https://youtube.com/shorts/RcxcteKkGZ8?si=yxDv0iURLfg799X9
newsics.com
ವಿಜಯನಗರ: ಬೈಕ್, ಕಾರು, ಬಸ್ ಗೆ ಬೆಳ್ಳುಳ್ಳಿ ತುಂಬಿದ್ದ ಲಾರಿ ಡಿಕ್ಕಿ ಹೊಡೆದು ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಡಾಣಾಪುರ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.
ಲಾರಿ ಚಾಲಕನ ಅಜಾಗರೂಕತೆಯೇ ದುರಂತಕ್ಕೆ ಕಾರಣ ಎನ್ನಲಾಗಿದೆ. ಬೈಕ್, ಕಾರು, ಬಸ್ ಗೆ ಡಿಕ್ಕಿ ಹೊಡೆದ ಲಾರಿ ಕಾರನ್ನು 100 ಮೀಟರ್ ದೂರದವರೆಗೆ ಎಳೆದೊಯ್ದಿದೆ. ಲಾಅರಿ ಕೆಳಗೆ ಸಿಲುಕಿ ನಾಲ್ವರು ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.