newsics.com
ಜೈಪುರ: ಗರ್ಭಿಣಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಘಟನೆ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ಬೆಳಕಿಗೆ ಬಂದಿದೆ. ಈ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ಸಾ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, .
ಸಂತ್ರಸ್ತ ಮಹಿಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಹಿಂದಿನಿಂದ ಬಂದ ಅಪರಿಚಿತ ವ್ಯಕ್ತಿಯೊಬ್ಬ ಏಕಾಏಕಿ ಆಕೆಯನ್ನು ಹಿಡಿದು ಅಸಭ್ಯವಾಗಿ ವರ್ತಿಸಿದ್ದಾನೆ. ಮಹಿಳೆ ಗಾಬರಿಯಿಂದ ಕಿರುಚಿಕೊಂಡ ತಕ್ಷಣ, ವ್ಯಕ್ತಿಯು ಸ್ಥಳದಿಂದ ಪರಾರಿಯಾಗಿದ್ದಾನೆ. ಅದೃಷ್ಟವಶಾತ್ ಮಹಿಳೆಗೆ ಯಾವುದೇ ದೈಹಿಕ ಗಾಯಗಳಾಗಿಲ್ಲ.
ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ನಂತರವಷ್ಟೇ ಪೊಲೀಸರು ಪ್ರಕರಣದ ಗಂಭೀರತೆಯನ್ನು ಅರಿತು ತನಿಖೆಗೆ ಮುಂದಾಗಿದ್ದಾರೆ ಎಂಬ ಟೀಕೆಗಳು ಕೇಳಿಬಂದಿವೆ. ಸದ್ಯ ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಆರೋಪಿಯನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ.