ಮಂತ್ರಾಲಯ ಬಳಿ ಭೀಕರ ರಸ್ತೆ ಅಪಘಾತ: ಕರ್ನಾಟಕದ 8 ಭಕ್ತರ ಸಾವು

  newsics.com ಮಂತ್ರಾಲಯ: ಮಂತ್ರಾಲಯದ ಸಮೀಪ ಗುರುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಿಕ್ಕಬಳ್ಳಾಪುರ ಮೂಲದ ಎಂಟು ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾಲೂಕಿನ ಕಲ್ಲುದೇವರಕುಂಟ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಮಂತ್ರಾಲಯಕ್ಕೆ ತೆರಳಿದ್ದ ಭಕ್ತರು ಸಂಚರಿಸುತ್ತಿದ್ದ ಬೊಲೆರೊ ವಾಹನಕ್ಕೆ, ವೇಗವಾಗಿ ಬಂದ ಸಿಮೆಂಟ್ ಮತ್ತು ಜಲ್ಲಿಕಲ್ಲು ಸಾಗಿಸುತ್ತಿದ್ದ ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೊಲೆರೊ ವಾಹನ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ಎಂಟು ಮಂದಿ … Continue reading ಮಂತ್ರಾಲಯ ಬಳಿ ಭೀಕರ ರಸ್ತೆ ಅಪಘಾತ: ಕರ್ನಾಟಕದ 8 ಭಕ್ತರ ಸಾವು