newsics.com
ಬೆಂಗಳೂರು: ಋತುಚಕ್ರದ ರಜೆ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ನಿರ್ಧಾರ ಸಮರ್ಥಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದ್ದು, ಮಧ್ಯಂತರ ಅರ್ಜಿಗಳ ವಿಚಾರಣೆಗೆ ನ್ಯಾಯಾಲಯ ಒಪ್ಪಿಗೆ ನೀಡಿದೆ.
ರಾಜ್ಯದ ಉದ್ದಿಮೆಗಳ ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನ ವೇತನ ಸಹಿತ ರಜೆ ನೀಡಲು ಸರ್ಕಾರ ಅಧಿಸೂಚನೆ ಹೊರಡಿಸಿದೆ. ಇದನ್ನು ವಿರೋಧಿಸಿ ಹಲವರು ಅರ್ಜಿ ಸಲ್ಲಿಸಿದ್ದಾರೆ. ರಜೆಯ ಪರವಾಗಿ ಐದು ವಕೀಲರು ಮತ್ತು ಎರಡು ಸಂಘಟನೆಗಳಿಂದ ಅರ್ಜಿ ಸಲ್ಲಿಕೆಯಾಗಿದೆ.
ಎಐಸಿಟಿಯು, ಎಐಡಿಡಬ್ಲ್ಯೂಎ, ಬೆಂಗಳೂರಿನ 5 ಮಂದಿ ಮಹಿಳಾ ವಕೀಲರು ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ. ಈಗಾಗಲೇ ಕರ್ನಾಟಕ ಎಂಪ್ಲಾಯರ್ಸ್ ಅಸೋಸಿಯೇಷನ್, ಬೆಂಗಳೂರು ಹೋಟೆಲ್ಸ್ ಅಸೋಸಿಯೇಷನ್ ಮತ್ತು ವಿವಿಧ ಖಾಸಗಿ ವಲಯಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಉದ್ಯೋಗಿಗಳು ಹೈಕೋರ್ಟ್ ಗೆ ತಕರಾರು ಅರ್ಜಿ ಸಲ್ಲಿಸಿದ್ದಾರೆ.
2 ಸಂಘಟನೆಗಳು ಮತ್ತು ಮಹಿಳಾ ವಕೀಲರು ಸರ್ಕಾರದ ಕ್ರಮವನ್ನು ಸಮರ್ಥಿಸಿದ್ದಾರೆ. ಸರ್ಕಾರದ ಅಧಿಸೂಚನೆ ಪ್ರಶ್ನಿಸಿ ಬೆಂಗಳೂರು ಎಂಪ್ಲಾಯರ್ಸ್ ಅಸೋಸಿಯೇಷನ್ ಕೂಡ ಹೈ ಕೋರ್ಟ್ ಮೆಟ್ಟಿಲೇರಿದೆ. ನ್ಯಾಯಮೂರ್ತಿ ಅನಂತ್ ರಾಮನಾಥ ಹೆಗಡೆ ಅವರ ಪೀಠ ಎಲ್ಲ ಮಧ್ಯಂತರ ಅರ್ಜಿ ವಿಚಾರಣೆಗೆ ಅಂಗೀಕರಿಸಿದೆ.
https://www.newsics.com/2026/04/09/israel-launches-deadly-attack-after-ceasefire-250-dead/