newsics.com
ಇಸ್ರೇಲ್ ಮತ್ತು ಇರಾನ್ ನಡುವಿನ ಭೀಕರ ಕದನದಿಂದಾಗಿ ಕಾಫಿ ರಫ್ತು ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಮಾರುಕಟ್ಟೆಯಲ್ಲಿ ಕಾಫಿ ಬೆಲೆ ತೀವ್ರವಾಗಿ ಕುಸಿಯುತ್ತಿದೆ. ರಫ್ತು ಸ್ಥಗಿತಗೊಂಡ ಪರಿಣಾಮ ಕಾಫಿ ಬೆಲೆ ಶೇ 20ರಷ್ಟು ಕುಸಿದಿದ್ದು, ಬೆಲೆ ಏರಿಕೆಯ ನಿರೀಕ್ಷೆಯಲ್ಲಿದ್ದ ಕಾಫಿ ಬೆಳೆಗಾರರು ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಒಂದೆಡೆ ಯುದ್ಧದಿಂದ ರಫ್ತು ನಿಂತಿದ್ದರೆ, ಮತ್ತೊಂದೆಡೆ ಜಗತ್ತಿನ ಅತಿ ದೊಡ್ಡ ಕಾಫಿ ಬೆಳೆಗಾರ ರಾಷ್ಟ್ರಗಳಾದ ಬ್ರೆಜಿಲ್ ಮತ್ತು ವಿಯೆಟ್ನಾಂನಲ್ಲಿ ಈ ಬಾರಿ ಉತ್ತಮ ಫಸಲು ಬಂದಿದೆ. ಕಳೆದ ವರ್ಷ ಅಲ್ಲಿ ಫಸಲು ಕೈಕೊಟ್ಟಿದ್ದರಿಂದ ಭಾರತದ ಕಾಫಿಗೆ ಭಾರಿ ಬೇಡಿಕೆ ಇತ್ತು. ಆದರೆ ಈಗ ಆ ದೇಶಗಳಲ್ಲೂ ಫಸಲು ಚೆನ್ನಾಗಿರುವುದು ಮತ್ತು ಯುದ್ಧದ ಪರಿಣಾಮ ರಫ್ತು ರದ್ದಾಗಿರುವುದು ಬೆಳೆಗಾರರ ಗಾಯದ ಮೇಲೆ ಬರೆ ಎಳೆದಂತಾಗಿದೆ.
ಅರೇಬಿಕಾ ಕಾಫಿ: ಕಳೆದ ವರ್ಷ 50 ಕೆಜಿ ಚೀಲಕ್ಕೆ 29 ಸಾವಿರ ರೂ. ಇದ್ದ ಬೆಲೆ ಈಗ 23 ಸಾವಿರಕ್ಕೆ ಕುಸಿದಿದೆ. ರೊಬಸ್ಟಾ ಕಾಫಿ: 12 ಸಾವಿರ ರೂ. ಇದ್ದ ಬೆಲೆ ಈಗ ಕೇವಲ 8 ಸಾವಿರಕ್ಕೆ ಇಳಿಕೆಯಾಗಿದೆ.
ಸದ್ಯ, 2 ವಾರಗಳ ಮಟ್ಟಿಗೆ ಕದನ ವಿರಾಮ ಘೋಷಣೆಯಾಗಿದ್ದು, ಕಾಫಿ ಬೆಳೆಗಾರರ ಸಂಕಷ್ಟ ಬಗೆಹರಿಯುತ್ತದೆಯಾ ಕಾದುನೋಡಬೇಕಿದೆ.