Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Vinay Kulkarni disqualified ಕೋರ್ಟ್ ಶಿಕ್ಷೆ ಹಿನ್ನೆಲೆ: ಶಾಸಕ ಸ್ಥಾನದಿಂದ ವಿನಯ್ ಕುಲಕರ್ಣಿ ಅನರ್ಹ, ಮುಂದೇನು?
ಕರ್ನಾಟಕದೇಶಪ್ರಮುಖ

Vinay Kulkarni disqualified ಕೋರ್ಟ್ ಶಿಕ್ಷೆ ಹಿನ್ನೆಲೆ: ಶಾಸಕ ಸ್ಥಾನದಿಂದ ವಿನಯ್ ಕುಲಕರ್ಣಿ ಅನರ್ಹ, ಮುಂದೇನು?

Share
2 Min Read
SHARE

 

newsics.com

ಬೆಂಗಳೂರು: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ ಬೆನ್ನಲ್ಲೇ ಜನಪ್ರತಿನಿಧಿ ಕಾಯ್ದೆಯ ಪ್ರಕಾರ ಶಾಸಕ ಸ್ಥಾನದಿಂದ ಧಾರವಾಡ ಶಾಸಕ ವಿನಯ್ ಕುಲಕರ್ಣಿ ಅನರ್ಹರಾಗಿದ್ದಾರೆ. ನ್ಯಾಯಾಲಯದ ತೀರ್ಪಿನ ಪ್ರತಿ ಬಂದ ಕೂಡಲೇ ವಿಧಾನಸಭೆ ಕಾರ್ಯದರ್ಶಿ ನಿಯಮದಂತೆ ಅನರ್ಹತೆಯ ಆದೇಶ ಹೊರಡಿಸಲಿದ್ದಾರೆ.

ಈ ಮೂಲಕ ಎರಡು ಬಾರಿ ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಮತ್ತು ಒಂದು ಬಾರಿ ಸಚಿವರಾಗಿದ್ದ ವಿನಯ್ ಕುಲಕರ್ಣಿ ರಾಜಕೀಯ ಭವಿಷ್ಯಕ್ಕೆ ಕಾರ್ಮೋಡ ಕವಿದಿದೆ.

ಜನಪ್ರತಿನಿಧಿಗಳ ಕಾಯ್ದೆ-1951, ಸೆಕ್ಷನ್ 8(3)ರಂತೆ ಅಪರಾಧ ಪ್ರಕರಣದಲ್ಲಿ ಜನಪ್ರತಿನಿಧಿಗಳು ಕನಿಷ್ಠ ಎರಡು ವರ್ಷ ಶಿಕ್ಷೆಗೆ ಒಳಗಾದರೆ ಅವರು ಶಾಸಕತ್ವದಿಂದ ಅನರ್ಹರಾಗಲಿದ್ದಾರೆ. ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಜನಪ್ರತಿನಿಧಿ ನ್ಯಾಯಾಲಯದ ತೀರ್ಪಿನ ಪ್ರತಿ ಲಭಿಸುತ್ತಿದ್ದ ಹಾಗೆಯೇ ವಿಧಾನಸಭೆ ಕಾರ್ಯದರ್ಶಿಗಳು ವಿನಯ್ ಕುಲಕರ್ಣಿ ಅನರ್ಹತೆಯ ಆದೇಶ ಹೊರಡಿಸಲಿದ್ದಾರೆ. ಶಿಕ್ಷೆ ಪ್ರಕಟಿಸಿದ ದಿನಾಂಕದಿಂದ ಅನರ್ಹ ಆದೇಶ ಜಾರಿಗೆ ಬರಲಿದೆ ಎಂದು ವಿಧಾನಸಭೆ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಕಾಯ್ದೆಯಂತೆ ಈ ಅನರ್ಹತೆಯು ಶಿಕ್ಷೆಯ ಅವಧಿ ಮುಕ್ತಾಯದವರೆಗೆ ಮತ್ತು ಶಿಕ್ಷೆ ಅವಧಿ ಮುಗಿದ ಬಳಿಕ ಆರು ವರ್ಷಗಳವರೆಗೆ ಮುಂದುವರಿಯಲಿದೆ. ಅಲ್ಲಿಯವರೆಗೆ ವಿನಯ್ ಕುಲಕರ್ಣಿ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ. ವಿನಯ್ ಕುಲಕರ್ಣಿ ಈ ಶಿಕ್ಷೆಯನ್ನು ಪ್ರಶ್ನಿಸಿ ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ ಮೊರೆ ಹೋಗಬಹುದು. ಒಂದು ವೇಳೆ ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ ಶಿಕ್ಷೆಗೆ ತಡೆಯಾಜ್ಞೆ ನೀಡಿದರೆ, ವಿನಯ್ ಕುಲಕರ್ಣಿ ಅನರ್ಹತೆ ರದ್ದಾಗಲಿದೆ.

