Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಈ ಬಾರಿ ಪಿಯುಸಿಗಿಲ್ಲ 3ನೇ ಪರೀಕ್ಷೆ, ಏಪ್ರಿಲ್ 30ರಿಂದ 2ನೇ ಪರೀಕ್ಷೆ
ಕರ್ನಾಟಕಪ್ರಮುಖ

ಈ ಬಾರಿ ಪಿಯುಸಿಗಿಲ್ಲ 3ನೇ ಪರೀಕ್ಷೆ, ಏಪ್ರಿಲ್ 30ರಿಂದ 2ನೇ ಪರೀಕ್ಷೆ

Share
2 Min Read
SHARE

 

newsics.com

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ 1 ರಲ್ಲಿ ಐತಿಹಾಸಿಕ ಫಲಿತಾಂಶ ಬಂದ ಹಿನ್ನೆಲೆಯಲ್ಲಿ ಈ ಬಾರಿ ಪರೀಕ್ಷೆ 3 ನಡೆಸುವುದಿಲ್ಲ. ಪರೀಕ್ಷೆ 2 ಮಾತ್ರ ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಕಳೆದ ಸಲ ಪರೀಕ್ಷೆ 2ರಲ್ಲಿ ಫಲಿತಾಂಶ ಶೇಕಡ 8 ರಷ್ಟು ಉತ್ತಮವಾಗಿತ್ತು. ಪರೀಕ್ಷೆ 3ರಲ್ಲಿ ಶೇಕಡ ಒಂದಕ್ಕಿಂತ ಸ್ವಲ್ಪ ಹೆಚ್ಚು ಜನ ಪಾಸ್ ಆಗಿದ್ದಾರೆ. ಮೂರನೇ ಪರೀಕ್ಷೆ ಫಲಿತಾಂಶ ಬರುವ ವೇಳೆಗೆ ಸಿಇಟಿ ಫಲಿತಾಂಶ ಬಂದು ಕೌನ್ಸೆಲಿಂಗ್ ಕೂಡ ಮುಗಿದಿರುತ್ತದೆ. ಕಾಲೇಜುಗಳ ದಾಖಲಾತಿಯು ಪೂರ್ಣವಾಗಿರುತ್ತದೆ. ಹೀಗಾಗಿ ಪರೀಕ್ಷೆ 3 ನಡೆಸುವ ಅಗತ್ಯ ಕಾಣುತ್ತಿಲ್ಲ. ಹೀಗಾಗಿ ಕೈ ಬಿಡಲು ನಿರ್ಧರಿಸಲಾಗಿದ್ದು, ಮುಖ್ಯಮಂತ್ರಿಗಳಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಹೇಳಿದ್ದಾರೆ.

ಮೂರನೇ ಪರೀಕ್ಷೆಯನ್ನು ಸಂಪೂರ್ಣವಾಗಿ ಕೈ ಬಿಟ್ಟಿಲ್ಲ. ಇದು ಈ ವರ್ಷದ ನಿರ್ಧಾರ ಮಾತ್ರ. ಮುಂದೆ ಅಗತ್ಯವೆನಿಸಿದರೆ ಮತ್ತೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.

ಪರಿಷ್ಕೃತ ವೇಳಾಪಟ್ಟಿ

ದ್ವಿತೀಯ ಪಿಯುಸಿ ಪರೀಕ್ಷೆ 2 ರ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿದೆ. ಏಪ್ರಿಲ್ 30 ರಿಂದ ಮೇ 13 ರವರೆಗೆ ಪರೀಕ್ಷೆಗಳು ನಡೆಯಲಿದ್ದು, ಬಹುತೇಕ ಪರೀಕ್ಷೆಗಳು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಂಗೀತ ಮತ್ತು ಎನ್.ಎಸ್.ಕ್ಯೂ.ಎಫ್. ವಿಷಯಗಳು ಮಧ್ಯಾಹ್ನ 2ರಿಂದ 4.15 ರವರೆಗೆ ನಡೆಯಲಿದೆ. ಪರೀಕ್ಷೆ 2ಗೆ ಅರ್ಜಿ ಸಲ್ಲಿಸಲು ಏಪ್ರಿಲ್ 17 ಕೊನೆಯ ದಿನವಾಗಿದೆ. ಪರೀಕ್ಷಾ ಮಂಡಳಿಯ ವೆಬ್ಸೈಟ್ kseab.karnataka.gov.in ಮೂಲಕ ನೋಂದಣಿ ಮಾಡಿಕೊಳ್ಳಬಹುದು. ಪರೀಕ್ಷೆ 1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪರೀಕ್ಷೆ ಶುಲ್ಕ ಇರುವುದಿಲ್ಲ.

ಏಪ್ರಿಲ್ 30 ಕನ್ನಡ, ಅರೇಬಿಕ್

ಮೇ 2 ಕೈ ಐಚ್ಛಿಕ ಕನ್ನಡ, ತರ್ಕಶಾಸ್ತ್ರ, ಲೆಕ್ಕಶಾಸ್ತ್ರ, ರಸಾಯನಶಾಸ್ತ್ರ

ಮೇ 4 ಇಂಗ್ಲಿಷ್

ಮೇ 5 ವ್ಯವಹಾರ ಅಧ್ಯಯನ, ಭೌತಶಾಸ್ತ್ರ, ಶಿಕ್ಷಣ ಶಾಸ್ತ್ರ

ಮೇ 6 ಅರ್ಥಶಾಸ್ತ್ರ, ಜೀವಶಾಸ್ತ್ರ, ಭೌತಶಾಸ್ತ್ರ

ಮೇ 7 ಇತಿಹಾಸ, ಗಣಿತ, ಗೃಹ ವಿಜ್ಞಾನ

ಮೇ 8 ರಾಜ್ಯಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್

ಮೇ 9 ಹಿಂದಿ, ಸಮಾಜಶಾಸ್ತ್ರ

ಮೇ 12 ಭೂಗೋಳಶಾಸ್ತ್ರ, ಮನಃಶಾಸ್ತ್ರ, ಭೂಗರ್ಭ ಶಾಸ್ತ್ರ, ಮೂಲಗಣಿತ

ಮೇ 13 ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್, ಹಿಂದೂಸ್ತಾನಿ ಸಂಗೀತ.

https://www.newsics.com/2026/04/09/disha-who-became-the-state-topper-remained-steadfast-even-in-the-midst-of-mourning/
https://www.newsics.com/2026/04/09/2nd-puc-result-announced-udupi-first-for-state-last-position-for-which-district/
TAGGED:2nd exam from April 30thThis time there will be no 3rd exam for PUC
Share This Article
Facebook Twitter Copy Link Print
Previous Article ಪತ್ನಿಗೆ ನಿದ್ರೆ ಮಾತ್ರೆ ನೀಡಿ ಎದುರು ಮನೆಯವಳ ಜೊತೆ ಚಕ್ಕಂದ ಆಡ್ತಿದ್ದ ಶಿಕ್ಷಕ
Next Article ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಆತ್ಮ*ಹ*ತ್ಯೆ: ತಾಯಿಯ ಅನೈತಿಕ ಸಂಬಂಧಕ್ಕೆ ತನುಶ್ರೀ ಬಲಿಯಾದ್ಲಾ? ತಾಯಿ ಕೈವಾಡ ಶಂಕೆ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?