Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ನಾಲ್ಕುಚೀತಾಗಳ ಆಗಮನ
ಕರ್ನಾಟಕದೇಶಪ್ರಮುಖ

ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ನಾಲ್ಕುಚೀತಾಗಳ ಆಗಮನ

Share
1 Min Read
SHARE

https://youtube.com/shorts/RcxcteKkGZ8?si=yxDv0iURLfg799X9

newsics.com

ಬೆಂಗಳೂರು: ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ಕರೆತರಲಾಗುತ್ತಿರುವ ನಾಲ್ಕು ಚೀತಾಗಳು ಶುಕ್ರವಾರ ಮಧ್ಯರಾತ್ರಿ 1 ಗಂಟೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನಕ್ಕೆ ಆಗಮಿಸಿದ್ದು, ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವುಗಳನ್ನು ಸ್ವೀಕರಿಸಿ ಬನ್ನೇರಘಟ್ಟ ಮೃಗಾಲಯದ ಅಧಿಕಾರಿಗಳಿಗೆ ಹಸ್ತಾಂತರಿಸಿದರು.

ತನ್ಮೂಲಕ ಬನ್ನೇರುಘಟ್ಟ ಮೃಗಾಲಯ ತನ್ನ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಚೀತಾಗಳಿಗೆ ಆಶ್ರಯ ನೀಡುತ್ತಿದೆ. ವನ್ಯಜೀವಿ (ರಕ್ಷಣೆ) ಕಾಯ್ದೆ ಅಡಿ ನಿಯಂತ್ರಕ ಅನುಮತಿ ಮತ್ತು ಪ್ರಾಣಿ ಕ್ವಾರಂಟೈನ್‌ ಅಧಿಕಾರಿಗಳ ಅನುಮೋದನೆ ನಂತರ ನಾಲ್ಕು ಆಫ್ರಿಕನ್‌ ಚೀತಾಗಳನ್ನು ಅರಣ್ಯ ಇಲಾಖೆ ತರಿಸಿಕೊಂಡಿದೆ. ಅವುಗಳನ್ನು ಬನ್ನೇರುಘಟ್ಟ ಮೃಗಾಲಯದಲ್ಲಿರಿಸಿ ಚೀತಾ ಪ್ರಭೇದವನ್ನು ಜನರ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗುತ್ತಿದೆ.

ನಿನ್ನೆ ಮಧ್ಯರಾತ್ರಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಚೀತಾಗಳು ಬಂದಿಳಿದಿವೆ. ತಡರಾತ್ರಿ ಬಂದಿದ್ದರೂ, ಅವುಗಳನ್ನು ಬರಮಾಡಿಕೊಳ್ಳಲು ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ರಾಜ್ಯದ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಸ್ವತಃ ಹಾಜರಿದ್ದರು.

ವಿಮಾನದಿಂದ ಇಳಿಯುವ ಕ್ಷಣದಿಂದಲೇ ಚೀತಾಗಳನ್ನು ಅತ್ಯಂತ ಎಚ್ಚರಿಕೆಯಿಂದ, ನಿಯಮದಂತೆ, ಸುರಕ್ಷಿತವಾಗಿ ಮೃಗಾಲಯದ ಕಡೆಗೆ ಸಾಗಿಸುವ ವ್ಯವಸ್ಥೆ ಮಾಡಲಾಯಿತು. ದಕ್ಷಿಣ ಆಫ್ರಿಕಾದಂತಹ ದೂರದ ದೇಶದಿಂದ ಬರುವ ಪ್ರಾಣಿಗಳಿಗೆ ಹವಾಮಾನ, ವಾತಾವರಣ, ಆಹಾರ, ನೀರು ಹೀಗೆ ಹಲವು ವಿಷಯಗಳಲ್ಲಿ ಬದಲಾವಣೆಗಳು ಎದುರಾಗುತ್ತವೆ. ಈ ಹವಾಮಾನ ಬದಲಾವಣೆಯಿಂದ ಚೀತಾಗಳಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲು ಅರಣ್ಯ ಇಲಾಖೆ ವಿಶೇಷ ಕ್ರಮಗಳನ್ನು ಕೈಗೊಂಡಿದೆ.

ಅವುಗಳ ಆರೋಗ್ಯ ತಪಾಸಣೆ ನಡೆಸಿ ಬನ್ನೇರುಘಟ್ಟದ ಮೃಗಾಲಯದಲ್ಲಿ ಕ್ವಾರಂಟೈನ್‌ನಲ್ಲಿ ಇಡಲಾಗುತ್ತದೆ. ಈ ವೇಳೆ ನಿಯಮಿತವಾಗಿ ಆರೋಗ್ಯ ತಪಾಸಣೆ ಮತ್ತು ನಿಗದಿತ ಆಹಾರ ನೀಡಲಾಗುತ್ತದೆ. ಕ್ವಾರಂಟೈನ್‌ ಅವಧಿ ಮುಗಿದ ನಂತರ ಚೀತಾಗಳ ಆರೋಗ್ಯ ಆಧರಿಸಿ ಸಾರ್ವಜನಿಕ ವೀಕ್ಷಣೆಗೆ ಅನುವು ಮಾಡಿಕೊಡಲಾಗುತ್ತದೆ.

https://www.newsics.com/2026/04/19/strict-action-against-employees-for-missing-census-fine-jail-term-warning/

 

TAGGED:Arrival of four South African cheetahs in Bannerghatta
Share This Article
Facebook Twitter Copy Link Print
Previous Article ಜನಗಣತಿಗೆ ಗೈರಾದರೆ ನೌಕರರ ವಿರುದ್ಧ ಕಠಿಣ ಕ್ರಮ: ದಂಡ, ಜೈಲು ಶಿಕ್ಷೆ ಎಚ್ಚರಿಕೆ
Next Article ರಾಜ್ಯದಲ್ಲಿ ಉಷ್ಣ ಅಲೆಯ ಜತೆ ಅಲ್ಲಲ್ಲಿ ಆಲಿಕಲ್ಲು ಮಳೆ : ಕರಾವಳಿಗೆ ಹೀಟ್​ವೇವ್ ಅಲರ್ಟ್​

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?