Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಧುರಂಧರ್ 2 ಗೆಲುವಿನ ಬೆನ್ನಲ್ಲೆ ಆರ್​​ಎಸ್​​ಎಸ್ ಕಚೇರಿಗೆ ಭೇಟಿ ನೀಡಿದ ರಣ್ವೀರ್ ಸಿಂಗ್
ಪ್ರಮುಖಮನರಂಜನೆ

ಧುರಂಧರ್ 2 ಗೆಲುವಿನ ಬೆನ್ನಲ್ಲೆ ಆರ್​​ಎಸ್​​ಎಸ್ ಕಚೇರಿಗೆ ಭೇಟಿ ನೀಡಿದ ರಣ್ವೀರ್ ಸಿಂಗ್

Share
2 Min Read
SHARE

ರಣ್ವೀರ್ ಸಿಂಗ್ ನಟಿಸಿರುವ ‘ಧುರಂಧರ್ 2’ ಸಿನಿಮಾ ಕಳೆದ ತಿಂಗಳು ಬಿಡುಗಡೆ ಆಗಿದ್ದು ಚಿತ್ರಮಂದಿರದಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈಗಾಗಲೇ ಭಾರತದಲ್ಲಿ 1000 ಕೋಟಿ ಗಳಿಕೆಯನ್ನು ದಾಟಿದ್ದು, ಬಾಕ್ಸ್ ಆಫೀಸ್​​ನಲ್ಲಿ ಹೊಸ ದಾಖಲೆಗಳನ್ನು ಬರೆಯುತ್ತಿದೆ. ಇತ್ತೀಚೆಗಷ್ಟೆ ಚುನಾವಣಾ ಪ್ರಚಾರವೊಂದರ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಹ ಸಿನಿಮಾದ ಬಗ್ಗೆ ಧನಾತ್ಮಕವಾಗಿ ಮಾತನಾಡಿದ್ದಾರೆ. ಇದೆಲ್ಲದರ ಬೆನ್ನಲ್ಲೆ ನಟ ರಣ್ವಿರ್ ಸಿಂಗ್ ಆರ್​​ಎಸ್​​ಎಸ್ ಕಚೇರಿಗೆ ಭೇಟಿ ನೀಡಿದ್ದು ಆರ್​​ಎಸ್​​ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಭೇಟಿ ಮಾಡಿದ್ದಾರೆ.

ನಾಗ್ಪುರದ ರೇಶಿಮ್‌ಬಾಗ್‌ನಲ್ಲಿರುವ ಡಾ ಹೆಡ್ಗೆವಾರ್ ಸ್ಮೃತಿ ಮಂದಿರಕ್ಕೆ ಭೇಟಿ ನೀಡಿದ ರಣ್​​ವೀರ್ ಸಿಂಗ್, ಆರ್‌ಎಸ್‌ಎಸ್ ಸಂಸ್ಥಾಪಕ ಕೆಬಿ ಹೆಡ್ಗೆವಾರ್ ಮತ್ತು ಎಂಎಸ್ ಗೋಲ್ವಾಲ್ಕರ್ ಅವರ ಸ್ಮಾರಕಗಳಿಗೆ ಪುಷ್ಪ ನಮನ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಸಂಘದ ಪ್ರತಿನಿಧಿಗಳು ರಣವೀರ್ ಅವರಿಗೆ ಹಿಂದುತ್ವ ಸಂಘಟನೆಯ ಮೊದಲ ಇಬ್ಬರು ಮುಖ್ಯಸ್ಥರ ಬಗ್ಗೆ ಮಾಹಿತಿ ನೀಡಿದರು. ಜೊತೆಗೆ ಸ್ಮೃತಿ ಮಂದಿರದ ಇತಿಹಾಸ ತಿಳಿಸಿಕೊಟ್ಟಿದ್ದಾರೆ. ರಣವೀರ್ ಸಿಂಗ್ ಅವರು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಅವರ ಸಿನಿಮಾ ಮತ್ತು ಸಂಘದ ಸೇವಾ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆಯಿತು ಎನ್ನಲಾಗಿದೆ.