ಹೈಕೋರ್ಟ್​ ಅಥವಾ ಸುಪ್ರೀಂ ಕೋರ್ಟ್​ ಕೇವಲ ದೋಷಿ ಎಂಬ ತೀರ್ಪಿಗೆ ತಡೆಯಾಜ್ಞೆ ನೀಡಿದರೆ ಅನರ್ಹತೆ ರದ್ದಾಗುವುದಿಲ್ಲ. ಶಿಕ್ಷೆಗೆ ತಡೆಯಾಜ್ಞೆ ನೀಡಿದರೆ ಮಾತ್ರ ಅನರ್ಹತೆ ರದ್ದಾಗಲಿದೆ.

ಕಾರವಾರ ಶಾಸಕ ಸತೀಶ್ ಸೈಲ್ ವಿಚಾರದಲ್ಲಿ ಹೈಕೋರ್ಟ್​, ಸೈಲ್ ಅವರ ವಿರುದ್ಧದ ಶಿಕ್ಷೆ ಹಾಗೂ ಏಳು ವರ್ಷದ ಜೈಲು ಶಿಕ್ಷೆ ತೀರ್ಪನ್ನು ಅಮಾನತು ಮಾಡಿತ್ತು. ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರ ವಿರುದ್ಧದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಿಕ್ಷೆ ತೀರ್ಪಿನ ಹಿನ್ನೆಲೆಯಲ್ಲಿ ಅವರನ್ನು ಅನರ್ಹಗೊಳಿಸಲಾಗಿತ್ತು. ಬಳಿಕ ತೆಲಂಗಾಣ ಹೈಕೋರ್ಟ್ ಶಿಕ್ಷೆ ತೀರ್ಪನ್ನು ಅಮಾನತು ಮಾಡಿದ ಕಾರಣ ಅವರ ಅನರ್ಹತೆ ಆದೇಶವನ್ನು ಹಿಂಪಡೆಯಲಾಗಿತ್ತು. ವಿನಯ್ ಕುಲಕರ್ಣಿ ವಿಚಾರದಲ್ಲೂ ಹೈಕೋರ್ಟ್​ ಶಿಕ್ಷೆಯನ್ನು ಅಮಾನತಿನಲ್ಲಿಟ್ಟರೆ ರಿಲೀಫ್ ಸಿಗಲಿದೆ.

ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಅಪರಾಧಿಗಳಾಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಇತರೆ 16 ಮಂದಿ ತಪ್ಪಿತಸ್ಥರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶುಕ್ರವಾರ (ಏ.17) ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ.

 

ಮಾರುಕಟ್ಟೆಗೆ ಲಗ್ಗೆಯಿಟ್ಟ ‘ಸನ್ನಿ ಬೀಚಸ್’ : ಇದರ ಬೆಲೆ ಎಷ್ಟು?

Young woman insulted the soldiers ಸೈನಿಕರ ಅವಹೇಳನ ಮಾಡಿದ ಯುವತಿ ಹೇಳಿದ್ದೇನು? ವಿಡಿಯೋ ನೋಡಿ

ಸೋಪ್ ಕಂಪನಿ ಜಾಹೀರಾತು ಪ್ರಕರಣದಲ್ಲಿ ಕೋರ್ಟ್​​ಗೆ ಹೋದ ತಮನ್ನಾಗೆ ಹಿನ್ನಡೆ

ವಿದ್ಯುತ್ ಗ್ರಾಹಕರಿಗೆ ಮತ್ತೊಮ್ಮೆ ದರ ಏರಿಕೆಯ ಶಾಕ್

 

 

TAGGED:Background to court sentence: Vinay Kulkarni disqualified from MLA postwhat next?
Share This Article
Facebook Twitter Copy Link Print
Previous Article RCB match today ಇಂದು RCB ಮ್ಯಾಚ್: ಚಿನ್ನಸ್ವಾಮಿ ಸುತ್ತ ಸಂಚಾರ ಬದಲಾವಣೆ, ಎಲ್ಲೆಲ್ಲೂ ಬಿಗಿ ಭದ್ರತೆ
Next Article Hormuz open to ships ಹಾರ್ಮುಜ್ ಜಲಸಂಧಿ ಹಡಗುಗಳಿಗೆ ಮುಕ್ತ ಮುಕ್ತ: ಇರಾನ್‌ನ ಮಹತ್ವದ ನಿರ್ಧಾರ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?