Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Vinay Kulkarni ಜೀವಾವಧಿ ಶಿಕ್ಷೆಗೆ ಗುರಿಯಾದ 2ನೇ ರಾಜಕಾರಣಿ ವಿನಯ್ ಕುಲಕರ್ಣಿ, ರಾಜ್ಯದ ಯಾವ್ಯಾವ ಜನಪ್ರತಿನಿಧಿಗಳಿಗೆ ಶಿಕ್ಷೆ?
ಕರ್ನಾಟಕದೇಶಪ್ರಮುಖ

Vinay Kulkarni ಜೀವಾವಧಿ ಶಿಕ್ಷೆಗೆ ಗುರಿಯಾದ 2ನೇ ರಾಜಕಾರಣಿ ವಿನಯ್ ಕುಲಕರ್ಣಿ, ರಾಜ್ಯದ ಯಾವ್ಯಾವ ಜನಪ್ರತಿನಿಧಿಗಳಿಗೆ ಶಿಕ್ಷೆ?

Share
2 Min Read
SHARE

newsics.com

ಬೆಂಗಳೂರು: ಕರ್ನಾಟಕದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ ಜನಪ್ರತಿನಿಧಿಗಳ ಪೈಕಿ ವಿನಯ್ ಕುಲಕರ್ಣಿ 2 ನೇಯವರು. ಇನ್ನೂ ಅಧಿಕಾರದಲ್ಲಿದ್ದಾಗಲೇ ಜೀವಾವಧಿ ಶಿಕ್ಷೆಯಾಗಿದ್ದು ಇದೇ ಮೊದಲು.ಈ ಹಿಂದೆ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಸಂಸದರಾಗಿದ್ದಾಗ ಬಂಧನವಾಗಿದ್ದ ಪ್ರಜ್ವಲ್‌ ರೇವಣ್ಣ ಅವರಿಗೆ ಅವರ ಅಧಿಕಾರಾವಧಿ ಮುಗಿದ ಬಳಿಕ (ಬಂಧನವಾಗಿ 1 ವರ್ಷದ ನಂತರ) ಜನಪ್ರತಿನಿಧಿಗಳ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿತ್ತು. ಸದ್ಯ ಅವರು ಜೈಲಿನಲ್ಲಿದ್ದಾರೆ.

ಇನ್ನು ವಿನಯ್ ಕುಲಕರ್ಣಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಿದ್ದಾಗ (2016 ಜೂನ್‌) ಯೋಗೀಶ್‌ ಕೊಲೆ ನಡೆದಿತ್ತು. ಆ ಕೊಲೆಗೆ ಸಂಬಂಧಿಸಿದಂತೆ 2020 ರಲ್ಲಿ ವಿನಯ್ ಕುಲಕರ್ಣಿಯವರ ಬಂಧನವೂ ಆಗಿತ್ತು. ಜಾಮೀನಿನ ಮೇಲೆ ಹೊರಗಿದ್ದ ವಿನಯ್ 2023 ರಲ್ಲಿ ಶಾಸಕರಾಗಿಯೂ ಆಯ್ಕೆಯಾಗಿದ್ದರು. ಸದ್ಯ ಜೀವಾವಧಿ ಶಿಕ್ಷೆ ಪ್ರಕಟವಾಗಿದೆ. ಈ ಮೂಲಕ ಅಧಿಕಾರದಲ್ಲಿದ್ದಾಗಲೇ ಜೀವಾವಧಿ ಶಿಕ್ಷೆಗೆ ಗುರಿಯಾದ ಮೊದಲ ಜನಪ್ರತಿನಿಧಿ ವಿನಯ್ ಆಗಿದ್ದಾರೆ.

