಗೊಂಡಿರುವ ಪ್ರಕರಣಗಳೂ ಇವೆ. ಇದನ್ನು ತಪ್ಪಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ವಿದ್ಯಾರ್ಥಿ ಸ್ನೇಹಿ ಸಾರಿಗೆಗೆ ಶಿಫಾರಸು ಮಾಡಿತ್ತು.

ಉಚಿತ ಪ್ರಯಾಣಕ್ಕೆ ಶಿಫಾರಸು:

ರಾಜ್ಯದಲ್ಲಿ ಈಗಾಗಲೇ ಹೆಣ್ಣು ಮಕ್ಕಳ ಉಚಿತ ಪ್ರಯಾಣಕ್ಕೆ ಅವಕಾಶವಿದೆ. ಉಚಿತ ಪ್ರಯಾಣ ಅವಕಾಶವನ್ನು 12 ನೇ ತರಗತಿವರೆಗೆ ಗಂಡು ಮಕ್ಕಳಿಗೂ ವಿಸ್ತರಿಸಬೇಕು. ಪ್ರತಿ, ಶಾಲೆ-ಕಾಲೇಜು ಮಾರ್ಗದಲ್ಲಿ ಓದುತ್ತಿರುವ ಮಕ್ಕಳ ನಿಖರ ದತ್ತಾಂಶ ಸಂಗ್ರಹಿಸಿ ರೂಟ್‌ ಪ್ಲಾನಿಂಗ್‌ ಮಾಡಬೇಕು. ಸಾರಿಗೆ ವ್ಯವಸ್ಥೆ ಶಿಕ್ಷಣಕ್ಕೆ ಅಡ್ಡಿಯಾಗಬಾರದು ಎಂದು ಆಯೋಗ ಶಿಫಾರಸ್ಸಿನಲ್ಲಿ ತಿಳಿಸಿತ್ತು. ಅಂತೆಯೇ ಹೆಚ್ಚು ವಿದ್ಯಾರ್ಥಿಗಳಿರುವ ಗ್ರಾಮೀಣ ಮಾರ್ಗಗಳಲ್ಲಿ ವಿಶೇಷ ಸ್ಕೂಲ್‌ ಮತ್ತು ಕಾಲೇಜು ಬಸ್‌ಗಳನ್ನು ಆರಂಭಿಸುವುದು, ತರಗತಿ ಸಮಯಕ್ಕೆ ತಕ್ಕಂತೆ ಬೆಳಗ್ಗೆ ಮತ್ತು ಸಂಜೆ ಹೆಚ್ಚುವರಿ ಟ್ರಿಪ್‌ಗಳು ‘ಮಕ್ಕಳ ಸ್ನೇಹಿ ಸಾರಿಗೆ’ ವ್ಯವಸ್ಥೆಯಲ್ಲಿರಲಿದೆ.

ಮಕ್ಕಳ ಸ್ನೇಹಿ ಸಾರಿಗೆ ರೂಪು-ರೇಷೆ

ಶಾಲಾ-ಕಾಲೇಜು ಸಮಯಕ್ಕೆ ಅಗತ್ಯ ಹೆಚ್ಚುವರಿ ವಿಶೇಷ ಬಸ್‌ ಸೌಲಭ್ಯ.

ಎಲ್ಲಾ ಬಸ್‌ಗಳಲ್ಲಿ ಸಿಸಿಟಿವಿ ಕಡ್ಡಾಯ, ಜಿಪಿಎಸ್‌ ನಿಗಾ, ತುರ್ತು ಪ್ಯಾನಿಕ್‌ ಬಟನ್‌ ಅಳವಡಿಕೆ.

ಮಕ್ಕಳ ಸಹಾಯವಾಣಿ 1098 ಪ್ರದರ್ಶಿಸುವುದು ಕಡ್ಡಾಯ.

ಬಸ್‌ ಸೇವೆಯಲ್ಲಿ ಮಾರ್ಗ ಮತ್ತು ಸಮಯ ಪಾಲನೆ ಕಟ್ಟುನಿಟ್ಟಾಗಿ ಜಾರಿಗೊಳಿಸುವುದು.

ಬಸ್‌ ಚಾಲಕರು, ಸಿಬ್ಬಂದಿಗೆ ಮಕ್ಕಳ ಹಕ್ಕು ತರಬೇತಿ, ಪ್ರತಿವರ್ಷ ರಿಫ್ರೆಶರ್‌ ಕೋರ್ಸ್‌ ಕಡ್ಡಾಯ. ಪೋಕ್ಸೊ, ಜೆಜೆ ಆಯಕ್ಟ್ ಬಗ್ಗೆ ತರಬೇತಿ.

ಹೆಚ್ಚಿನ ವಿದ್ಯಾರ್ಥಿನಿಯರು ಇರುವ ರೂಟ್‌ಗಳಲ್ಲಿ ಮಹಿಳಾ ಕಂಡಕ್ಟರ್‌ ಕಡ್ಡಾಯ.

 

ಹಾರ್ಮೋನ್ ಸಮಸ್ಯೆಯಿಂದ ಬರಬಹುದು ಕ್ಯಾನ್ಸರ್! ವೈದ್ಯರಿಂದ ಆಘಾತಕಾರಿ ಅಂಶ ಬಯಲು

TAGGED:Possibility of free travel facility in KSRTC buses for boys too
Share This Article
Facebook Twitter Copy Link Print
Previous Article ಹಾರ್ಮೋನ್ ಸಮಸ್ಯೆಯಿಂದ ಬರಬಹುದು ಕ್ಯಾನ್ಸರ್! ವೈದ್ಯರಿಂದ ಆಘಾತಕಾರಿ ಅಂಶ ಬಯಲು
Next Article 30ನೇ ವಸಂತಕ್ಕೆ ಕಾಲಿಟ್ಟ ರಶ್ಮಿಕಾ!;ವಿಜಯ್ ದೇವರಕೊಂಡ ಕೊಟ್ಟ ಬಿಗ್ ಸರ್ಪ್ರೈಸ್ ಏನು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?