Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಭಾಸ್ ನಟನೆಯ ‘ಸ್ಪಿರಿಟ್’ ಸಿನಿಮಾ ಸೆಟ್​​ನಲ್ಲಿ ಬೆಂಕಿ: ಹಲವರಿಗೆ ಗಾಯ
ಪ್ರಮುಖಮನರಂಜನೆ

ಪ್ರಭಾಸ್ ನಟನೆಯ ‘ಸ್ಪಿರಿಟ್’ ಸಿನಿಮಾ ಸೆಟ್​​ನಲ್ಲಿ ಬೆಂಕಿ: ಹಲವರಿಗೆ ಗಾಯ

Share
2 Min Read
SHARE

ಸುದೀಪ್ ರೆಡ್ಡಿ ವಂಗಾ  ನಿರ್ದೇಶನ ಮಾಡಿ ಪ್ರಭಾಸ್ ನಟಿಸಿರುವ ‘ಸ್ಪಿರಿಟ್’ ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದ್ದು, ಇದೀಗ ಸಿನಿಮಾ ಸೆಟ್​​ನಲ್ಲಿ ಅವಘಡ ಸಂಭವಿಸಿದೆ. ‘ಸ್ಪಿರಿಟ್’ ಸಿನಿಮಾ ಸೆಟ್​​ನಲ್ಲಿ ಅಗ್ನಿ ಅವಘಡ ನಡೆದಿದ್ದು, ಚಿತ್ರತಂಡದ ಕೆಲವರಿಗೆ ಗಾಯಗಳಾಗಿವೆ ಎನ್ನಲಾಗುತ್ತಿದೆ.

ಸಿನಿಮಾದ ಚಿತ್ರೀಕರಣ ಹೈದರಾಬಾದ್​​ನಲ್ಲಿ ನಡೆಯುತ್ತಿದ್ದು, ಹೈದರಾಬಾದ್​​ನ ಸೆಟ್​​ನಲ್ಲಿ ಈ ಅವಘಡ ಸಂಭವಿಸಿದೆಯಂತೆ.

ಶಾರ್ಟ್ ಸರ್ಕ್ಯೂಟ್​​ನಿಂದ ಈ ಅಗ್ನಿ ಅವಘಡ ಸಂಭವಿಸಿದ್ದು, ಸಿನಿಮಾದ ಸಿಬ್ಬಂದಿಗಾಗಿ ಹಾಕಲಾಗಿದ್ದ ಸೆಟ್​​ ಸುಟ್ಟಿವೆ ಹಾಗೂ ಸಿನಿಮಾ ತಂಡದ ಕೆಲವು ವಸ್ತುಗಳು ಅಗ್ನಿಗೆ ಆಹುತಿಯಾಗಿವೆಯಂತೆ. ಕೆಲವು ಸಿಬ್ಬಂದಿಗೆ ಸಣ್ಣ ಪುಟ್ಟ ಗಾಯಗಳು ಸಹ ಆಗಿವೆ ಎನ್ನಲಾಗುತ್ತಿದೆ. ಆದರೆ ಈ ಘಟನೆ ನಡೆದಾಗ ನಟ ಪ್ರಭಾಸ್ ಅವರು ಸೆಟ್​​ನಲ್ಲಿ ಇರಲಿಲ್ಲ ಎನ್ನಲಾಗುತ್ತಿದೆ. ಇಂದು (ಏಪ್ರಿಲ್ 10) ಬೆಳಿಗ್ಗೆ ಘಟನೆ ನಡೆದಿದ್ದು, ಚಿತ್ರತಂಡವು ಈ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿಲ್ಲ.

ಪ್ರಭಾಸ್ ನಟನೆಯ ‘ಆದಿಪುರುಷ್’ ಸಿನಿಮಾದ ಸೆಟ್​ಗೂ ಸಹ ಬೆಂಕಿ ತಗುಲಿತ್ತು. ‘ಆದಿಪುರುಷ್’ ಸಿನಿಮಾಕ್ಕಾಗಿ ಮುಂಬೈನಲ್ಲಿ ಭಾರಿ ದೊಡ್ಡ ಸೆಟ್ ನಿರ್ಮಾಣ ಮಾಡಲಾಗಿತ್ತು. ಆದರೆ ಇಡೀ ಸೆಟ್ ಬೆಂಕಿಗೆ ಆಹುತಿಯಾಯ್ತು. ಆ ಸಮಯದಲ್ಲಿ ಸಾಕಷ್ಟು ಋಣಾತ್ಮಕ ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದವು. ಸಿನಿಮಾ ಬಿಡುಗಡೆ ಆದ ಬಳಿಕ ದೊಡ್ಡ ಫ್ಲಾಪ್ ಆಯ್ತು. ಇದೀಗ ‘ಸ್ಪಿರಿಟ್’ ಸಿನಿಮಾದ ಸೆಟ್​​ಗೂ ಬೆಂಕಿ ಬಿದ್ದಿರುವುದು ಪ್ರಭಾಸ್ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.

