https://youtube.com/shorts/9OUTrzsAEaE?si=-GbS-QxOxuzBuJvH
newsics.com
2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಪ್ರಕಟಿಸಿದ್ದಾರೆ.
ಈ ಬಾರಿ ಮೊದಲು ವೈಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಬಳಿಕ ಸುದ್ದಿಗೋಷ್ಠಿ ನಡೆಯಲಿದೆ. ಇನ್ನು ಆನ್ಲೈನ್ಲ್ಲಿ ರಿಸಲ್ಟ್ ನೋಡುವುದ್ಹೇಗೆ ಎನ್ನುವ ಸಂಪೂರಣ ವಿವರ ಈ ಕೆಳಗಿನಂತಿದೆ ನೋಡಿ.
ದ್ವಿತೀಯ ಪಿಯುಸಿ ಫಲಿತಾಂಶದ ಮಾಹಿತಿ ಅಧಿಕೃತ ವೆಬ್‌ಸೈಟ್ https://karresults.nic.in ಲಿಂಕ್ ಮೂಲಕ ರಿಸಲ್ಟ್ ವೀಕ್ಷಿಸಬಹುದಾಗಿದೆ. ಲಿಂಕ್ ಮೇಲೆ ಕ್ಲಿಕ್ ಮಾಡಿ ರಿಜಿಸ್ಟ್ರೇಶನ್ ನಂಬರ್ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ, ‘Submit’ ಬಟನ್ ಒತ್ತಿದ ತಕ್ಷಣ ಅಂಕಪಟ್ಟಿ ಪರದೆ ಓಪನ್ ಆಗಲಿದೆ.
ಫೆಬ್ರವರಿ 28 ರಿಂದ ಮಾರ್ಚ್ 17ರ ವರೆಗೂ PUC ಪರೀಕ್ಷೆ ನಡೆದಿತ್ತು. ಒಟ್ಟು ಒಟ್ಟು 7,10,363 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. 1,217 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು.
ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ವೀಕ್ಷಿಸಲು ಇಲಾಖೆಯ ಅಧಿಕೃತ ವೆಬ್‌ಸೈಟ್ ಆದ karresults.nic.in ಗೆ ಭೇಟಿ ನೀಡಬಹುದು.