ಆರ್​​ಎಸ್​​ಎಸ್​​ನ ಕಾರ್ಯಕ್ರಮಗಳಿಗೆ ಬಾಲಿವುಡ್​​ನ ಕೆಲವು ಸೆಲೆಬ್ರಿಟಿಗಳು ಹೋಗಿ ಬರುತ್ತಲೇ ಇರುತ್ತಾರೆ. ಇತ್ತೀಚೆಗಷ್ಟೆ ಸಂಘದ 100ನೇ ವರ್ಷದ ಕಾರ್ಯಕ್ರಮದ ವೇಳೆ ಸಲ್ಮಾನ್ ಖಾನ್, ರಣ್​​ಬೀರ್ ಕಪೂರ್, ವಿಕ್ಕಿ ಕೌಶಲ್, ಶಿಲ್ಪಾ ಶೆಟ್ಟಿ, ಅನನ್ಯಾ ಪಾಂಡೆ, ಪಾಕ್ ಮೂಲದ ಗಾಯಕ ಅದ್ನಾನ್ ಸಮಿ ಇನ್ನೂ ಹಲವು ಸೆಲೆಬ್ರಿಟಿಗಳು ಭಾಗಿ ಆಗಿದ್ದರು. ಮೋಹನ್ ಭಾಗವತ್ ಹಾಗೂ ಇನ್ನಿತರೆ ಆರ್​​ಎಸ್​​ಎಸ್ ಮುಖಂಡರ ಭಾಷಣಗಳನ್ನು ಆಲಿಸಿದರು. ಇದೀಗ ರಣ್​ವೀರ್ ಸಿಂಗ್ ಸಹ ಆರ್​​ಎಸ್​​ಎಸ್ ಕಚೇರಿಗೆ ಭೇಟಿ ನೀಡಿದ್ದಾರೆ.

ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ 1000 ಕೋಟಿ ರೂಪಾಯಿಗಳಿಗಿಂತ ಹೆಚ್ಚು ಗಳಿಕೆ ಮಾಡುವ ಮೂಲಕ ದಾಖಲೆ ನಿರ್ಮಿಸಿದೆ. ಸಿನಿಮಾವು ಬಿಜೆಪಿ ಪರವಾದ ವಿಚಾರಗಳನ್ನು ಒಳಗೊಂಡಿದೆ ಎಂದು ಒಂದು ವರ್ಗ ಆರೋಪ ಮಾಡುತ್ತಿದೆ. ಆದರೆ ಇದನ್ನು ನಿರ್ದೇಶಕ ಆದಿತ್ಯ ಧರ್ ನಿರಾಕರಿಸಿದ್ದಾರೆ. ‘ಧುರಂಧರ್ 2’ ಸಿನಿಮಾವು ಭಾರತದ ಸೈನಿಕನೊಬ್ಬ ಪಾಕಿಸ್ತಾನಕ್ಕೆ ಹೋಗಿ ಅಲ್ಲಿ ಉಗ್ರರನ್ನು ಮಟ್ಟ ಹಾಕುವ ಕತೆಯನ್ನು ಒಳಗೊಂಡಿದೆ. ಸಿನಿಮಾನಲ್ಲಿ ರಣ್​​ವೀರ್ ಸಿಂಗ್ ಜೊತೆಗೆ ಆರ್ ಮಾಧವನ್, ಅರ್ಜುನ್ ರಾಂಪಾಲ್, ಸಾರಾ ಅರ್ಜುನ್, ಅಕ್ಷಯ್ ಖನ್ನಾ ನಟಿಸಿದ್ದಾರೆ.

ಐಪಿಎಲ್ ಬೆಟ್ಟಿಂಗ್‌ನಲ್ಲಿ ನಷ್ಟ ಹಿನ್ನೆಲೆ ವ್ಯಕ್ತಿ ಆತ್ಮಹತ್ಯೆ

 

TAGGED:Ranveer Singh visits RSS office after 'Dhurandhar 2' success
Share This Article
Facebook Twitter Copy Link Print
Previous Article ಐಪಿಎಲ್ ಬೆಟ್ಟಿಂಗ್‌ನಲ್ಲಿ ನಷ್ಟ ಹಿನ್ನೆಲೆ ವ್ಯಕ್ತಿ ಆತ್ಮಹತ್ಯೆ
Next Article ಬಂಗಾಳ ರ‍್ಯಾಲಿ ವೇಳೆ ವ್ಲಾಗರ್ ಆದ ಪ್ರಧಾನಿ ಮೋದಿ

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?