https://youtube.com/shorts/U8nUEfM6Yjc?si=6fq3EiIID4lUG0c4
newsics.com
ದಾವಣಗೆರೆ : ಪರಸ್ತ್ರೀ ಸಂಘಕ್ಕೆ ಬಿದ್ದ ಪತಿ, ತನ್ನನ್ನೇ ನಂಬಿ ಬಂದ ಪತ್ನಿಯನ್ನು ಚಿತ್ರಹಿಂಸೆ ನೀಡಿ ಕೊಂದಿರುವ ಘಟನೆ ದಾವಣಗೆರೆ ತಾಲೂಕಿನ ಮಂಡಲೂರು ಗ್ರಾಮದಲ್ಲಿ ನಡೆದಿದೆ.
ಕನ್ಯೆ ಕಾವ್ಯಾ ಹಾಗೂ ಮನು ಎಂಬುವವರಿಗೆ ಎರಡು ವರ್ಷಗಳ ಹಿಂದೆ ಮದುವೆ ಮಾಡಿಕೊಡಲಾಗಿತ್ತು. ಮನು ಅಂಚೆ ಇಲಾಖೆಯಲ್ಲಿ ಸರ್ಕಾರಿ ನೌಕರನಾಗಿದ್ದ ಎಂಬ ಕಾರಣಕ್ಕೆ, ಕಾವ್ಯಾ ಪೋಷಕರು ಸಾಲಸೋಲ ಮಾಡಿ 2.50 ಲಕ್ಷ ರೂಪಾಯಿ ನಗದು ಮತ್ತು 70 ಗ್ರಾಂ ಚಿನ್ನ ನೀಡಿ ಮದುವೆ ಮಾಡಿದ್ದರು. ಈ ದಂಪತಿ ದಾವಣಗೆರೆ ನಗರದ ಅರಸು ಬಡಾವಣೆಯ ಕ್ವಾರ್ಟರ್ಸ್ನಲ್ಲಿ ವಾಸವಿದ್ದರು.
ನಿನ್ನೆ (ಏಪ್ರಿಲ್ 17) ಕಾವ್ಯಾ ತನ್ನ ತಾಯಿಯೊಂದಿಗೆ ಮಂತ್ರಾಲಯಕ್ಕೆ ಹೋಗಲು ಸಿದ್ಧತೆ ನಡೆಸಿದ್ದಳು. ಮನೆಯ ಮುಂದೆ ವಾಹನ ನಿಂತು ಎಲ್ಲರೂ ಕಾಯುತ್ತಿದ್ದರು. ಮಧ್ಯಾಹ್ನದಿಂದ ಕಾವ್ಯಾಳ ಫೋನ್ ಸ್ವಿಚ್ ಆಫ್ ಆಗಿತ್ತು. ರಾತ್ರಿ ವೇಳೆ ಮನು ತನ್ನ ಅತ್ತೆಗೆ ಫೋನ್ ಮಾಡಿ “ಕಾವ್ಯಾ ಮಾತನಾಡುತ್ತಿಲ್ಲ” ಎಂದು ತಿಳಿಸಿದ್ದಾನೆ. ಗಾಬರಿಗೊಂಡ ಸಂಬಂಧಿಕರು ಧಾವಿಸಿದಾಗ ಕಾವ್ಯಾ ನಿಶ್ಚಲವಾಗಿ ಮಲಗಿದ್ದಳು. ಮನು ಅಲ್ಲಿಂದ ಪರಾರಿಯಾಗಿದ್ದನು. ಆಸ್ಪತ್ರೆಗೆ ಕೊಂಡೊಯ್ಯುವಷ್ಟರಲ್ಲೇ ಕಾವ್ಯಾ ಸಾವನ್ನಪ್ಪಿದ್ದಳು.
ಕಾವ್ಯಾಳ ಪತಿ ಮನುಗೆ ಮತ್ತೊಬ್ಬ ಮಹಿಳೆಯೊಂದಿಗೆ ಅನೈತಿಕ ಸಂಬಂಧವಿತ್ತು ಮತ್ತು ಆತ ಮಾದಕ ಚಟಕ್ಕೆ ಬಲಿಯಾಗಿದ್ದ ಎನ್ನಲಾಗಿದೆ. ಈ ಬಗ್ಗೆ ಕಾವ್ಯಾ ತನ್ನ ಪೋಷಕರಿಗೆ ತಿಳಿಸಿ ಅಳಲು ತೋಡಿಕೊಂಡಿದ್ದಳು. ಪತಿ ನೀಡುತ್ತಿದ್ದ ಕಿರುಕುಳ ಮತ್ತು ಆತನ ಅನೈತಿಕ ಸಂಬಂಧದ ಸಾಕ್ಷ್ಯಗಳನ್ನು ಕಾವ್ಯಾ ಒಂದು ಪೆನ್ ಡ್ರೈವ್ ನಲ್ಲಿ ಸಂಗ್ರಹಿಸಿಟ್ಟಿದ್ದಳು ಎಂಬ ಮಾಹಿತಿ ಲಭ್ಯವಾಗಿದೆ.
ಸದ್ಯ ಪೊಲೀಸರು ಆರೋಪಿ ಮನು ನನ್ನು ವಶಕ್ಕೆ ಪಡೆದಿದ್ದು, ವರದಕ್ಷಿಣೆ ಕಿರುಕುಳ ಮತ್ತು ಕೊಲೆ ಶಂಕೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
https://www.newsics.com/2026/04/18/iranian-navy-fires-on-indian-oil-tanker-in-strait-of-hormuz/