ಅಶ್ಲೀಲ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್ ಮೇಲ್: 19 ಲಕ್ಷ ರೂಪಾಯಿ ಕಳೆದುಕೊಂಡ ಸಂತ್ರಸ್ತೆ

ಮದುವೆಯಾಗುವುದಾಗಿ ನಂಬಿಸಿದ್ದ ಯುವಕನೊಬ್ಬ ಯುವತಿಗೆ ಕೈಕೊಟ್ಟಿದ್ದಲ್ಲದೇ ಬ್ಲ್ಯಾಕ್ ಮೇಲ್ ಮಾಡಿ 19 ಲಕ್ಷ ರೂಪಾಯಿ ದೋಚಿರುವ ಘಟನೆಬೆಳಗಾವಿಯ ಶಹಾಪುರದಲ್ಲಿ ನಡೆದಿದೆ. ಬೆಳಗಾವಿಯ ಮಾಧವಾ ಕಾಲೋನಿ ನಿವಾಸಿ ಈಶ್ವರಸಿಂಗ್ ಪ್ರೇಮಸಿಂಗ್ ಬಡಗೂಜರ್ ಎಂಬಾತ ಈ ರೀತಿ ಕೃತ್ಯವೆಸಗಿದ್ದಾನೆ. ಫೇಸ್‌ಬುಕ್ ಮೂಲಕ ಯುವತಿಯ ಪರಿಚಯ ಮಾಡಿಕೊಂಡಿದ್ದ ಈತ, ಬಳಿಕ ಯುವತಿಯನ್ನು ಪ್ರೀತಿಸುತ್ತಿರುವುದಾಗಿ ಹೇಳಿ, ಮದುವೆಯಾಗುವುದಾಗಿ ನಂಬಿಸಿದ್ದಾನೆ. ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ, ಯುವತಿಗೆ ತಿಳಿಯದಂತೆ ಖಾಸಗಿ ವಿಡಿಯೋ ಚಿತ್ರೀಕರಿಸಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾಳೆ. ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ … Continue reading ಅಶ್ಲೀಲ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್ ಮೇಲ್: 19 ಲಕ್ಷ ರೂಪಾಯಿ ಕಳೆದುಕೊಂಡ ಸಂತ್ರಸ್ತೆ