ಕ್ರಿಮಿನಲ್ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾದ ಜನಪ್ರತಿನಿಧಿಗಳು

  • ಸತೀಶ್ ಸೈಲ್ (ಕಾರವಾರದ ಶಾಸಕ): ಬೆಲೇಕೇರಿ ಅಕ್ರಮ ಅದಿರು ಸಾಗಾಣಿಕೆ ಪ್ರಕರಣದಲ್ಲಿ ಇತ್ತೀಚೆಗೆ (ಅಕ್ಟೋಬರ್ 2024) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇವರನ್ನು ದೋಷಿ ಎಂದು ತೀರ್ಪು ನೀಡಿದ್ದು, 7 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ಕೋಟ್ಯಂತರ ರೂಪಾಯಿ ದಂಡ ವಿಧಿಸಿತ್ತು. ಸದ್ಯ ಉನ್ನತ ನ್ಯಾಯಾಲಯಕ್ಕೆ (ಹೈಕೋರ್ಟ್‌) ಹೋಗಿ ತೀರ್ಪಿಗೆ ತಡೆ ತಂದು ಜಾಮೀನಿನಲ್ಲಿದ್ದಾರೆ. ಶಾಸಕರಾಗಿಯೂ ಮುಂದುವರೆದಿದ್ದಾರೆ.
  • ವೈ. ಸಂಪಂಗಿ (ಕೆ.ಜಿ.ಎಫ್ ಮಾಜಿ ಶಾಸಕ): ಲಂಚ ಪ್ರಕರಣದಲ್ಲಿ ನ್ಯಾಯಾಲಯವು 3.5 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಭ್ರಷ್ಟಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾದ ರಾಜ್ಯದ ಮೊದಲ ಶಾಸಕ ಇವರಾಗಿದ್ದರು. ಆ ನಂತರ ಉನ್ನತ ನ್ಯಾಯಾಲಯದ ಮೊರೆ ಹೋಗಿ ಬಿಡುಗಡೆಯಾಗಿದ್ದರು.

ಗಂಭೀರ ಪ್ರಕರಣಗಳಲ್ಲಿ ವಿಚಾರಣೆ ಎದುರಿಸುತ್ತಿರುವ ನಾಯಕರು

  • ಗಾಲಿ ಜನಾರ್ದನ ರೆಡ್ಡಿ (ಶಾಸಕ ಹಾಗೂ ಮಾಜಿ ಸಚಿವ): ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿಗೆ ಸಿಬಿಐ ವಿಶೇಷ ನ್ಯಾಯಾಲಯ 7 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಈ ಆದೇಶಕ್ಕೆ ತೆಲಂಗಾಣ ಹೈಕೋರ್ಟ್‌ ತಡೆ ನೀಡಿದೆ. ಜತೆಗೆ ಬೆಲೆಕೇರಿ ಬಂದರು ಅಕ್ರಮ ಅದಿರು ರಫ್ತು ಪ್ರಕರಣ, ಅಕ್ರಮ ಆಸ್ತಿ ಸಂಪಾದನೆ ಮತ್ತು ಮನಿ ಲಾಂಡರಿಂಗ್ ಸೇರಿ ಹಲವು ಪ್ರಕರಣಗಳಿದ್ದು, ವಿಚಾರಣೆ ನಡೆಯುತ್ತಿವೆ. 3 ವರ್ಷ ಜೈಲಿನಲ್ಲಿದ್ದು, ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
  • ಡಿಕೆ ಶಿವಕುಮಾರ್ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇ.ಡಿ ಯಿಂದ ನ್ಯಾಯಾಂಗ ಬಂಧನಕ್ಕೊಳಗಾಗಿ ತಿಹಾರ್ ಜೈಲಿನಲ್ಲಿದ್ದು, ಬಳಿಕ ಜಾಮೀನು ಪಡೆದರು.

Vinay Kulkarni disqualified ಕೋರ್ಟ್ ಶಿಕ್ಷೆ ಹಿನ್ನೆಲೆ: ಶಾಸಕ ಸ್ಥಾನದಿಂದ ವಿನಯ್ ಕುಲಕರ್ಣಿ ಅನರ್ಹ, ಮುಂದೇನು?

RCB match today ಇಂದು RCB ಮ್ಯಾಚ್: ಚಿನ್ನಸ್ವಾಮಿ ಸುತ್ತ ಸಂಚಾರ ಬದಲಾವಣೆ, ಎಲ್ಲೆಲ್ಲೂ ಬಿಗಿ ಭದ್ರತೆ

 

BABA VANGA ASTRO ತಾಳ್ಮೆಯಿಂದ ಕಾಯ್ದರೆ ಈ ಐದು ರಾಶಿಗಳ ಜನರಿಗೆ ಆಗರ್ಭ ಶ್ರೀಮಂತಿಕೆ!

TAGGED:Vinay Kulkarni is the second politician to be sentenced to life imprisonment.
Share This Article
Facebook Twitter Copy Link Print
Previous Article BABA VANGA ASTRO ತಾಳ್ಮೆಯಿಂದ ಕಾಯ್ದರೆ ಈ ಐದು ರಾಶಿಗಳ ಜನರಿಗೆ ಆಗರ್ಭ ಶ್ರೀಮಂತಿಕೆ!
Next Article India hotest in the world ಇನ್ನೆರಡು ವಾರದಲ್ಲಿ ದೇಶದ ಹಲವೆಡೆ ಅತಿ ಬಿಸಿಲು, ಇದು ಜಗತ್ತಿನಲ್ಲೇ ಹೆಚ್ಚು!

Popular Posts

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?