https://youtube.com/shorts/AWyQA9JMFI4?si=6teca9JBs0VZQurx
newsics.com
ರಾಜ್ಯದಲ್ಲಿ ಹಲವು ದಿನಗಳು ಸಾಧಾರಣ ಮಳೆಯಾಗಿದೆ. ಆದರೆ ಇಂದು ಕೇವಲ ಮೂರು ಜಿಲ್ಲೆಗಳಲ್ಲಿ ಮಾತ್ರ ಮಳೆಯಾಗಲಿದ್ದು, ಹವಾಮಾನ ಇಲಾಖೆ 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ.
ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ ಮೂರು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ.
ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿಯೂ ಶುಷ್ಕ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
https://www.newsics.com/2026/04/08/constable-revathi-sentenced-9-police-officers-to-death/