Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೂವರು ಮಕ್ಕಳ ಜೊತೆ ಕೋರ್ಟ್‌ ಹಾಲ್‌ನಲ್ಲೇ ಕಣ್ಣೀರಿಟ್ಟ ಶಾಸಕ ವಿನಯ್‌ ಕುಲಕರ್ಣಿ
ಕರ್ನಾಟಕಪ್ರಮುಖ

ಮೂವರು ಮಕ್ಕಳ ಜೊತೆ ಕೋರ್ಟ್‌ ಹಾಲ್‌ನಲ್ಲೇ ಕಣ್ಣೀರಿಟ್ಟ ಶಾಸಕ ವಿನಯ್‌ ಕುಲಕರ್ಣಿ

Share
2 Min Read
SHARE

ಯೋಗೇಶ್‌ ಗೌಡ ಹತ್ಯೆ ಕೇಸ್‌ನಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಧಾರವಾಡ ಗ್ರಾಮೀಣ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ದೋಷಿ ಎಂದು ತೀರ್ಪು ನೀಡಿದೆ. ಅದರೊಂದಿಗೆ ವಿನಯ್‌ ಕುಲಕರ್ಣಿಗೆ ನೀಡಲಿರುವ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಿದೆ.

ಅದರ ಮೇಲೆ ಅವರ ಶಾಸಕ ಸ್ಥಾನ ಕೂಡ ನಿರ್ಧಾರವಾಗಲಿದೆ. ಹಾಗೇನಾದರೂ ವಿನಯ್‌ ಕುಲಕರ್ಣಿಗೆ 2 ವರ್ಷಕ್ಕಿಂತ ಅಧಿಕ ಕಾಲದ ಶಿಕ್ಷೆಯಾದಲ್ಲಿ ತಕ್ಷಣವೇ ಅವರ ಶಾಸಕ ಸ್ಥಾನ ಅನರ್ಹವಾಗಲಿದೆ. ಇನ್ನೊಂದೆಡೆ ಅವರಿಗೆ 2 ವರ್ಷಕ್ಕಿಂತ ಅಧಿಕ ಶಿಕ್ಷೆ ಪ್ರಕಟವಾಗುವ ಸಾಧ್ಯತೆ ಹೆಚ್ಚಿದೆ ಎಂದೂ ವರದಿಯಾಗಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಯಲದ ನ್ಯಾಯಾಧೀಶ ಸಂತೋಷ್‌ ಗಜಾನನ್‌ ಭಟ್‌, ಕೇಸ್‌ನಲ್ಲಿ ಅಂತಿಮ ತೀರ್ಪು ನೀಡಿ ಶಾಸಕ ವಿನಯ್‌ ಕುಲಕರ್ಣಿ ದೋಷಿ ಎಂದು ತೀರ್ಪು ನೀಡುತ್ತಿದ್ದಂತೆ ಕುಂತಲ್ಲೇ ಕುಸಿದ ಅವರು ಕಣ್ಣೀರಿಡಲು ಆರಂಭಿಸಿದರು. ಅಂತಿಮ ತೀರ್ಪಿಗೂ ಮುನ್ನ ಕೇಸ್‌ನಲ್ಲಿ ಖುಲಾಸೆಯಾಗುವ ಭರವಸೆಯಲ್ಲಿದ್ದ ವಿನಯ್‌ ಕುಲಕರ್ಣಿ ಇಷ್ಟು ವರ್ಷ ನಡೆಸಿದ ಪ್ರಯತ್ನವೆಲ್ಲಾ ಒಂದೇ ತೀರ್ಪಿನೊಂದಿಗೆ ಮಣ್ಣುಪಾಲಾಯಿತಲ್ಲ ಎನ್ನುವ ದುಃಖ ಅವರಲ್ಲಿ ಕಾಣುತ್ತಿತ್ತು. ಇನ್ನು ವಿನಯ್‌ ಕುಲಕರ್ಣಿ ಕಣ್ಣೀರಿಡುವಾಗ ಅವರನ್ನು ನೋಡುತ್ತಿದ್ದ ಮೂವರು ಮಕ್ಕಳು ಕೂಡ ಕೋರ್ಟ್‌ ಕಾರಿಡಾರ್‌ನಲ್ಲಿ ಕಣ್ಣೀರಿಟ್ಟರು.

ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 19 ಆರೋಪಿಗಳನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಅಪರಾಧಿ ಎಂದು ಘೋಷಿಸಿದೆ. ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯವು ಪ್ರಕರಣದಲ್ಲಿ ಭಾಗಿಯಾಗಿರುವ ವಿನಯ್ ಕುಲಕರ್ಣಿ ಸೇರಿ 19 ಮಂದಿ ದೋಷಿಗಳು ಎಂದು ತೀರ್ಪು ನೀಡಿದೆ. ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಈ ಕೊಲೆ ಪ್ರಕರಣದ ಎ15 (15ನೇ ಆರೋಪಿ) ಆಗಿದ್ದು, ಹತ್ಯೆಯ ಹಿಂದೆ ನಡೆದ ‘ಒಳಸಂಚು’ ಸಂಚಿನಲ್ಲಿ ಭಾಗಿಯಾಗಿರುವುದು ಸಾಬೀತಾಗಿದೆ. ಅಪರಾಧಿಗಳಿಗೆ ನೀಡಲಾಗುವ ಶಿಕ್ಷೆಯ ಪ್ರಮಾಣದ ಕುರಿತು ನಾಳೆ (ಏಪ್ರಿಲ್ 16) ನ್ಯಾಯಾಲಯದಲ್ಲಿ ವಾದ-ಪ್ರತಿವಾದ ನಡೆಯಲಿದ್ದು, ನಂತರ ಅಂತಿಮ ಶಿಕ್ಷೆ ಪ್ರಕಟವಾಗಲಿದೆ.

ಘಟನೆಯ ಹಿನ್ನೆಲೆ

2016ರ ಜೂನ್ 15ರಂದು ಧಾರವಾಡದ ಸಪ್ತಾಪುರದಲ್ಲಿರುವ ತಮ್ಮದೇ ಮಾಲೀಕತ್ವದ ಜಿಮ್‌ನಲ್ಲಿ ಯೋಗೀಶ್ ಗೌಡ ಅವರನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಆ ಸಮಯದಲ್ಲಿ ವಿನಯ್ ಕುಲಕರ್ಣಿ ಅವರು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದರು. ಆರಂಭದಲ್ಲಿ ಸ್ಥಳೀಯ ಪೊಲೀಸರು ತನಿಖೆ ನಡೆಸಿದ್ದರೂ, ನಂತರ 2019ರಲ್ಲಿ ರಾಜ್ಯ ಸರ್ಕಾರ ಪ್ರಕರಣವನ್ನು ಸಿಬಿಐ (CBI) ತನಿಖೆಗೆ ಹಸ್ತಾಂತರಿಸಿತ್ತು.

ಸಿಬಿಐ ತನಿಖೆ ಚುರುಕುಗೊಳಿಸಿದ ಅಧಿಕಾರಿಗಳು, 2020ರ ನವೆಂಬರ್ 5ರಂದು ವಿನಯ್ ಕುಲಕರ್ಣಿ ಅವರನ್ನು ಬಂಧಿಸಿದ್ದರು. ಸುಮಾರು ಒಂಬತ್ತು ತಿಂಗಳು ಜೈಲಿನಲ್ಲಿದ್ದ ಅವರು, 2021ರ ಆಗಸ್ಟ್‌ನಲ್ಲಿ ಜಾಮೀನು ಪಡೆದು ಹೊರಬಂದಿದ್ದರು. ಆದರೆ, ಪ್ರಕರಣದ ತನಿಖೆ ಮತ್ತು ವಿಚಾರಣೆ ಮುಂದುವರಿದಂತೆ ವಿನಯ್ ಕುಲಕರ್ಣಿ ಜೈಲಿನಲ್ಲಿರೋದು, ಜಾಮೀನಿನ ಮೂಲಕ ಹೊರಬರೋದು ಸಾಮಾನ್ಯವಾಗಿತ್ತು. ಪ್ರಸ್ತುತ ಅವರು ಜಾಮೀನಿನ ಮೇಲೆ ಹೊರಬಂದಿದ್ದರು. ಇಂದು (ಏಪ್ರಿಲ್ 15) ಪ್ರಕರಣದ ಎಲ್ಲಾ 21 ಆರೋಪಿಗಳು ಕೋರ್ಟ್‌ ಮುಂದೆ ಹಾಜರಿದ್ದರು. ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಧೀಶರು, ಲಭ್ಯವಿರುವ ಸಾಕ್ಷ್ಯಧಾರಗಳ ಆಧಾರದ ಮೇಲೆ 19 ಮಂದಿಯನ್ನು ದೋಷಿಗಳು ಎಂದು ಘೋಷಿಸಿದವಿನಯ್‌

TAGGED:MLA Vinay Kulkarni breaks down in tears in the courtroom with his three children.
Share This Article
Facebook Twitter Copy Link Print
Previous Article ಶಾಸಕ ಸ್ಥಾನಕ್ಕೂ ಕುತ್ತು: ವಿನಯ್ ಕುಲಕರ್ಣಿ ಮುಂದಿರುವ ಆಯ್ಕೆಗಳೇನು?
Next Article 75 ದಿನ ಕಳೆದರೂ ಪತ್ತೆಯಾಗದ ಇಬ್ಬರು ವಿದ್ಯಾರ್ಥಿನಿಯರು! ಪೊಲೀಸರೇ ಕಂಗಾಲು

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?