newsics.com
ಚಿಕ್ಕಮಗಳೂರು: ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಮಾಣಿಕ್ಯಧಾರ ಜಲಪಾತದ ಬಳಿ ಕೇರಳದ ಪಾಲಕ್ಕಾಡ್ ಮೂಲದ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ನಾಪತ್ತೆಯಾಗಿದ್ದು, ಕುಟುಂಬದವರು ಹಾಗೂ ಪೊಲೀಸರು ಹುಟುಕಾಟ ನಡೆಸಿದ್ದಾರೆ.
ನಂದನಾ ನಾಪತ್ತೆಯಾದ ವಿದ್ಯಾರ್ಥಿನಿ. ಸುಮಾರು 40 ಪ್ರವಾಸಿಗರ ತಂಡದೊಂದಿಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿ, ಕುಟುಂಬ ಸದಸ್ಯರ ಕಣ್ಣೆದುರೇ ಮಂಗಳವಾರ ಸಂಜೆ ನಿಗೂಢವಾಗಿ ಕಾಣೆಯಾಗಿದ್ದಾಳೆ.
ವಿಷಯ ತಿಳಿಯುತ್ತಿದ್ದಂತೆ ಅಖಾಡಕ್ಕಿಳಿದ ಗ್ರಾಮಾಂತರ ಪೊಲೀಸರು ಮತ್ತು ಅರಣ್ಯ ಇಲಾಖೆಯ 30ಕ್ಕೂ ಹೆಚ್ಚು ಸಿಬ್ಬಂದಿ ಮಂಗಳವಾರ ಮಧ್ಯರಾತ್ರಿ 1 ಗಂಟೆಯವರೆಗೆ ಬೆಟ್ಟದ ಮೂಲೆ ಮೂಲೆಗಳಲ್ಲಿ ಹುಡುಕಾಟ ನಡೆಸಿದ್ದಾರೆ. ಆದರೆ, ದಟ್ಟವಾದ ಮಂಜು ಮತ್ತು ಕತ್ತಲೆಯ ಕಾರಣದಿಂದ ಕಾರ್ಯಾಚರಣೆಗೆ ಅಡ್ಡಿಯಾಗಿದ್ದು, ಯಾವುದೇ ಸುಳಿವು ಸಿಗದೆ ತಂಡಗಳು ವಾಪಸ್ಸಾಗಿದ್ದವು.
ಇಂದು (ಬುಧವಾರ) ಬೆಳಗ್ಗಿನಿಂದಲೇ ಶೋಧ ಕಾರ್ಯ ಮತ್ತೆ ಬಿರುಸುಗೊಂಡಿದ್ದು, ಈ ಬಾರಿ ಆಧುನಿಕ ಡ್ರೋನ್ ಕ್ಯಾಮರಾಗಳ ಸಹಾಯದಿಂದ ರಕ್ಷಣಾ ತಂಡಗಳು ಕಾಡಿನ ಒಳಭಾಗಗಳಲ್ಲೂ ಪರಿಶೀಲನೆ ನಡೆಯುತ್ತಿವೆ. ಪಶ್ಚಿಮ ಘಟ್ಟದ ಕಡಿದಾದ ಬೆಟ್ಟಗಳು ಮತ್ತು ದಟ್ಟಾರಣ್ಯದ ಸವಾಲುಗಳ ನಡುವೆಯೂ ಅಗ್ನಿಶಾಮಕ ದಳ ಮತ್ತು ಪೊಲೀಸ್ ಸಿಬ್ಬಂದಿ ಬಾಲಕಿಗಾಗಿ ಜಂಟಿ ಕಾರ್ಯಾಚರಣೆ ಮುಂದುವರಿಸಿದ್ದಾರೆ.
https://www.newsics.com/2026/04/08/father-son-lockup-death-case-tight-security-for-revathi-who-exposed-the-brutality-of-the-khaki-force/