Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತಂದೆ ಮಗನ ಲಾಕಪ್ ಡೆತ್ ಪ್ರಕರಣ : 9 ಪೊಲೀಸರಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್
ದೇಶಪ್ರಮುಖ

ತಂದೆ ಮಗನ ಲಾಕಪ್ ಡೆತ್ ಪ್ರಕರಣ : 9 ಪೊಲೀಸರಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್

Share
1 Min Read
SHARE

https://youtube.com/shorts/cT9AQdRv8BA?si=HVgZ6-lH8mLj32-K

newsics.com

ಚೆನ್ನೈ:ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾಥನ್‌ಕುಲಂನಲ್ಲಿ ನಡೆದ ಜಯರಾಜ್ ಮತ್ತು ಬೆನ್ನಿಕ್ಸ್ ತಂದೆ-ಮಗನ ಅಮಾನವೀಯ ಲಾಕಪ್ ಡೆತ್ ಪ್ರಕರಣದಲ್ಲಿ ಮಧುರೈ ಜಿಲ್ಲಾ ನ್ಯಾಯಾಲಯವು ಐತಿಹಾಸಿಕ ತೀರ್ಪು ನೀಡಿದೆ. ಇನ್ಸ್‌ಪೆಕ್ಟರ್ ಸೇರಿದಂತೆ ಒಟ್ಟು 9 ಪೊಲೀಸರನ್ನು ತಪ್ಪಿತಸ್ಥರೆಂದು ಘೋಷಿಸಿರುವ ನ್ಯಾಯಾಲಯ, ಎಲ್ಲರಿಗೂ ಗಲ್ಲು ಶಿಕ್ಷೆ ವಿಧಿಸಿ ಆದೇಶಿಸಿದೆ.

2020ರ ಜೂನ್‌ನ ಲಾಕ್‌ಡೌನ್ ವೇಳೆ ತಮಿಳುನಾಡಿನ ಮೊಬೈಲ್ ಅಂಗಡಿಯನ್ನು ಹೆಚ್ಚುವರಿ ಸಮಯ ತೆರೆದಿದ್ದಕ್ಕಾಗಿ ಜಯರಾಜ್ ಮತ್ತು ಅವರ ಮಗ ಬೆನ್ನಿಕ್ಸ್ ಅವರನ್ನು ಬಂಧಿಸಲಾಗಿತ್ತು. ನಂತರ ಪೊಲೀಸ್ ಠಾಣೆಯಲ್ಲಿ ಪೊಲೀಸರು ನಡೆಸಿದ ಭೀಕರ ಹಲ್ಲೆಯಿಂದ ಇಬ್ಬರೂ ಮೃತಪಟ್ಟಿದ್ದರು. ಈ ಘಟನೆ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು.

ಮುಂದುವರೆದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ನ್ಯಾಯಾಲಯವು ಇದರ ತನಿಖೆಯನ್ನು ಸಿಬಿಐಗೆ ವಹಿಸಿತ್ತು. ಅದರಂತೆ, ತನಿಖೆಯಲ್ಲಿ ಅಂದಿನ ಇನ್ಸ್‌ಪೆಕ್ಟರ್ ಶ್ರೀಧರ್, ಸಬ್ ಇನ್ಸ್‌ಪೆಕ್ಟರ್‌ಗಳಾದ ರಘು ಗಣೇಶ್, ಬಾಲಕೃಷ್ಣನ್ ಸೇರಿದಂತೆ ಒಂಬತ್ತು ಮಂದಿ ಪೊಲೀಸರು ಸಾವಿಗೆ ನೇರ ಕಾರಣ ಎಂದು ಸಾಕ್ಷ್ಯಾಧಾರಗಳ ಮೂಲಕ ಸಾಬೀತಾಯಿತು. ಅದರಂತೆ, ಆರೋಪಿಗಳನ್ನು ಮಧುರೈ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿ ಇರಿಸಲಾಗಿತ್ತು.

ಈ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಸಾಕಾಗುವುದಿಲ್ಲ, ಎಲ್ಲರೂ ಸಮಾನ ಅಪರಾಧಿಗಳು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ‘ಯಾರು ಹೆಚ್ಚು ಹಿಂಸೆ ನೀಡಿದರು ಎಂಬ ಪ್ರಶ್ನೆ ಇಲ್ಲಿ ಅಪ್ರಸ್ತುತ’ ಎಂದು ಕೋರ್ಟ್ ಹೇಳಿದೆ. ಶಿಕ್ಷೆಗೊಳಗಾದವರಲ್ಲಿ ಒಬ್ಬ ಇನ್ಸ್‌ಪೆಕ್ಟರ್, ಇಬ್ಬರು ಸಬ್‌-ಇನ್ಸ್‌ಪೆಕ್ಟರ್‌ಗಳು, ಇಬ್ಬರು ಹೆಡ್ ಕಾನ್‌ಸ್ಟೆಬಲ್‌ಗಳು ಮತ್ತು ನಾಲ್ವರು ಕಾನ್‌ಸ್ಟೆಬಲ್‌ಗಳು ಸೇರಿದ್ದಾರೆ. ಈ ಕೃತ್ಯದ ನೇತೃತ್ವ ವಹಿಸಿದ್ದ ಇನ್ಸ್‌ಪೆಕ್ಟರ್ ಶ್ರೀಧರ್‌ಗೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ 2 ಬಾರಿ ಗಲ್ಲು ಶಿಕ್ಷೆ ಮತ್ತು 84 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.

https://www.newsics.com/2026/04/07/couple-who-had-returned-from-iran-on-vacation-locked-up-in-kodagu/

TAGGED:Father-son lockup death case: Court sentences 9 policemen to death
Share This Article
Facebook Twitter Copy Link Print
Previous Article ರಜೆ ಮೇಲೆ ಇರಾನ್‌ನಿಂದ ಬಂದಿದ್ದ ದಂಪತಿ ಕೊಡಗಿನಲ್ಲೇ ಲಾಕ್‌
Next Article ಜಾಮೀನು ಅರ್ಜಿಯನ್ನೇ ಹಿಂಪಡೆದ ನಟಿ ಪವಿತ್ರಾ ಗೌಡ! ಕಾರಣವೇನು?

Popular Posts

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?