newsics.com
ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದ್ದು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ನಜೀರ್ ಅಹಮದ್ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿದ್ದ ನಜೀರ್ ಅಹಮದ್ ಅವರು ತಮ್ಮ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡುವ ಮೂಲಕ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದಾರೆ.
ತಮ್ಮ ರಾಜೀನಾಮೆ ಪತ್ರವನ್ನು ಅವರು ಈಗಾಗಲೇ ಮುಖ್ಯಮಂತ್ರಿಗಳಿಗೆ ಸಲ್ಲಿಸಿದ್ದು, ವೈಯಕ್ತಿಕ ಕಾರಣಗಳಿಂದಾಗಿ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ. ಆದರೆ, ಈ ಬೆಳವಣಿಗೆಯು ಆಡಳಿತಾರೂಢ ಪಕ್ಷದೊಳಗೆ ಎಲ್ಲವೂ ಸರಿಯಿಲ್ಲವೇ ಎಂಬ ಚರ್ಚೆಗೆ ನಾಂದಿ ಹಾಡಿದೆ.
ದಾವಣಗೆರೆ ಚುನಾವಣಾ ಪ್ರಚಾರದ ವೇಳೆ ಉಂಟಾದ ಅಸಮಾಧಾನಗಳಿಂದಾಗಿ ಹೈಕಮಾಂಡ್ ರಾಜೀನಾಮೆಗೆ ಸೂಚಿಸುವ ಸಾದ್ಯತೆ ಬೆನ್ನಲ್ಲೇ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮತ್ತು ಎಂಎಲ್ಸಿ ಅಬ್ದುಲ್ ಜಬ್ಬಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಮತ್ತೊಂದೆಡೆ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹಾಗೂ ಎಂಎಲ್ಸಿ ನಜೀರ್ ಅಹ್ಮದ್ ಅವರಿಗೂ ರಾಜೀನಾಮೆ ನೀಡಲು ಹೈಕಮಾಂಡ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು.