ಏಪ್ರಿಲ್ 11ರಂದು ಶ್ವಾನ ಪ್ರಿಯರು ಫ್ರೀಡಂ ಪಾರ್ಕ್‌ನಲ್ಲಿ ಒಗ್ಗೂಡಿ ತಮ್ಮ ಆಕ್ರೋಶ ಹೊರಹಾಕಿದರು. ಈ ಹೋರಾಟಕ್ಕೆ ಧ್ವನಿಯಾದ ನಟಿ ರಮ್ಯಾ ಅವರು ಶ್ವಾನಗಳ ಮೇಲೆ ನಡೆದ ದೌರ್ಜನ್ಯದ ದೃಶ್ಯಗಳನ್ನು ಕಂಡು ಭಾವುಕರಾದರು.
‘ನಾಯಿಗಳಿಗೆ ಏನಾಗಿರಬಹುದು ಎಂಬುದನ್ನು ಕಲ್ಪಿಸಿಕೊಂಡರೆ ನೋವಾಗುತ್ತದೆ. ಈ ರೀತಿ ಆಗಿದೆ ಎಂಬುದು ಗೊತ್ತಾಗಾದ ನನಗೆ ಆಘಾತ ಆಯಿತು’ ಎಂದು ರಮ್ಯಾ ಅವರು ಪ್ರತಿಭಟನೆ ವೇಳೆ ಕಣ್ಣೀರು ಹಾಕಿದ್ದಾರೆ. ಸಂಸ್ಥೆಯೊಂದು ಇಷ್ಟು ಬೇಜವಾಬ್ದಾರಿಯಾಗಿ ನಡೆದುಕೊಂಡಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
‘ನಾಪತ್ತೆಯಾಗಿರುವ ನಾಯಿಗಳು ಸುರಕ್ಷಿತವಾಗಿದ್ದರೆ ನಮಗೆ ತೋರಿಸಿ, ಇಲ್ಲದಿದ್ದರೆ ಈ ಕೃತ್ಯಕ್ಕೆ ಕಾರಣರಾದವರನ್ನು ಶಿಕ್ಷಿಸಿ’ ಎಂದು ರಮ್ಯಾ ಆಗ್ರಹಿಸಿದರು. ಸುಮಾರು 20ಕ್ಕೂ ಹೆಚ್ಚು ನಾಯಿಗಳು ನಾಪತ್ತೆ ಆಗಿವೆ. Animal Birth Control ನಿಯಮಗಳ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ಆಗ್ರಹ ಮಾಡಲಾಗಿದೆ. ಸಿ.ವಿ. ರಾಮನ್ ನಗರ ಅನಿಮಲ್ ಸ್ಕ್ವಾಡ್ ಮತ್ತು ಪ್ರಾಣಿ ಕಲ್ಯಾಣ ಹೋರಾಟಗಾರ್ತಿ ಪ್ರಿಯಾ ಚೆಟ್ಟಿ ರಾಜಗೋಪಾಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ.
ಈ ಪ್ರಕರಣ ಮಹದೇವಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಹೈಕೋರ್ಟ್‌ನಲ್ಲಿ ವಿಚಾರಣೆ ಹಂತದಲ್ಲಿದೆ. ಏಪ್ರಿಲ್ 16ರಂದು ಮುಂದಿನ ವಿಚಾರಣೆ ಇದೆ.
ರಮ್ಯಾ ಅವರು ಪ್ರಾಣಿಗಳ ಬಗ್ಗೆ ಕಾಳಜಿ ಹೊಂದಿದ್ದಾರೆ. ಅವರು ನಾಯಿಗಳ ರಕ್ಷಣೆ ಬಗ್ಗೆ ಧ್ವನಿ ಎತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಕೂಡ ಅವರು ಇಂಥ ಘಟನೆಗಳು ನಡೆದಾಗಿ ಮಾಧ್ಯಮಗಳ ಎದುರು ಬಂದು ಮಾತನಾಡಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಕೂಡ ಅವರು ಇಂಥ ಕೃತ್ಯಗಳನ್ನು ಖಂಡಿಸಿದ್ದಾರೆ.
ಅತಿ ಹೆಚ್ಚು ಬಜೆಟ್ ಮಂಡಿಸಿದ್ದಕ್ಕೆ ಸಿಎಂ ಸಿದ್ದರಾಮಯ್ಯಗೆ ಗೋಲ್ಡನ್’ ಗಿಫ್ಟ್