ಸಾತಾರಾ ರಸ್ತೆ ಅಪಘಾತ: ಬೆಳಗಾವಿಯ ನಾಲ್ವರು ಸಾವು

ಬೆಳಗಾವಿ :ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಹಾರಾಷ್ಟ್ರದ ಸಾತಾರಾ ಸಮೀಪ ಭಾನುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಳಗಾವಿ ಜಿಲ್ಲೆಯ ನಾಲ್ವರು ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತರಲ್ಲಿ ಸಂಕೇಶ್ವರದ ಖ್ಯಾತ ವೈದ್ಯರಾದ ಡಾ. ಸಚಿನ್ ಶಂಕರಗೌಡ ಪಾಟೀಲ್ ಅವರು ಸೇರಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತದ ತೀವ್ರತೆಯಿಂದ ವಾಹನ ಸಂಪೂರ್ಣವಾಗಿ ಜಖಂಗೊಂಡಿದ್ದು, ಸ್ಥಳದಲ್ಲೇ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇತರ ಮೃತರ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದ್ದು, ಗಾಯಾಳುಗಳಿದ್ದಾರೆಯೇ ಎಂಬುದೂ ಸ್ಪಷ್ಟವಾಗಿಲ್ಲ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು … Continue reading ಸಾತಾರಾ ರಸ್ತೆ ಅಪಘಾತ: ಬೆಳಗಾವಿಯ ನಾಲ್ವರು ಸಾವು