newsics.com
ಚಂದ್ರದ್ರೋಣ ಪರ್ವತಶ್ರೇಣಿಯ ಸಮೀಪದ ಮಾಣಿಕ್ಯಧಾರಾ ಜಲಪಾತ ಪಕ್ಕದ 2 ಸಾವಿರ ಅಡಿ ಪ್ರಪಾತದಲ್ಲಿ ಪತ್ತೆಯಾದ ಕೇರಳ ಮೂಲದ ವಿದ್ಯಾರ್ಥಿನಿ ಶ್ರೀನಂದಾ (15) ಸಾವಿನ ಪ್ರಕರಣಕ್ಕೆ ಈಗ ಟ್ವಿಸ್ಟ್ ಸಿಕ್ಕಿದೆ.ಪ್ರಪಾತಕ್ಕೆ ಬಿದ್ದು ಸಾವಿಗೀಡಾಗಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿದರು ಕೂಡ ಶ್ರೀನಂದಾ ಪಾಲಕರು ಮಾತ್ರ ಆಕೆಯ ಸಾವಿನಲ್ಲಿ ಸಂಶಯ ವ್ಯಕ್ತಪಡಿಸಿದ್ದಾರೆ. ಇದರ ನಡುವೆ ಆರಂಭಿಕ ಮರಣತ್ತೋರ ವರದಿ ಹೊರಬಿದ್ದಿದೆ.
ಶ್ರೀನಂದಾ ಸಾವಿನಲ್ಲಿ ಯಾವುದೇ ಅಸಹಜತೆ ಇಲ್ಲ ಎಂದು ಮರಣೋತ್ತರ ಪರೀಕ್ಷಾ ವರದಿಯಿಂದ ತಿಳಿದುಬಂದಿದೆ.
ವರದಿಯ ಪ್ರಕಾರ, ತಲೆಯ ಬಲಭಾಗಕ್ಕೆ ಗಂಭೀರವಾದ ಗಾಯವಾಗಿರುವುದೇ ಸಾವಿಗೆ ಕಾರಣ ಎಂದು ಉಲ್ಲೇಖಿಸಲಾಗಿದೆ.
ಶ್ರೀನಂದಾ ಅವರ ದೇಹದಾದ್ಯಂತ ಗಾಯಗಳು ಪತ್ತೆಯಾಗಿದ್ದು, ಹಲವು ಸ್ಥಳಗಳಲ್ಲಿ ಮೂಳೆಗಳು ಮುರಿದಿದ್ದು, ಇದೆಲ್ಲವೂ ಮೇಲಿಂದ ಬಿದ್ದಿರುವುದರಿಂದ ಸಂಭವಿಸಿವೆ ಎಂದು ಮರಣೋತ್ತರ ವರದಿ ಹೇಳಿದೆ.
ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾಸ್ಪತ್ರೆಯಲ್ಲಿ ಶುಕ್ರವಾರ ಸಂಜೆ ಎರಡು ಶಸ್ತ್ರಚಿಕಿತ್ಸಕರ ತಂಡದಿಂದ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಹಿರಿಯ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಸಂಪೂರ್ಣ ಪ್ರಕ್ರಿಯೆಯನ್ನು ವಿಡಿಯೋ ದಾಖಲಿಸಲಾಗಿದೆ. ಈ ಪರೀಕ್ಷೆಯನ್ನು ವೈದ್ಯರಾದ ಲೋಹಿತ್ ಮತ್ತು ಜಯಲಕ್ಷ್ಮಿ ನಡೆಸಿದ್ದಾರೆ.
ತನಿಖೆಯ ವೇಳೆ, ಕಾಣೆಯಾಗುವ ಮೊದಲು ಶ್ರೀನಂದಾ ಸುಮಾರು 17 ನಿಮಿಷಗಳ ಕಾಲ ಫೋನ್‌ನಲ್ಲಿ ಮಾತನಾಡಿದ್ದಾಳೆಂದು ತಿಳಿದುಬಂದಿದೆ. ಅದರಲ್ಲಿ 15 ನಿಮಿಷಗಳ ಕಾಲ ಸ್ನೇಹಿತೆಯೊಬ್ಬರೊಂದಿಗೆ ಮಾತುಕತೆ ನಡೆದಿದ್ದು, ಈ ವೇಳೆ ನಡೆದಿರುವ ಚರ್ಚೆ ಅಥವಾ ಮನಸ್ತಾಪವೇ ಸಾವಿಗೆ ಕಾರಣವಾಗಿರಬಹುದೆಂಬ ಶಂಕೆಯೂ ವ್ಯಕ್ತವಾಗಿದೆ. ಆದರೆ, ಈ ಬಗ್ಗೆ ಸ್ಪಷ್ಟ ಮಾಹಿತಿಗಳು ಲಭ್ಯವಾಗಿಲ್ಲ.
https://www.newsics.com/2026/04/13/devotees-decorate-moving-train-like-a-temple-watch-viral-video/