Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವನ್ಯಜೀವಿಗಳ ಸಂತಾನ ಶಕ್ತಿ ಹರಣ ಸಾಧ್ಯವಿಲ್ಲವೆಂದ ವನ್ಯಜೀವಿ ತಜ್ಞ
ಕರ್ನಾಟಕ

ವನ್ಯಜೀವಿಗಳ ಸಂತಾನ ಶಕ್ತಿ ಹರಣ ಸಾಧ್ಯವಿಲ್ಲವೆಂದ ವನ್ಯಜೀವಿ ತಜ್ಞ

Share
2 Min Read
SHARE

ವನ್ಯಜೀವಿಗಳ ಸಂತಾನ ಶಕ್ತಿ ಹರಣ ಅಥವಾ ಚುಚ್ಚುಮದ್ದು ನೀಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದ್ದು, ಈ ಪ್ರಸ್ತಾವಕ್ಕೆ ಸಾರ್ವಜನಿಕರ ಸಲಹೆಗಳನ್ನು ಕೇಳಿದೆ.

ಇತ್ತೀಚಿಗೆ ವನ್ಯಜೀವಿಗಳು ಕಾಡಿನಿಂದ ನಾಡಿನತ್ತ ಬರುತ್ತಿದ್ದು, ಇದರಿಂದ ಆಸ್ತಿ-ಪಾಸ್ತಿ ಹಾಗೂ ಪ್ರಾಣಹಾನಿ ಉಂಟಾಗುತ್ತಿವೆ. ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪ್ರಾಣಿಗಳು ಜೀವಿಸಬೇಕು, ಅದೇ ರೀತಿ ಮನುಷ್ಯರು ಕೂಡ ಜೀವಿಸಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರ ಕೆಲವು ಆಯ್ದ ಕಾಡು ಪ್ರಾಣಿಗಳ ಸಂತತಿಯು ಹೆಚ್ಚಾಗದ ರೀತಿ ಅವುಗಳಿಗೆ ಸಂತಾನಹರಣ ಚಿಕಿತ್ಸೆ ಮಾಡುವ ಪ್ರಸ್ತಾವವನ್ನು ಸಾರ್ವಜನಿಕ ಚರ್ಚೆಗೆ ಬಿಟ್ಟಿದೆ. ಇಲ್ಲಿ ಬರುವ ಸಾಧಕ-ಬಾಧಕಗಳ ಚರ್ಚೆಯ ನಂತರ ಅದರ ಜಾರಿ ಅಥವಾ ಈ ಪ್ರಸ್ತಾವವನ್ನು ಕೈಬಿಡುವ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ.

ಸರ್ಕಾರದ ಈ ಪ್ರಸ್ತಾವನೆ ಕುರಿತು ಖ್ಯಾತ ವನ್ಯಜೀವಿ ತಜ್ಞ ಕೃಪಾಕರ್ ಸೇನಾನಿ ಮಾತನಾಡಿದ್ದಾರೆ, ಈ ರೀತಿಯ ಚಿಂತನೆ ಸರಿಯಲ್ಲ. ಇದನ್ನು ವಾಸ್ತವಿಕವಾಗಿ ವನ್ಯಜೀವಿಗಳಿಗೆ ಮಾಡಲು ಸಾಧ್ಯವಿಲ್ಲ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕೃಪಾಕರ್ ಹೇಳಿದ್ದೇನು? ವನ್ಯಜೀವಿಗಳಾದ ಆನೆ, ಹುಲಿ, ಚಿರತೆ, ಕರಡಿ ಸೇರಿದಂತೆ ಹಲವು ಕಾಡು ಪ್ರಾಣಿಗಳು ಕಾಡಿನಿಂದ ಹೊರಗೆ ಬಂದು ಮಾನವರ ಮೇಲೆ ಹಾಗೂ ಆಸ್ತಿ-ಪಾಸ್ತಿ ಹಾನಿ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗಿರುವುದು ನಿಜ. ಆದರೆ, ಮಾನವ – ವನ್ಯಜೀವಿ ಸಂಘರ್ಷಕ್ಕೆ ಅಂತ್ಯ ಹಾಡಲು ಸರ್ಕಾರ ಮತ್ತು ಸಚಿವರು ತೆಗೆದುಕೊಳ್ಳಬೇಕೆಂದಿರುವ ಅಭಿಪ್ರಾಯ ಅಷ್ಟು ಸುಲಭದ್ದಲ್ಲ. ವಾಸ್ತವವಾಗಿ ಕಾಡು ಪ್ರಾಣಿಗಳಿಗೆ ಸಂತಾನಹರಣ ಚಿಕಿತ್ಸೆ ಮಾಡಲು ಕಷ್ಟಸಾಧ್ಯ. ಹಾಗೊಂದು ವೇಳೆ ಮಾಡಬೇಕೆಂದರೂ ಅದು ಅಷ್ಟು ಸುಲಭದ ಕೆಲಸವಲ್ಲ. ಕೇವಲ ಮೃಗಾಲಯದ ಪ್ರಾಣಿಗಳಿಗಷ್ಟೇ ವನ್ಯಜೀವಿಗಳಿಗೆ ಸಂತಾನ ನಿಯಂತ್ರಣ ಚಿಕಿತ್ಸೆಯನ್ನು ಮಾಡಬಹುದು ಎಂದು ಕೃಪಾಕರ್ ಹೇಳಿದ್ದಾರೆ.

ಒಂದು ವೇಳೆ ಈ ರೀತಿಯ ಚಿಕಿತ್ಸೆಯನ್ನ ಆನೆಗೆ ಮಾಡಿದರೆ ಅದು ಕಷ್ಟ. ಕಾಡುಪ್ರಾಣಿ ಜೀವನ ಶೈಲಿಯೇ ಏರುಪೇರಾಗುತ್ತದೆ. ಕೆಲವು ಅನಾಹುತಗಳಿಗೂ ಕಾರಣವಾಗಬಹುದು ಎಂದು ಹೇಳುವ ಮೂಲಕ ನಗರ ಪ್ರದೇಶದ ಬೀದಿನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ಮಾಡಿದ ನಂತರ ಅವುಗಳಲ್ಲಾದ ಬದಲಾವಣೆ ಬಗ್ಗೆ ಕೃಪಾಕರ್ ವಿವರಣೆ ನೀಡಿದರು.

ಮನುಷ್ಯ ವಾಸಿಸುವ ಪ್ರದೇಶವೇ ಬೇರೆ. ವನ್ಯಜೀವಿಗಳು ಇರುವ ಪರಿಸರವೇ ಬೇರೆ. ಆದ್ದರಿಂದ ಅವುಗಳ ಸಂತತಿ ನಿಯಂತ್ರಣದ ಬಗ್ಗೆ ವೈಜ್ಞಾನಿಕವಾಗಿ ಅನುಭವಿ ತಜ್ಞರಿಂದ ಸಂಶೋಧನೆ ಮಾಡಿಸಬೇಕು. ಕಳೆದ 15 ವರ್ಷಗಳಿಂದ ವನ್ಯಜೀವಿಗಳ ಸಂಖ್ಯೆ ಅಷ್ಟೇ ಇದೆ. ಅವುಗಳ ಸಂಖ್ಯೆ ಹೆಚ್ಚಾಗಿಲ್ಲ ಎಂಬುದು ವೈಜ್ಞಾನಿಕ ಗಣತಿಯಿಂದ ಸಾಬೀತಾಗಿದೆ ಎಂದು ಕೃಪಾಕರ್ ವಿವರಿಸಿದರು.

ಕರಾವಳಿ ಜಿಲ್ಲೆಗಳಿಗೆ ಬಿಸಿ ಗಾಳಿ ಎಚ್ಚರಿಕೆ​;ವಿವಿಧೆಡೆ ಶುಷ್ಕ ವಾತಾವರಣ

TAGGED:Wildlife expert says it is impossible to deprive wildlife of its reproductive potential
Share This Article
Facebook Twitter Copy Link Print
Previous Article ಕರಾವಳಿ ಜಿಲ್ಲೆಗಳಿಗೆ ಬಿಸಿ ಗಾಳಿ ಎಚ್ಚರಿಕೆ​;ವಿವಿಧೆಡೆ ಶುಷ್ಕ ವಾತಾವರಣ
Next Article ಐಪಿಎಲ್ ಬೆಟ್ಟಿಂಗ್‌ನಲ್ಲಿ ನಷ್ಟ ಹಿನ್ನೆಲೆ ವ್ಯಕ್ತಿ ಆತ್ಮಹತ್ಯೆ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?