ನಿನ್ನೆಯಷ್ಟೆ ಪ್ರಭಾಸ್ ಮತ್ತು ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಅವರುಗಳು ‘ಸ್ಪಿರಿಟ್’ ಸಿನಿಮಾದ ಚಿತ್ರೀಕರಣದಿಂದ ಬಿಡುವು ಪಡೆದು ‘ಧುರಂಧರ್ 2’ ಸಿನಿಮಾ ವೀಕ್ಷಿಸಿ, ಸಿನಿಮಾ ಅನ್ನು ಮೆಚ್ಚಿಕೊಂಡಿದ್ದರು. ಸಂದೀಪ್ ರೆಡ್ಡಿ ವಂಗಾ ಸಹ ಬೇರೊಂದು ಕಡೆ, ‘ಸ್ಪಿರಿಟ್’ ಸಿನಿಮಾದ ಚಿತ್ರೀಕರಣ ಬೇಗನೆ ಸಾಗುತ್ತಿದ್ದು, ಬೇಗನೆ ಚಿತ್ರೀಕರಣ ಮುಗಿಸುವುದಾಗಿ ಹೇಳಿಕೊಂಡಿದ್ದರು. ಆದರೆ ಅಷ್ಟರಲ್ಲೇ ಈ ದುರ್ಘಟನೆ ನಡೆದಿದೆ.

ಪ್ರಭಾಸ್ ಪ್ರಸ್ತುತ ‘ಸ್ಪಿರಿಟ್’, ‘ಫೌಜಿ’ ಮತ್ತು ‘ಕಲ್ಕಿ 2898 ಎಡಿ’ ಸಿನಿಮಾಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಒಟ್ಟಿಗೆ ಈ ಮೂರು ಸಿನಿಮಾಗಳ ಚಿತ್ರೀಕರಣ ನಡೆಯುತ್ತಿದೆ. ‘ಫೌಜಿ’ ಸಿನಿಮಾದ ಚಿತ್ರೀಕರಣ ಬಹುತೇಕ ಮುಗಿದಿದೆ. ‘ಕಲ್ಕಿ 2898 ಎಡಿ’ ಚಿತ್ರೀಕರಣ ಪ್ರಾರಂಭ ಆಗಿದೆಯಾದರೂ, ಪ್ರಭಾಸ್ ಇನ್ನೂ ಚಿತ್ರೀಕರಣದಲ್ಲಿ ಭಾಗಿ ಆಗಿಲ್ಲ ಎನ್ನಲಾಗುತ್ತಿದೆ.

 

S R Ramaswamy no more ಹಿರಿಯ ನಾಡೋಜ ರಾಷ್ಟ್ರೋತ್ಥಾನ ಪರಿಷತ್ತಿನ ಮಾಜಿ ಅಧ್ಯಕ್ಷ ಡಾ.ಎಸ್. ಆರ್. ರಾಮಸ್ವಾಮಿ ಇನ್ನಿಲ್ಲ

TAGGED:Fire breaks out on the sets of Prabhas' 'Spirit' movie: Several injured
Share This Article
Facebook Twitter Copy Link Print
Previous Article S R Ramaswamy no more ಹಿರಿಯ ನಾಡೋಜ ರಾಷ್ಟ್ರೋತ್ಥಾನ ಪರಿಷತ್ತಿನ ಮಾಜಿ ಅಧ್ಯಕ್ಷ ಡಾ.ಎಸ್. ಆರ್. ರಾಮಸ್ವಾಮಿ ಇನ್ನಿಲ್ಲ
Next Article 16 ವರ್ಷದ ಬಾಲಕಿ ಮೇಲೆ ರೇಪ್ ಮಾಡಿ, ಗರ್ಭಪಾತ ಮಾಡಿಸಿದ ಪಾಪಿ ಶಿಕ್ಷಕ!

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?