https://youtube.com/shorts/j_XhOSnjPZw?si=vBzrpGhQDFbuiw_E
newsics.com
ಕಾಡಾನೆ ದಾಳಿಗೆ ರೈತ ದಾರುಣವಾಗಿ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕಣಗುಪ್ಪೆ ಗ್ರಾಮದಲ್ಲಿ ನಡೆದಿದೆ.
ರೈತ ರಾಜಶೆಟ್ಟಿ(56) ಬಲಿಯಾಗಿದ್ದಾರೆ. ಬೆಳಗ್ಗೆ ತೋಟಕ್ಕೆ ತೆರಳಿದ್ದ ರಾಜಶೆಟ್ಟಿ ಅವರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದ್ದು, ಸೊಂಡಿಲಿನಿಂದ ಎತ್ತಿ ಬಿಸಾಡಿ ತುಳಿದು ರೈತನ ಕೊಂದಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಕೊಡಗು, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂತಹ ಘಟನೆಗಳು ಹೆಚ್ಚುತ್ತಿದ್ದು, ಅಮಾಯಕರ ಜೀವ ಹಾನಿಯಾಗುತ್ತಿದೆ. ಅರಣ್ಯ ಇಲಾಖೆ ಪೂರ್ವಭಾವಿಯಾಗಿ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸುತ್ತಿದ್ದಾರೆ.