Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಆಟವಾಡುತ್ತಿದ್ದ ಬಾಲಕನ ಮೇಲೆ ಹರಿದ ಎಲೆಕ್ಟ್ರಿಕ್ ಕಾರು – 13 ವರ್ಷದ ಬಾಲಕ ಸ್ಥಳದಲ್ಲೇ  ಸಾವು
ಕರ್ನಾಟಕಪ್ರಮುಖ

ಆಟವಾಡುತ್ತಿದ್ದ ಬಾಲಕನ ಮೇಲೆ ಹರಿದ ಎಲೆಕ್ಟ್ರಿಕ್ ಕಾರು – 13 ವರ್ಷದ ಬಾಲಕ ಸ್ಥಳದಲ್ಲೇ  ಸಾವು

Share
1 Min Read
SHARE

newsics.com

ತುಮಕೂರು : ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರು ಗ್ರಾಮದಲ್ಲಿ ಮನಕಲುಕುವ ರಸ್ತೆ ಅಪಘಾತ ಸಂಭವಿಸಿದ್ದು, ಅಂಗಡಿ ಮುಂಭಾಗದಲ್ಲಿ ಸೈಕಲ್ ಮೇಲೆ ಕುಳಿತು ಆಟವಾಡುತ್ತಿದ್ದ 13 ವರ್ಷದ ಬಾಲಕನ ಮೇಲೆ ಎಲೆಕ್ಟ್ರಿಕ್ ಕಾರು ಹರಿದು ಸಾವನ್ನಪ್ಪಿರುವ ಹೃದಯ ವಿದ್ರಾಹಕ ಘಟನೆ ಗ್ರಾಮಸ್ಥರನ್ನು ಬೆಚ್ಚಿಬೀಳಿಸಿದೆ.

ಮೃತ ಬಾಲಕ ನಿಟ್ಟೂರಿನ “ರಾಘವೇಂದ್ರ ಟೆಕ್ಸ್‌ಟೈಲ್” ಜವಳಿ ಅಂಗಡಿ ಮಾಲೀಕರಾದ ಮೊಹನ್ ಕುಮಾರ್ ಅವರ ಪುತ್ರ ” ಶೋಭಿತ್ ರಾಘವ್” (13) ಆಗಿದ್ದು. ಶಾಲೆಗೆ ರಜೆ ಇದ್ದ ಹಿನ್ನೆಲೆಯಲ್ಲಿ ತಂದೆ-ತಾಯಿ ತಮ್ಮ ಮಗುವನ್ನು ಅಂಗಡಿಗೆ ಕರೆದುಕೊಂಡು ಬಂದಿದ್ದರು. ಬೆಳಗ್ಗೆ ಅಂಗಡಿ ಮುಂದೆ ರಸ್ತೆ ಬದಿಯಲ್ಲಿ ಸೈಕಲ್ ಮೇಲೆ ಕುಳಿತು ಆಟವಾಡುತ್ತಿದ್ದ ಸಂದರ್ಭದಲ್ಲಿ, ಏಕಾಏಕಿ ವೇಗವಾಗಿ ಬಂದ ಎಲೆಕ್ಟ್ರಿಕ್ ಕಾರು ನಿಯಂತ್ರಣ ತಪ್ಪಿ ಬಾಲಕನ ಮೇಲೆ ಹರಿದಿದೆ ಎಂದು ತಿಳಿದುಬಂದಿದೆ.

ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಆತಂಕಗೊಂಡು ಮಗುವನ್ನು ರಕ್ಷಿಸಲು ಧಾವಿಸಿದ್ದು, ತಕ್ಷಣವೇ ಗುಬ್ಬಿ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಿದರು. ಆದರೆ ಗಾಯಗಳ ತೀವ್ರತೆಗೆ ಮಗು ಮಾರ್ಗ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದು, ವೈದ್ಯರು ಮೃತ ಎಂದು ಘೋಷಿಸಿದರು.

ಘಟನೆಯ ನಂತರ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಮಗುವಿನ ಅಕಾಲಿಕ ಮರಣದಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಪೋಷಕರ ದುಃಖ ಗ್ರಾಮಸ್ಥರ ಕಣ್ಣೀರು ತರಿಸಿದೆ. ಸ್ಥಳೀಯರು ರಸ್ತೆ ಸುರಕ್ಷತೆ ಮತ್ತು ವೇಗ ನಿಯಂತ್ರಣದ ಅಗತ್ಯತೆಯನ್ನು ಒತ್ತಿ ಹೇಳಿದ್ದಾರೆ.

ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಗುಬ್ಬಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೆ ಕಾರಣವಾದ ಕಾರು ಮತ್ತು ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕಾರಿನ ವೇಗ, ಚಾಲಕನ ನಿರ್ಲಕ್ಷ್ಯ ಸೇರಿದಂತೆ ಎಲ್ಲಾ ಅಂಶಗಳನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

https://www.newsics.com/2026/04/20/fire-breaks-out-at-oil-refinery-to-be-inaugurated-by-pm-modi-tomorrow/

TAGGED:Electric car runs over boy playing – 13-year-old boy dies on the spot
Share This Article
Facebook Twitter Copy Link Print
Previous Article ಪ್ರಧಾನಿ ಮೋದಿ ನಾಳೆ ಉದ್ಘಾಟಿಸಲಿದ್ದ ತೈಲ ಸಂಸ್ಕರಣಾ ಘಟಕದಲ್ಲಿ ಬೆಂಕಿ ಅವಘಡ
Next Article ಕುಡಿತ ನನ್ನ ಜೀವನದ ವಿಲನ್ ಆಗಿಬಿಟ್ಟಿತ್ತು : ನಟಿ ಜಾನ್ವಿ ಕಪೂರ್

Popular Posts

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read

You Might Also Like

ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read
ಪ್ರಮುಖಪಂಚಾಂಗ

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?