https://youtube.com/shorts/9OUTrzsAEaE?si=-GbS-QxOxuzBuJvH
newsics.com
ಅಫ್ಘಾನಿಸ್ತಾನದ ಸ್ಟಾರ್ ಸ್ಪಿನ್ನರ್ ರಶೀದ್ ಖಾನ್ ತಮ್ಮ ಬೆನ್ನು ನೋವಿನ ಸಮಸ್ಯೆಯಿಂದಾಗಿ ಟೆಸ್ಟ್ ಕ್ರಿಕೆಟ್ ‘ಗೆ ನಿವೃತ್ತಿ ಘೋಷಿಸಲು ನಿರ್ಧರಿಸಿದ್ದಾರೆ.
2023ರ ವಿಶ್ವಕಪ್ ನಂತರ ರಶೀದ್ ಖಾನ್ ಬೆನ್ನು ನೋವಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ದೀರ್ಘಕಾಲ ಕ್ರಿಕೆಟ್ ಆಡಬೇಕೆಂದರೆ ಟೆಸ್ಟ್ ಕ್ರಿಕೆಟ್‌ನಿಂದ ದೂರವಿರಿ ಎಂದು ಲಂಡನ್‌ನ ವೈದ್ಯರು ಅವರಿಗೆ ಸಲಹೆ ನೀಡಿದ್ದರು. ಆದರೆ, ಕ್ರಿಕೆಟ್ ಮೇಲಿನ ಪ್ರೀತಿಯಿಂದ ಅವರು ವೈದ್ಯರ ಮಾತನ್ನು ನಿರ್ಲಕ್ಷಿಸಿ ಪಂದ್ಯಗಳನ್ನು ಆಡಿದ್ದರು.
ಶಸ್ತ್ರಚಿಕಿತ್ಸೆಯ ನಂತರ ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ನಾನು ಬರೋಬ್ಬರಿ 67 ಓವರ್‌ಗಳನ್ನು ಬೌಲಿಂಗ್ ಮಾಡಿದ್ದೆ. ಇದನ್ನು ಕೇಳಿ ನನ್ನ ವೈದ್ಯರೇ ಬೆಚ್ಚಿಬಿದ್ದರು. ‘ನಿನಗೆ ಕ್ರಿಕೆಟ್ ಆಡುವ ಆಸೆ ಇಲ್ಲದಿದ್ದರೆ ಮಾತ್ರ ಟೆಸ್ಟ್ ಕ್ರಿಕೆಟ್ ಮುಂದುವರಿಸು’ ಎಂದು ಅವರು ಖಡಕ್ ಆಗಿ ಎಚ್ಚರಿಸಿದ್ದರು, ಎಂದು ರಶೀದ್ ತಮ್ಮ ನೋವನ್ನು ಹಂಚಿಕೊಂಡಿದ್ದಾರೆ.
ಅಫ್ಘಾನಿಸ್ತಾನ ಇದುವರೆಗೆ 12 ಟೆಸ್ಟ್ ಪಂದ್ಯಗಳನ್ನು ಆಡಿದ್ದು, ರಶೀದ್ ಖಾನ್ ಅದರಲ್ಲಿ ಕೇವಲ 6 ಪಂದ್ಯಗಳಲ್ಲಿ ಭಾಗವಹಿಸಿದ್ದಾರೆ.
ನಾನು ದೀರ್ಘಕಾಲ ಕ್ರಿಕೆಟ್ ಆಡಬೇಕೆಂದರೆ ಕೆಂಪು ಚೆಂಡಿನ ಕ್ರಿಕೆಟ್‌ನಿಂದ ದೂರವಿರಬೇಕು ಎಂದು ವೈದ್ಯರು ತಿಳಿಸಿದ್ದಾರೆ. ಆದ್ದರಿಂದ ನಾನು ಏಕದಿನ ಮತ್ತು ಟಿ20 ಪಂದ್ಯಗಳಿಗೆ ಆದ್ಯತೆ ನೀಡಲಿದ್ದೇನೆ,” ಎಂದು ರಶೀದ್ ತಿಳಿಸಿದ್ದಾರೆ. 2026ರಲ್ಲಿ ಭಾರತದ ವಿರುದ್ಧ ನಡೆಯಲಿರುವ ಏಕದಿನ ಸರಣಿಯಲ್ಲಿ ರಶೀದ್ ಖಾನ್ ಭಾಗವಹಿಸುವ ಸಾಧ್ಯತೆಯಿದೆ. ಟೆಸ್ಟ್ ಕ್ರಿಕೆಟ್‌ಗೆ ಅವರು ವಿದಾಯ ಹೇಳುತ್ತಿರುವುದು ಅವರ ಅಭಿಮಾನಿಗಳಿಗೆ ತೀವ್ರ ಬೇಸರ ತಂದಿದೆ.