ಮಾರುಕಟ್ಟೆಯಿಂದ ತಂದಿದ್ದ ರೆಡಿಮೇಡ್ ದೋಸೆ ಹಿಟ್ಟಿನಿಂದ ತಯಾರಿಸಿದ ದೋಸೆ ಸೇವಿಸಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ದಂಪತಿಗಳು ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ನಡೆದಿದೆ.
ಚಾಂದ್‌ಖೇಡಾ ನಿವಾಸಿಗಳಾದ ವಿಮಲ್ ಪ್ರಜಾಪತಿ ಮತ್ತು ಭಾವನಾ ಪ್ರಜಾಪತಿ ದಂಪತಿಗಳು ಸ್ಥಳೀಯ ಡೈರಿಯಿಂದ ದೋಸೆ ಹಿಟ್ಟನ್ನು ಖರೀದಿಸಿ ತಂದಿದ್ದರು. ಇದನ್ನು ಸೇವಿಸಿದ ಇಡೀ ಕುಟುಂಬಕ್ಕೆ ತೀವ್ರವಾಗಿ ವಾಂತಿ-ಭೇದಿಯಾಗಿ ಫುಡ್ ಪಾಯ್ಸನ್ ಆಗಿ ಪರಿಣಮಿಸಿದೆ. ಈ ದುರಂತದಲ್ಲಿ ಮೂರು ತಿಂಗಳ ಶಿಶು ರಾಹಾ ಮತ್ತು ನಾಲ್ಕು ವರ್ಷದ ಬಾಲಕಿ ಮಿಶ್ರಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ತಾಯಿ ಭಾವನಾ ಮತ್ತು ತಂದೆ ವಿಮಲ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.
ಸಾಮಾನ್ಯವಾಗಿ ಮೂರು ತಿಂಗಳ ಮಗುವಿಗೆ ದೋಸೆಯಂತಹ ಘನ ಆಹಾರವನ್ನು ನೀಡುವುದಿಲ್ಲ. ಹಾಗಿದ್ದರೂ ಮಗು ಸಾವನ್ನಪ್ಪಿದ್ದು ಹೇಗೆ ಎಂಬ ಪ್ರಶ್ನೆ ಎದ್ದಿದೆ. ತಾಯಿ ದೋಸೆ ಸೇವಿಸಿ ವಿಷಾಹಾರದ ಸಮಸ್ಯೆಗೆ ತುತ್ತಾದ ನಂತರ ಮಗುವಿಗೆ ಸ್ತನ್ಯಪಾನ ಮಾಡಿಸಿರಬಹುದು, ಇದರಿಂದ ಮಗುವಿನ ಮೇಲೆ ಪರಿಣಾಮ ಬೀರಿದೆ ಎಂಬ ಸಂಶಯ ವ್ಯಕ್ತವಾಗಿದೆ.
ಚಾಂದ್‌ಖೇಡಾ ಪೊಲೀಸರು ಮತ್ತು ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್‌ನ ಆಹಾರ ಇಲಾಖೆ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಆಹಾರದ ಮಾದರಿಗಳನ್ನು ಸಂಗ್ರಹಿಸಿದ್ದಾರೆ. ನಿಖರ ಕಾರಣ ತಿಳಿಯಲು ವಿಧಿವಿಜ್ಞಾನ ಪ್ರಯೋಗಾಲಯದ (FSL) ನೆರವು ಪಡೆಯಲಾಗುತ್ತಿದೆ. ಮಕ್ಕಳ ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವೇ ಇದು ಕೇವಲ ಫುಡ್ ಪಾಯ್ಸನಿಂಗ್ ಅಥವಾ ಆಹಾರದಲ್ಲಿನ ಕಲಬೆರಕೆಯೇ ಎಂಬುದು ಸ್ಪಷ್ಟವಾಗಲಿದೆ.
ಕಾಲ್‌ನಲ್ಲಿ ಗಂಡ ನೋಡುತ್ತಿರುವಾಗಲೇ ಖ್ಯಾತ ನಟಿ ಸುಭಾಷಿಣಿ ಆತ್ಮ*ಹತ್ಯೆ!