https://youtube.com/shorts/9OUTrzsAEaE?si=-GbS-QxOxuzBuJvH
newsics.com
ಬೆಂಗಳೂರು: ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಮೂರನೇ ಮಹಡಿಯಿಂದ ಬಿದ್ದು ಒಂದೂವರೆ ವರ್ಷದ ಹೆಣ್ಣು ಮಗು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಘಟನೆ ಬೆಂಗಳೂರಿನ ನಾಯಂಡಹಳ್ಳಿಯಲ್ಲಿ ನಡೆದಿದೆ. ಈ ವಿಡಿಯೋ
ನವೀನ್ ಮತ್ತು ಜಯಶ್ರೀ ದಂಪತಿಯ ಒಂದೂವರೆ ವರ್ಷದ ಪುತ್ರಿ ಸಹಾನಾ, ಆಟವಾಡುತ್ತಾ ಮನೆಯ ಮುಖ್ಯ ಬಾಗಿಲಿನಿಂದ ಹೊರಬಂದು ಮೊದಲ ಮಹಡಿಯಿಂದ ಆಕಸ್ಮಿಕವಾಗಿ ಕೆಳಕ್ಕೆ ಬಿದ್ದಿದ್ದಾಳೆ. ಏಪ್ರಿಲ್ 6 ರಂದು ಈ ಘಟನೆ ನಡೆದಿದೆ.
ಮಗು ಕೆಳಕ್ಕೆ ಬಿದ್ದ ರಭಸಕ್ಕೆ ತಲೆಗೆ ಗಂಭೀರ ಗಾಯಗಳಾಗಿದ್ದು, ಪೋಷಕರು ಕಂಗಾಲಾಗಿದ್ದಾರೆ. ಮಗು ಬೀಳುವುದನ್ನು ಕಂಡ ತಾಯಿ ರಸ್ತೆಯಲ್ಲೇ ಪ್ರಜ್ಞೆ ತಪ್ಪಿ ಬಿದ್ದಿರುವುದು ಸಿಸಿಟಿವಿ ದೃಶ್ಯದಲ್ಲಿ ದಾಖಲಾಗಿದೆ.