Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000ರೂ.ಪ್ರೋತ್ಸಾಹ ಧನ
ಕರ್ನಾಟಕ

ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000ರೂ.ಪ್ರೋತ್ಸಾಹ ಧನ

Share
2 Min Read
SHARE

ಪಿಯುಸಿ ಪರೀಕ್ಷೆಯಲ್ಲಿ ಕರ್ನಾಟಕದ ವಿದ್ಯಾರ್ಥಿಗಳು ಹೊಸ ದಾಖಲೆ ಬರೆದಿದ್ದಾರೆ. ಇನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಪಾಲಿಕೆಗಳಲ್ಲಿನ ಪಿಯುಸಿ ಕಾಲೇಜಿನಲ್ಲೂ ಶೇ 74.16 ರಷ್ಟು ಫಲಿತಾಂಶ ಬಂದಿದೆ. ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ.ಪ್ರೋತ್ಸಾಹ ಧನ ನೀಡಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮುಂದಾಗಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಗಳಲ್ಲಿ ಬರುವ ಶಿಕ್ಷಣ ಇಲಾಖೆಯಲ್ಲಿ ಒಟ್ಟು 19 ಪದವಿ ಪೂರ್ವ ಕಾಲೇಜುಗಳಿದ್ದು, 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಒಟ್ಟು 2,593 ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಪೈಕಿ 1,923 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ. 74.16 ರಷ್ಟು ಫಲಿತಾಂಶ ಬಂದಿದೆ. ಅದರಂತೆ, ಪರೀಕ್ಷೆಗೆ ಹಾಜರಾಗಿದ್ದ ಒಟ್ಟು 2,593 ವಿದ್ಯಾರ್ಥಿಗಳ ಪೈಕಿ 260 ವಿದ್ಯಾರ್ಥಿಗಳು ಶೇ. 85 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ನಗರ ಪಾಲಿಕೆಗಳ ಪದವಿ ಪೂರ್ವ ಕಾಲೇಜುಗಳಲ್ಲಿ ಪಶ್ಚಿಮ ನಗರ ಪಾಲಿಕೆಯ ಭೈರವೇಶ್ವರನಗರ ಪದವಿ ಪೂರ್ವ ಕಾಲೇಜು ಶೇ. 88.82 ಫಲಿತಾಂಶದೊಂದಿಗೆ ಅಗ್ರಸ್ಥಾನ ಪಡೆದಿದೆ. ಕೇಂದ್ರ ನಗರ ಪಾಲಿಕೆಯ ಕಸ್ತೂರಿಬಾನಗರ ಪದವಿ ಪೂರ್ವ ಕಾಲೇಜು ಶೇ. 86.45 ಫಲಿತಾಂಶದೊಂದಿಗೆ ದ್ವಿತೀಯ ಸ್ಥಾನ ಪಡೆದುಕೊಂಡಿದ್ದು, ಪಶ್ಚಿಮ ನಗರ ಪಾಲಿಕೆಯ ಶ್ರೀರಾಂಪುರ ಪದವಿ ಪೂರ್ವ ಕಾಲೇಜು ಶೇ. 81.99 ಫಲಿತಾಂಶದೊಂದಿಗೆ ತೃತೀಯ ಸ್ಥಾನ ಪಡೆದಿದೆ.

ವೈಯಕ್ತಿಕ ಸಾಧನೆಯಲ್ಲಿ, ಉತ್ತರ ನಗರ ಪಾಲಿಕೆಯ ಕ್ಲೀವ್‌ ಲ್ಯಾಂಡ್ ಟೌನ್ ಪದವಿ ಪೂರ್ವ ಕಾಲೇಜಿನ ಫಿರ್ದೋಸ್ ಹಾಗೂ ಶಾಜೀದ್ ಅವರು ವಾಣಿಜ್ಯ ವಿಭಾಗದಲ್ಲಿ 600 ಕ್ಕೆ 582 ಅಂಕಗಳನ್ನು (97.00%) ಗಳಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಅದೇ ಕಾಲೇಜಿನ ಅರ್ಫಿನ್ ಖಾನಂ ಅವರು ವಿಜ್ಞಾನ ವಿಭಾಗದಲ್ಲಿ 600 ಕ್ಕೆ 578 ಅಂಕಗಳನ್ನು (96.33%) ಪಡೆದು ಮೆಚ್ಚುಗೆ ಪಡೆದಿದ್ದಾರೆ. ಪಶ್ಚಿಮ ನಗರ ಪಾಲಿಕೆಯ ಭೈರವೇಶ್ವರನಗರ ಪದವಿ ಪೂರ್ವ ಕಾಲೇಜಿನ ಮುಸ್ರತ್ ಅವರು ಕಲಾ ವಿಭಾಗದಲ್ಲಿ 600 ಕ್ಕೆ ಲ್ಲಿ 574 ಅಂಕಗಳನ್ನು (95.66%) ಗಳಿಸಿ ಸಾಧನೆ ಮಾಡಿದ್ದಾರೆ.

ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಎಲ್ಲಾ 260 ವಿದ್ಯಾರ್ಥಿಗಳಿಗೆ ನಗರಪಾಲಿಕೆಗಳ ವತಿಯಿಂದ ತಲಾ 35,000 ರೂ. ಪ್ರೋತ್ಸಾಹಧನ ನೀಡಿ ಗೌರವಿಸಲಾಗುವುದು ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬೆಡ್‌ರೂಮ್ ಮೇಲೆ ಯುದ್ಧದ ಎಫೆಕ್ಟ್!; ಕಾಂಡೋಮ್ ಬೆಲೆ ಹೆಚ್ಚಳ?

 

TAGGED:000 to 260 students who passed PUC with the highest rank.Rs 35
Share This Article
Facebook Twitter Copy Link Print
Previous Article ಬೆಡ್‌ರೂಮ್ ಮೇಲೆ ಯುದ್ಧದ ಎಫೆಕ್ಟ್!; ಕಾಂಡೋಮ್ ಬೆಲೆ ಹೆಚ್ಚಳ?
Next Article ಮೊನಾಲಿಸಾ ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್ ದಾಖಲು !

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read
ಆರೋಗ್ಯಕರ್ನಾಟಕ

Karnataka – India’s No.1 Medical Hub: ದೇಶದಲ್ಲೇ ನಂ.1 ಮೆಡಿಕಲ್ ಹಬ್ ಆಗಿ ಕರ್ನಾಟಕದ ಸಾಧನೆ

2 Min Read
ಕರ್ನಾಟಕಪ್ರಮುಖವೈರಲ್

Kabini and Hemavathi Reservoirs Reach Critically Low Levels Amid Water Shortage Concerns ಕಬಿನಿ, ಹೇಮಾವತಿ ಜಲಾಶಯಗಳು ಖಾಲಿ: ನೀರಿನ ಕೊರತೆ ಆತಂಕ ಹೆಚ್ಚಳ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?